ಕಡಲ ಗಡಿ ರೇಖೆ ದಾಟಿದ್ದಕ್ಕೆ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಮೂವರು ಮೀನುಗಾರರ ಬಂಧನ

ತಮಿಳುನಾಡಿನ ಸುಮಾರು 45 ಭಾರತೀಯ ಮೀನುಗಾರರು ಶ್ರೀಲಂಕಾ ಅಧಿಕಾರಿಗಳ ವಶದಲ್ಲಿದ್ದಾರೆ. 2022ರ ಜನವರಿಯಿಂದ ತಮಿಳುನಾಡಿನ 87 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಸುಮಾರು 42 ಜನರನ್ನು ಬಿಡುಗಡೆ ಮಾಡಲಾಗಿದೆ.

ಕಡಲ ಗಡಿ ರೇಖೆ ದಾಟಿದ್ದಕ್ಕೆ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಮೂವರು ಮೀನುಗಾರರ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Mar 31, 2022 | 7:29 PM

ಚೆನ್ನೈ: ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು (IMBL) ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸಿದ್ದಕ್ಕಾಗಿ ತಮಿಳುನಾಡಿನ ಪುದುಕೊಟ್ಟೈ ಮೂಲದ ಮೂವರು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಬುಧವಾರ ತಡರಾತ್ರಿ ಮೀನುಗಾರರನ್ನು ಬಂಧಿಸಿದ್ದಲ್ಲದೆ ಶ್ರೀಲಂಕಾದವರು ಯಾಂತ್ರೀಕೃತ ಮೀನುಗಾರಿಕೆ ದೋಣಿಯನ್ನೂ ವಶಪಡಿಸಿಕೊಂಡಿದ್ದಾರೆ ಎಂದು ತಮಿಳುನಾಡು ಮೀನುಗಾರಿಕೆ ಇಲಾಖೆ ಹೊರಡಿಸಿದ ಹೇಳಿಕೆ ತಿಳಿಸಿದೆ.

ಈ ಘಟನೆಗೆ ಮೀನುಗಾರರ ಸಂಘಗಳು ಆಕ್ರೋಶ ವ್ಯಕ್ತಪಡಿಸಿವೆ. ರಾಮನಾಥಪುರಂನಲ್ಲಿರುವ ಮೀನುಗಾರರ ಸಂಘದ ಮುಖಂಡ ಜೆ. ಜೇಸುದಾಸ್ ಐಎಎನ್‌ಎಸ್‌ಗೆ ಪ್ರತಿಕ್ರಿಯೆ ನೀಡಿದ್ದು, “ಇದು ನಿಜವಾಗಿಯೂ ಆಕ್ಷೇಪಾರ್ಹವಾಗಿದೆ. ನಮ್ಮ ಸರ್ಕಾರವು ಶ್ರೀಲಂಕಾದವರಿಗೆ ಬಿಕ್ಕಟ್ಟಿನ ಸಂದರ್ಭದಲ್ಲಿ ಬೆಂಬಲ ನೀಡುತ್ತಿದೆ. ಆದರೆ, ಅವರು ಭಾರತೀಯನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ. ಶ್ರೀಲಂಕನ್ನರು ನಮ್ಮ ಮೀನುಗಾರರನ್ನು ಬಂಧಿಸಿ ನಮ್ಮ ಬೆಲೆಬಾಳುವ ದೋಣಿಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಇದು ಸ್ವೀಕಾರಾರ್ಹವಲ್ಲ. ತಮಿಳುನಾಡು ಸರ್ಕಾರವು ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇದರಿಂದ ಜನರು ಈಗ ಸಮುದ್ರಕ್ಕೆ ಹೋಗಲು ಹೆದರುತ್ತಿದ್ದಾರೆ ಮತ್ತು ಹಲವಾರು ಮೀನುಗಾರಿಕಾ ಕುಗ್ರಾಮಗಳು ಕಡು ಬಡತನದಲ್ಲಿವೆ ಎಂದಿದ್ದಾರೆ.

ವಿಶೇಷವೆಂದರೆ, ಶ್ರೀಲಂಕಾ ನೌಕಾಪಡೆಯು ಈ ವಾರವೇ ತಮಿಳುನಾಡಿನ ನಾಲ್ವರು ಭಾರತೀಯ ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ದೋಣಿಗಳನ್ನು ಸಹ ವಶಪಡಿಸಿಕೊಂಡಿದೆ. 2022ರ ಜನವರಿಯಿಂದ ತಮಿಳುನಾಡಿನ 87 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಸುಮಾರು 42 ಜನರನ್ನು ಬಿಡುಗಡೆ ಮಾಡಲಾಗಿದೆ.

ತಮಿಳುನಾಡಿನ ಸುಮಾರು 45 ಭಾರತೀಯ ಮೀನುಗಾರರು ಶ್ರೀಲಂಕಾ ಅಧಿಕಾರಿಗಳ ವಶದಲ್ಲಿದ್ದಾರೆ. ಬುಧವಾರ ನಾಗಪಟ್ಟನಂನಲ್ಲಿ ಭಾರತೀಯ ಸಮುದ್ರದ ನೀರನ್ನು ದಾಟಿದ ಶ್ರೀಲಂಕಾದ ಮೀನುಗಾರನನ್ನು ಭಾರತೀಯ ಕೋಸ್ಟ್ ಗಾರ್ಡ್ ವಶಕ್ಕೆ ತೆಗೆದುಕೊಂಡಿತ್ತು.

ಇದನ್ನೂ ಓದಿ: Sagarmala: ಸಾಗರಮಾಲಾ ಯೋಜನೆಗೆ ಮೀನುಗಾರರಿಂದ ವಿರೋಧ; ಶಾಸಕಿ ರೂಪಾಲಿ ನಾಯ್ಕ್ ಜೊತೆ ಮಾತಿನ ಚಕಮಕಿ

ಗುಜರಾತ್​ನ ಭುಜ್​ನಲ್ಲಿ ಇಂದು ಮತ್ತೆ 7 ಪಾಕಿಸ್ತಾನಿ ಮೀನುಗಾರಿಕಾ ಬೋಟ್​ಗಳು ವಶಕ್ಕೆ

Published On - 7:29 pm, Thu, 31 March 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್