AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ದಟ್ಟ ಮಂಜಿನಿಂದಾಗಿ 2 ವಾಹನಗಳ ನಡುವೆ ಡಿಕ್ಕಿ, 3 ಸಾವು, ಒಬ್ಬರಿಗೆ ಗಾಯ

ರಾಜಸ್ಥಾನದಲ್ಲಿ ದಟ್ಟವಾದ ಮಂಜಿನಿಂದಾಗಿ ಎರಡು ಕಾರುಗಳ ನಡುವೆ ಅಪಘಾತ ನಡೆದಿದ್ದು, ಘಟನೆಯಿಂದ ಮೂರು ಸಾವನ್ನಪ್ಪಿದ್ದಾರೆ. ಇದರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಸೋಮವಾರ ಬೆಳಿಗ್ಗೆ ದಟ್ಟವಾದ ಮಂಜಿನಿಂದಾಗಿ ತನೋಟ್ ಮಾತಾ ದೇವಸ್ಥಾನಕ್ಕೆ ಭೇಟಿ ನೀಡಿ ಕಾರಿನಲ್ಲಿ ಹಿಂತಿರುಗುತ್ತಿದ್ದ, ಇತ್ತ ಗುಜರಾತ್‌ನಿಂದ ಬರುತ್ತಿದ್ದ ನಾಲ್ವರು ಸ್ನೇಹಿತರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ರಾಜಸ್ಥಾನದಲ್ಲಿ ದಟ್ಟ ಮಂಜಿನಿಂದಾಗಿ 2 ವಾಹನಗಳ ನಡುವೆ ಡಿಕ್ಕಿ, 3 ಸಾವು, ಒಬ್ಬರಿಗೆ ಗಾಯ
ಮುದ್ದೇಬಿಹಾಳದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವು (ಸಾಂದರ್ಭಿಕ ಚಿತ್ರ)
ಅಕ್ಷಯ್​ ಪಲ್ಲಮಜಲು​​
|

Updated on: Dec 25, 2023 | 4:35 PM

Share

ಜೈಪುರ್, ಡಿ.25: ಇಂದು ಬೆಳಿಗ್ಗೆ (ಡಿ.25) ರಾಜಸ್ಥಾನದಲ್ಲಿ ದಟ್ಟವಾದ ಮಂಜಿನಿಂದಾಗಿ ಎರಡು ಕಾರುಗಳ ನಡುವೆ ಅಪಘಾತ ನಡೆದಿದ್ದು, ಘಟನೆಯಿಂದ ಮೂರು ಸಾವನ್ನಪ್ಪಿದ್ದಾರೆ. ಇದರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಸೋಮವಾರ ಬೆಳಿಗ್ಗೆ ದಟ್ಟವಾದ ಮಂಜಿನಿಂದಾಗಿ ತನೋಟ್ ಮಾತಾ ದೇವಸ್ಥಾನಕ್ಕೆ ಭೇಟಿ ನೀಡಿ ಕಾರಿನಲ್ಲಿ ಹಿಂತಿರುಗುತ್ತಿದ್ದ, ಇತ್ತ ಗುಜರಾತ್‌ನಿಂದ ಬರುತ್ತಿದ್ದ ನಾಲ್ವರು ಸ್ನೇಹಿತರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ. ಗುಜರಾತಿನಿಂದ ಬಂದ ಕಾರಿನೊಳಗಿದ್ದ ನಾಲ್ವರು ಸ್ನೇಹಿತರಲ್ಲಿ ಮೂರು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ.

ಬಾರ್ಮರ್ ಜಿಲ್ಲೆಯ ಧೋರಿಮನ್ನಾ ಟೋಲ್ ಪ್ಲಾಜಾ ಬಳಿ ರಾಷ್ಟ್ರೀಯ ಹೆದ್ದಾರಿ-68ರಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಕಾರಿಗೆ ಡಿಕ್ಕಿ ಹೊಡೆದ ವಾಹನವನ್ನು ಪತ್ತೆ ಮಾಡಲಾಗುತ್ತಿದೆ. ರಸ್ತೆಯ ಸಿಸಿಟಿವಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: 2022ರಲ್ಲಿ ರಸ್ತೆ ಅಪಘಾತದಿಂದ ಮೃತಪಟ್ಟವರ ಸಂಖ್ಯೆ ದೆಹಲಿಯಲ್ಲೇ ಹೆಚ್ಚು

ಇನ್ನು ಸಾವನ್ನಪ್ಪಿರುವವರನ್ನು ವಿಷ್ಣು (50), ಜಿತಿನ್ (48) ಮತ್ತು ಜಿಗ್ನೇಶ್ ಕುಮಾರ್ (50) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದ್ದು. ಮನೆಯವರಿಗೆ ಘಟನೆಯ ಬಗ್ಗೆ ತಿಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More