ಅಸ್ಸಾಂನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ

ಅಸ್ಸಾಂನ ಸಿಲ್ಚಾರ್ ಬೈಪಾಸ್‌ನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು, ಆಕೆ ಮದುವೆಯಾಗಲಿದ್ದ ಹುಡುಗನ ಮುಂದೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. 28 ವರ್ಷದ ಮಹಿಳೆ ತನ್ನ ಗೆಳೆಯನೊಂದಿಗೆ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದಾಗ ಚಾಕು ತೋರಿಸಿ ಹಲವಾರು ಪುರುಷರು ಆಕೆಯ ಮೇಲೆ ಅತ್ಯಾಚಾರ ಎಸಗಿ, ಯುವತಿಯಿಂದ 10 ಸಾವಿರ ರೂ. ಹಣವನ್ನು ಕೂಡ ಸುಲಿಗೆ ಮಾಡಿದ್ದಾರೆ.

ಅಸ್ಸಾಂನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ
Woman Abuse

Updated on: Feb 25, 2026 | 6:42 PM

ಗುವಾಹಟಿ, ಫೆಬ್ರವರಿ 25: ಅಸ್ಸಾಂನ (Assam) ಸಿಲ್ಚಾರ್ ಬೈಪಾಸ್‌ನಲ್ಲಿ ರಾತ್ರಿ ತನ್ನ ಭಾವಿ ಪತಿಯೊಂದಿಗೆ ಲಾಂಗ್ ಡ್ರೈವ್ ಹೋಗಿದ್ದ 28 ವರ್ಷದ ಯುವತಿಗೆ ಆ ರಾತ್ರಿ ದುಃಸ್ವಪ್ನವಾಗಿ ಮಾರ್ಪಟ್ಟಿತು. ಆಕೆಯ ಜೊತೆ ನಿಶ್ಚಿತಾರ್ಥವಾದ ಹುಡುಗನ ಮುಂದೆ ಯುವಕರ ಗುಂಪೊಂದು ಆಕೆಯನ್ನು ಕಾರಿನಿಂದ ಹೊರಗೆ ಎಳೆದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ. ಅಲ್ಲದೆ, 10,000 ರೂ. ಹಣ ನೀಡುವಂತೆ ಆಕೆಯನ್ನು ಒತ್ತಾಯಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಯುವತಿಯ ಹೇಳಿಕೆಯ ಪ್ರಕಾರ, ಈ ಘಟನೆ ಫೆಬ್ರವರಿ 19ರ ರಾತ್ರಿ ನಡೆದಿದೆ. ಆಕೆ ಮತ್ತು ಆಕೆಯ ಭಾವಿ ಪತಿ ಸಿಲ್ಚಾರ್‌ನ ರಾಮನಗರ ಬೈಪಾಸ್ ರಸ್ತೆಯ ಮೂಲಕ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ. 7 ಜನರು ಒಬ್ಬರಾದ ನಂತರ ಒಬ್ಬರು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ನಂತರ 10,000 ರೂ.ಗಳನ್ನು ತಮ್ಮ ಖಾತೆಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಡ್ರಗ್ಸ್, ಅತ್ಯಾಚಾರ, ಮತಾಂತರ; ಭೋಪಾಲ್​​ನ ಅಕ್ಕ-ತಂಗಿಯರ ಲೈಂಗಿಕ ಜಾಲ ಪತ್ತೆ

ಪೊಲೀಸರ ಪ್ರಕಾರ, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆಕೆಯ ಹೇಳಿಕೆಯನ್ನು ಸಹ ದಾಖಲಿಸಲಾಗಿದೆ. ಸಾವಿರಾರು ಸ್ಥಳೀಯರು ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ಸೇರಿದಂತೆ ರಾಜಕೀಯ ನಾಯಕರು ಸಹ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us