ದೆಹಲಿಯ ಮೊಹಲ್ಲಾ ಕ್ಲಿನಿಕ್ ವೈದ್ಯರು ಬರೆದುಕೊಟ್ಟ ಕೆಮ್ಮು ನಿವಾರಕ ಔಷಧಿ ಸೇವಿಸಿ ಮೂರು ಮಕ್ಕಳು ಸಾವು

ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜೀನಾಮೆ ನೀಡಬೇಕು ಮತ್ತು ಮೂವರು ಮಕ್ಕಳ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಒತ್ತಾಯಿಸಿವೆ.

ದೆಹಲಿಯ ಮೊಹಲ್ಲಾ ಕ್ಲಿನಿಕ್ ವೈದ್ಯರು ಬರೆದುಕೊಟ್ಟ ಕೆಮ್ಮು ನಿವಾರಕ ಔಷಧಿ ಸೇವಿಸಿ ಮೂರು ಮಕ್ಕಳು ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Dec 21, 2021 | 10:38 AM

ದೆಹಲಿ: ಮೊಹಲ್ಲಾ ಕ್ಲಿನಿಕ್(mohalla clinic) ವೈದ್ಯರು ನೀಡಿದ್ದ ಕೆಮ್ಮು ನಿವಾರಕ ಔಷಧಿ (Cough Syrup) ಸೇವಿಸಿ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ದೆಹಲಿಯ ಕಲಾವತಿ ಸರನ್ ಮಕ್ಕಳ ಆಸ್ಪತ್ರೆಯಲ್ಲಿ(Kalawati Saran Children’s Hospital) ನಡೆದಿದೆ. ಮೂವರು ವೈದ್ಯರ ಸೇವೆಯನ್ನು ವಜಾಗೊಳಿಸಿ ತನಿಖೆಗೆ ಆದೇಶಿಸುವಂತೆ ದೆಹಲಿ ಸರ್ಕಾರ ಸೂಚಿಸಿದೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ( Satyendar Jain) ರಾಜೀನಾಮೆ ನೀಡಬೇಕು ಮತ್ತು ಮೂವರು ಮಕ್ಕಳ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಒತ್ತಾಯಿಸಿವೆ. ಅಧಿಕಾರಿಗಳ ಪ್ರಕಾರ, ಕೇಂದ್ರದ ಕಲಾವತಿ ಸರನ್ ಮಕ್ಕಳ ಆಸ್ಪತ್ರೆಯು ಜೂನ್ 29 ರಿಂದ ನವೆಂಬರ್ 21 ರವರೆಗೆ ಒಂದರಿಂದ ಆರು ವರ್ಷದೊಳಗಿನ ಮಕ್ಕಳಲ್ಲಿ ಡೆಕ್ಸ್ಟ್ರೋಮೆಥಾರ್ಫಾನ್ (dextromethorphan)ವಿಷದ 16 ಪ್ರಕರಣಗಳನ್ನು ವರದಿ ಮಾಡಿದೆ.”ಹೆಚ್ಚಿನ ಮಕ್ಕಳು ಉಸಿರಾಟ ಕ್ಷೀಣದಿಂದ ಬಳಲುತ್ತಿದ್ದಾರೆ ಎಂದು ದೂರಿದ್ದಾರೆ. ಸಾವನ್ನಪ್ಪಿದ ಮೂವರು ಮಕ್ಕಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಆಸ್ಪತ್ರೆಯ ಹಿರಿಯ ವೈದ್ಯರು ಪಿಟಿಐಗೆ ತಿಳಿಸಿದ್ದಾರೆ.

ಮಕ್ಕಳ ಸಾವಿನ ಹಿನ್ನೆಲೆಯಲ್ಲಿ ನಗರಾಡಳಿತ ಮೂವರು ವೈದ್ಯರನ್ನು ವಜಾಗೊಳಿಸಿದೆ ಎಂದು ಆರೋಗ್ಯ ಸಚಿವ ಜೈನ್ ಹೇಳಿದ್ದಾರೆ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಕಲಾವತಿ ಸರನ್ ಆಸ್ಪತ್ರೆಯಲ್ಲಿ ಕೆಲವು ದಿನಗಳ ಹಿಂದೆ ಔಷಧ ಸೇವನೆಯಿಂದ ಮೂವರು ಮಕ್ಕಳು ಮೃತಪಟ್ಟಿದ್ದು, ವಿಷಯ ತಿಳಿದ ತಕ್ಷಣ ಮೂವರು ವೈದ್ಯರ ಸೇವೆಯನ್ನು ವಜಾಗೊಳಿಸಿ ತನಿಖೆಗೆ ಆದೇಶಿಸಿದ್ದೇವೆ. ಘಟನೆಯ ಬಗ್ಗೆ ದೆಹಲಿ ವೈದ್ಯಕೀಯ ಮಂಡಳಿಗೆ ದೂರು ನೀಡಿದ್ದೇವೆ ಎಂದು ಸಚಿವರು ಹೇಳಿದರು. ದೆಹಲಿ ಸರ್ಕಾರ ಸೋಮವಾರ ನಾಲ್ಕು ಸದಸ್ಯರ ತನಿಖಾ ಸಮಿತಿಯನ್ನು ಸಹ ರಚಿಸಿದೆ. ಚೀಫ್ ಡಿಸ್ಟ್ರಿಕ್ಟ್ ಮೆಡಿಕಲ್ ಆಫೀಸರ್ (ಆಗ್ನೇಯ ದೆಹಲಿ) ಡಾ. ಗೀತಾ ಸಮಿತಿಯ ಮುಖ್ಯಸ್ಥರಾಗಿದ್ದು, ಏಳು ದಿನಗಳಲ್ಲಿ ವರದಿಯನ್ನು ಸಲ್ಲಿಸಲು ಕೇಳಲಾಗಿದೆ.

ಆಸ್ಪತ್ರೆಯ ಆಡಳಿತವು ಜುಲೈ 1 ರಂದು ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ದೆಹಲಿ ಸರ್ಕಾರಕ್ಕೆ ಈ ವಿಷಯವನ್ನು ವರದಿ ಮಾಡಿದೆ. ಸಚಿವಾಲಯವು ಅಕ್ಟೋಬರ್ ಅಂತ್ಯದಲ್ಲಿ ಈ ವಿಷಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿತು ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ.

ಡೆಕ್ಸ್ಟ್ರೋಮೆಥೋರ್ಫಾನ್ ಅತ್ಯಂತ ವ್ಯಾಪಕವಾಗಿ ಬಳಸಲಾಗುವ ಕೆಮ್ಮು ನಿವಾರಕಗಳಲ್ಲಿ ಒಂದಾಗಿದೆ. ಆದಾಗ್ಯೂ, ಇದು ದುರುಪಯೋಗಕ್ಕೆ ಒಳಗಾಗುತ್ತದೆ. ಔಷಧದ ಹೆಚ್ಚಿನ ಪ್ರಮಾಣದ ಸೇವನೆಯು ನಿದ್ರಾಹೀನತೆ, ಹಿಗ್ಗಿದ ಕಣ್ಣು, ತಲೆತಿರುಗುವಿಕೆ, ವಾಕರಿಕೆ, ಚಡಪಡಿಕೆ, ನಿಧಾನವಾದ ಉಸಿರಾಟ ಮತ್ತು ಅತಿಸಾರ ಇತ್ಯಾದಿಗಳಿಗೆ ಕಾರಣವಾಗಬಹುದು.

ಡಿಸೆಂಬರ್ 7 ರಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧೀನದಲ್ಲಿರುವ ಡೈರೆಕ್ಟರೇಟ್ ಜನರಲ್ ಹೆಲ್ತ್ ಸರ್ವಿಸಸ್‌ನ ಡಾ.ಸುನೀಲ್ ಕುಮಾರ್ ಅವರು ದೆಹಲಿ ಸರ್ಕಾರಕ್ಕೆ ಪತ್ರ ಬರೆದಿದ್ದು, ಡಿಸ್ಪೆನ್ಸರಿಗಳು ಮತ್ತು ಮೊಹಲ್ಲಾ ಚಿಕಿತ್ಸಾಲಯಗಳಲ್ಲಿ ವೈದ್ಯರು 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಡೆಕ್ಸ್ಟ್ರೋಥೋರ್ಫಾನ್ ಅನ್ನು ಶಿಫಾರಸು ಮಾಡುವುದನ್ನು ನಿಲ್ಲಿಸುವಂತೆ ಕೇಳಿಕೊಂಡರು. ಸಾರ್ವಜನಿಕ ಹಿತಾಸಕ್ತಿಯಿಂದ ಒಮೆಗಾ ಫಾರ್ಮಾ ತಯಾರಿಸಿದ ಔಷಧವನ್ನು ಹಿಂಪಡೆಯುವಂತೆ ಡಾ ಕುಮಾರ್ ಸರ್ಕಾರಕ್ಕೆ ಸೂಚಿಸಿದರು.

ಕಲಾವತಿ ಸರನ್ ಮಕ್ಕಳ ಆಸ್ಪತ್ರೆಯಲ್ಲಿ 16 ಡೆಕ್ಸ್ಟ್ರೋಮೆಥೋರ್ಫಾನ್ ವಿಷದ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಮೂರು ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಈ ಮೂಲಕ ತಿಳಿಸಲಾಗಿದೆ. ಈ ಮಕ್ಕಳಿಗೆ ದೆಹಲಿ ಸರ್ಕಾರದ ಮೊಹಲ್ಲಾ ಚಿಕಿತ್ಸಾಲಯಗಳು ಡೆಕ್ಸ್ಟ್ರೋಮೆಥೋರ್ಫಾನ್ ಔಷಧವನ್ನು ಶಿಫಾರಸು ಮಾಡಿದ್ದು, ಕಿರಿಮಕ್ಕಳ ವಯಸ್ಸಿಗೆ ಈ ಔಷಧವನ್ನು ಕಟ್ಟುನಿಟ್ಟಾಗಿ ಶಿಫಾರಸು ಮಾಡಬಾರದು ಎಂದು ಪತ್ರದಲ್ಲಿ ಹೇಳಲಾಗಿದೆ.

ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಹೆಚ್ಚು ಪ್ರಚಾರ ಪಡೆದ ವಿಶ್ವ ದರ್ಜೆಯ ಮೊಹಲ್ಲಾ ಚಿಕಿತ್ಸಾಲಯಗಳ ಕಟುವಾದ ವಾಸ್ತವವು ಎಲ್ಲರ ಮುಂದೆ ಹೊರಬಂದಿದೆ ಎಂದು ಹೇಳಿದರು. ಕೇಜ್ರಿವಾಲ್ ಮತ್ತು ಜೈನ್ ರಾಜೀನಾಮೆ ನೀಡಬೇಕು ಮತ್ತು ಮೃತ ಮಕ್ಕಳ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು. ಮೃತ ಮೂರು ಮಕ್ಕಳ ಕುಟುಂಬಕ್ಕೆ ₹ 1 ಕೋಟಿ ಪರಿಹಾರ ಹಾಗೂ ಇತರ 13 ಮಕ್ಕಳಿಗೆ ₹ 10 ಲಕ್ಷ ಧನಸಹಾಯ ನೀಡಬೇಕು ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ:  ಗೋವಾದಲ್ಲಿ ಎಎಪಿ ಅಧಿಕಾರಕ್ಕೇರಿದರೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ತಿಂಗಳಿಗೆ ₹1000 ನೀಡುತ್ತೇವೆ : ಅರವಿಂದ ಕೇಜ್ರಿವಾಲ್

Published On - 10:20 am, Tue, 21 December 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್