ಉತ್ತರ ಪ್ರದೇಶದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವು; ಸರ್ಕಾರದಿಂದ 4 ಲಕ್ಷ ರೂ. ಪರಿಹಾರ ಘೋಷಣೆ

ಕಟ್ಟಡದ ಮೇಲ್ಛಾವಣಿ ಕುಸಿದ ನಂತರ ಮೂವರ ದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆಯಲಾಯಿತು. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಕ್ಕಪಕ್ಕದ ಮನೆಗಳನ್ನು ತೆರವು ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವು; ಸರ್ಕಾರದಿಂದ 4 ಲಕ್ಷ ರೂ. ಪರಿಹಾರ ಘೋಷಣೆ
ಉತ್ತರ ಪ್ರದೇಶದಲ್ಲಿ ಮನೆಯ ಮೇಲ್ಛಾವಣಿ ಕುಸಿತ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 19, 2022 | 10:06 AM

ನವದೆಹಲಿ: ಉತ್ತರ ಪ್ರದೇಶದ ಡಿಯೋರಿಯಾದಲ್ಲಿ (Deoria) ಇಂದು (ಸೋಮವಾರ) 2 ಅಂತಸ್ತಿನ ಕಟ್ಟಡದ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಆ ಮನೆಯಲ್ಲಿ ವಾಸವಾಗಿದ್ದ ಒಂದೇ ಕುಟುಂಬದ ಮೂರು ಮಂದಿಯೂ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮೂವರನ್ನು ದಿಲೀಪ್ (35), ಚಾಂದಿನಿ (30) ಮತ್ತು ಅವರ 2 ವರ್ಷದ ಮಗಳು ಎಂದು ಗುರುತಿಸಲಾಗಿದೆ.

ಕಟ್ಟಡದ ಮೇಲ್ಛಾವಣಿ ಕುಸಿದ ನಂತರ ಮೂವರ ದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆಯಲಾಯಿತು. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಕ್ಕಪಕ್ಕದ ಮನೆಗಳನ್ನು ತೆರವು ಮಾಡಿದ್ದಾರೆ. ಮೇಲ್ಛಾವಣಿ ಹೇಗೆ ಕುಸಿದಿದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಲಕ್ನೋದಲ್ಲಿ ಸುರಿದ ಧಾರಾಕಾರ ಮಳೆಗೆ ನಿರ್ಮಾಣ ಹಂತದ ಗೋಡೆ ಕುಸಿತ, 9 ಮಂದಿ ಸಾವು

ಕಳೆದ 2-3 ದಿನಗಳಿಂದ ಡಿಯೋರಿಯಾ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಹಾಗೇ, ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಪರಿಹಾರ ಮೊತ್ತವನ್ನು ವಿಪತ್ತು ಪರಿಹಾರ ನಿಧಿಯಿಂದ ನೀಡುವಂತೆ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ