ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ, 3 ಮಂದಿ ಸಾವು, 9 ಜನರಿಗೆ ಗಾಯ
ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿರುವ ಘಟನೆ ಕೇರಳದಲ್ಲಿ ನಡೆದಿದೆ. ಎಕ್ಸ್‌ಪ್ರೆಸ್ ರೈಲಿಗೆ ಹತ್ತುವ ವಿಚಾರವಾಗಿ ನಡೆದ ಜಗಳದ ಬಳಿಕ ಓರ್ವ ವ್ಯಕ್ತಿ ಮತ್ತೊಬ್ಬ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ್ದಾರೆ.
ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿರುವ ಘಟನೆ ಕೇರಳದಲ್ಲಿ ನಡೆದಿದೆ. ಎಕ್ಸ್‌ಪ್ರೆಸ್ ರೈಲಿಗೆ ಹತ್ತುವ ವಿಚಾರವಾಗಿ ನಡೆದ ಜಗಳದ ಬಳಿಕ ಓರ್ವ ವ್ಯಕ್ತಿ ಮತ್ತೊಬ್ಬ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ್ದಾರೆ. ಕಾಲ್ತುಳಿತ ಮತ್ತು ಸುಟ್ಟ ಗಾಯಗಳಿಂದ 3 ಮಂದಿ ಸಾವನ್ನಪ್ಪಿದ್ದಾರೆ ಮತ್ತು 9 ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಮಹಿಳೆ ಮತ್ತು ಮಗು ಕೂಡ ಸೇರಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಂಕಿ ಹಚ್ಚಿದ್ದ ವ್ಯಕ್ತಿ ರೈಲಿನ ಚೈನ್ ಎಳೆದು ಪರಾರಿಯಾಗಿದ್ದಾರೆ.
ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಆರೋಪಿ ಇನ್ನೂ ಪತ್ತೆಯಾಗಿಲ್ಲ. ಮೂಲಗಳ ಪ್ರಕಾರ, ರಾತ್ರಿ 9.45 ರ ಸುಮಾರಿಗೆ ರೈಲು ಕೋಳಿಕ್ಕೋಡ್ ಪಟ್ಟಣವನ್ನು ದಾಟಿ ಕೊರಪುಳ ರೈಲ್ವೆ ಸೇತುವೆಯನ್ನು ತಲುಪಿದಾಗ ಈ ಘಟನೆ ಸಂಭವಿಸಿದೆ.
ಘಟನೆಯ ಬಗ್ಗೆ ಪ್ರಯಾಣಿಕರು ರೈಲ್ವೆ ರಕ್ಷಣಾ ಪಡೆಗೆ (ಆರ್‌ಪಿಎಫ್) ಮಾಹಿತಿ ನೀಡಿ ಬೆಂಕಿ ನಂದಿಸಿದ್ದಾರೆ. ರೈಲಿನಲ್ಲಿದ್ದ ವ್ಯಕ್ತಿಯೊಬ್ಬ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ನಂತರ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಆರ್‌ಪಿಎಫ್‌ಗೆ ಮಾಹಿತಿ ನೀಡಲಾಯಿತು. ಕೆಲವು ಗಂಟೆಗಳ ನಂತರ, ಎಲತ್ತೂರು ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಒಂದು ವರ್ಷದ ಮಗು ಮತ್ತು ಮಹಿಳೆ ಸೇರಿದಂತೆ ಮೂವರ ಶವಗಳು ಪತ್ತೆಯಾಗಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ