ಮತ್ತೆ ಮತಿಗೇಡಿ ಉಗ್ರರ ಅಟ್ಟಹಾಸ, ಮೂವರು CRPF ಯೋಧರು ಹುತಾತ್ಮ

ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರಾದಲ್ಲಿ ಗುಂಡಿನ ದಾಳಿಯಲ್ಲಿ ಯೋಧರು ಹುತಾತ್ಮರಾದ ಘಟನೆ ಮಾಸುವ ಮುನ್ನವೇ ಮತಿಗೇಡಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಉಗ್ರರ ಆತ್ಮಹುತಿ‌ ದಾಳಿಯಲ್ಲಿ ಮೂವರು ಸಿಆರ್​ಪಿಎಫ್​ ಯೋಧರು ಹುತಾತ್ಮರಾಗಿದ್ದಾರೆ. ಕಳೆದ 2 ದಿನಗಳ ಅಂತರದಲ್ಲಿ 2ನೇ ಬಾರಿಗೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 7 ಮಂದಿ ನಾಗರಿಕರಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಳಿಯಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆಯೂ ಹೊಡೆದುರುಳಿಸಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಮತ್ತೆ ಮತಿಗೇಡಿ ಉಗ್ರರ ಅಟ್ಟಹಾಸ, ಮೂವರು CRPF ಯೋಧರು ಹುತಾತ್ಮ
ಸಾಧು ಶ್ರೀನಾಥ್​

Updated on: May 04, 2020 | 7:35 PM

ಶ್ರೀನಗರ: ಉತ್ತರ ಕಾಶ್ಮೀರದ ಹಂದ್ವಾರಾದಲ್ಲಿ ಗುಂಡಿನ ದಾಳಿಯಲ್ಲಿ ಯೋಧರು ಹುತಾತ್ಮರಾದ ಘಟನೆ ಮಾಸುವ ಮುನ್ನವೇ ಮತಿಗೇಡಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಉಗ್ರರ ಆತ್ಮಹುತಿ‌ ದಾಳಿಯಲ್ಲಿ ಮೂವರು ಸಿಆರ್​ಪಿಎಫ್​ ಯೋಧರು ಹುತಾತ್ಮರಾಗಿದ್ದಾರೆ.

ಕಳೆದ 2 ದಿನಗಳ ಅಂತರದಲ್ಲಿ 2ನೇ ಬಾರಿಗೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 7 ಮಂದಿ ನಾಗರಿಕರಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಳಿಯಲ್ಲಿ ಓರ್ವ ಉಗ್ರನನ್ನು ಭಾರತೀಯ ಸೇನೆಯೂ ಹೊಡೆದುರುಳಿಸಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

Published On - 7:34 pm, Mon, 4 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us