ಜಮ್ಮು ಕಾಶ್ಮೀರದಲ್ಲಿ ಕಾರು ಕಂದಕಕ್ಕೆ ಉರುಳಿ ಮೂವರು ಅಧಿಕಾರಿಗಳ ದುರ್ಮರಣ

ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಈ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಕಾರು ಕಂದಕಕ್ಕೆ ಉರುಳಿ ಮೂವರು ಅಧಿಕಾರಿಗಳ ದುರ್ಮರಣ
ಜಮ್ಮು ಕಾಶ್ಮೀರದ ಪೊಲೀಸ್
Edited By:

Updated on: Nov 14, 2022 | 3:45 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ದೋಡಾ ಜಿಲ್ಲೆಯಲ್ಲಿ ಸೋಮವಾರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಮೂವರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ (Accident) ಒಬ್ಬರು ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಈ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ವಾಹನವು ರಸ್ತೆ ಮತ್ತು ಕಟ್ಟಡ ಇಲಾಖೆಯ ತಂಡದ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದಾಗ ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಅಸ್ಸಾರ್ ಬಳಿ ಇಂದು ಬೆಳಿಗ್ಗೆ 10.45ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಸ್ಟೇಷನ್ ಹೌಸ್ ಅಧಿಕಾರಿ ಭುವಿಂದರ್ ಕೊತ್ವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಜಮ್ಮು ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ; ಮೂವರು ಸಾವು, 17 ಜನರಿಗೆ ಗಾಯ

ಅಧಿಕಾರಿಗಳಿದ್ದ ವಾಹನವು 200 ಮೀಟರ್ ಆಳದ ಕಮರಿಗೆ ಉರುಳಿದ್ದು, ಪೂಂಚ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ರಫೀಕ್ ಶಾ, ಉಧಂಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರಿಂಗ್ ಕಮಲ್ ಕಿಶೋರ್ ಶರ್ಮಾ ಮತ್ತು ದೋಡಾದ ಚಾಲಕ ಮೊಹಮ್ಮದ್ ಹಫೀಜ್ ಸಾವನ್ನಪ್ಪಿದ್ದಾರೆ.

ಈ ಅಪಘಾತದಲ್ಲಿ ಸೂಪರಿಂಟೆಂಡಿಂಗ್ ಇಂಜಿನಿಯರ್ ಸುರೇಶ್ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಮಂಜು ಮುಸುಕಿದ ವಾತಾವರಣ ಮತ್ತು ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ಅಧಿಕಾರಿಯನ್ನು ವಿಶೇಷ ಚಿಕಿತ್ಸೆಗಾಗಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us