ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು

ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ.

ವಿದ್ಯುತ್​ ಅವಘಡದಿಂದ ದಂಪತಿಯನ್ನು ಪಾರು ಮಾಡಲು ಬಂದ ಪಕ್ಕದ ಮನೆಯಾತ; ಮೂವರೂ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jun 15, 2021 | 11:33 AM

ಕೇರಳದ ಕೊಲ್ಲಂ ಜಿಲ್ಲೆಯ ಪ್ರಕ್ಕುಲಂ ಎಂಬಲ್ಲಿ ವಿದ್ಯುತ್​ ಶಾಕ್​ ಹೊಡೆದು ಮೂವರು ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಸಂತೋಷ್ (45), ಇವರ ಪತ್ನಿ ರಾಮ್​ಲತಾ (42) ಮತ್ತು ಇವರ ನೆರಮನೆಯ ಶ್ಯಾಮ್​ಕುಮಾರ್​(35) ಮೃತರು.

ಅಂಚಲುಮಮ್ಮೂಡ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ರಾತ್ರಿ ಈ ದಂಪತಿಯ ಮನೆಯಲ್ಲಿ ಅವಘಡ ಸಂಭವಿಸಿದೆ. ಅಂದು ಬಾತ್​ರೂಂನಿಂದ ಹೊರಬರಬೇಕಿದ್ದರೆ ರಾಮಲತಾ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಎದ್ದುನಿಲ್ಲಲು ಪ್ರಯತ್ನಿಸಿದ ಅವರು, ವಿದ್ಯುತ್ ಪ್ರವಹಿಸುತ್ತಿದ್ದ ವೈರ್​​ನ್ನು ಹಿಡಿದಿದ್ದಾರೆ. ಕೂಡಲೇ ಪತ್ನಿಯನ್ನು ಕಾಪಾಡಲು ಹೋದ ಸಂತೋಷ್​​ಗೆ ಕೂಡ ವಿದ್ಯುತ್​ ತಗುಲಿದೆ. ಈ ದಂಪತಿಯ ಚೀರಾಟ ಕೇಳಿ ಓಡಿ ಬಂದ ಶ್ಯಾಮ್​ಕುಮಾರ್​ ದಂಪತಿಯನ್ನು ಕಾಪಾಡಲು ಮುಂದಾದರು. ಆದರೆ ದುರದೃಷ್ಟಕ್ಕೆ ಅವರೂ ಸಹ ಶಾಕ್​ಗೆ ಒಳಗಾಗಿದ್ದಾರೆ. ಮೂವರೂ ಮೃತಪಟ್ಟಿದ್ದಾರೆ. ಈ ದಂಪತಿಗೆ ಪುಟ್ಟ ಮಕ್ಕಳಿದ್ದು, ಶ್ಯಾಮ್​ಕುಮಾರ್​ಗೆ ಪತ್ನಿ, ಮಕ್ಕಳಿದ್ದಾರೆ.

ಇದನ್ನೂ ಓದಿ: ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಗ್ರಿನ್ ಸಿಗ್ನಲ್ ನೀಡಿದ ತಾಂತ್ರಿಕ ಸಲಹಾ ಸಮಿತಿ: ಏನಿರುತ್ತೆ, ಏನಿರುವುದಿಲ್ಲ? ಇಲ್ಲಿದೆ ವಿವರ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ