ಜೈಪುರ್, ಡಿ.25: ಇಂದು ಬೆಳಿಗ್ಗೆ (ಡಿ.25) ರಾಜಸ್ಥಾನದಲ್ಲಿ ದಟ್ಟವಾದ ಮಂಜಿನಿಂದಾಗಿ ಎರಡು ಕಾರುಗಳ ನಡುವೆ ಅಪಘಾತ ನಡೆದಿದ್ದು, ಘಟನೆಯಿಂದ ಮೂರು ಸಾವನ್ನಪ್ಪಿದ್ದಾರೆ. ಇದರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಸೋಮವಾರ ಬೆಳಿಗ್ಗೆ ದಟ್ಟವಾದ ಮಂಜಿನಿಂದಾಗಿ ತನೋಟ್ ಮಾತಾ ದೇವಸ್ಥಾನಕ್ಕೆ ಭೇಟಿ ನೀಡಿ ಕಾರಿನಲ್ಲಿ ಹಿಂತಿರುಗುತ್ತಿದ್ದ, ಇತ್ತ ಗುಜರಾತ್‌ನಿಂದ ಬರುತ್ತಿದ್ದ ನಾಲ್ವರು ಸ್ನೇಹಿತರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ. ಗುಜರಾತಿನಿಂದ ಬಂದ ಕಾರಿನೊಳಗಿದ್ದ ನಾಲ್ವರು ಸ್ನೇಹಿತರಲ್ಲಿ ಮೂರು ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ.
ಬಾರ್ಮರ್ ಜಿಲ್ಲೆಯ ಧೋರಿಮನ್ನಾ ಟೋಲ್ ಪ್ಲಾಜಾ ಬಳಿ ರಾಷ್ಟ್ರೀಯ ಹೆದ್ದಾರಿ-68ರಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಕಾರಿಗೆ ಡಿಕ್ಕಿ ಹೊಡೆದ ವಾಹನವನ್ನು ಪತ್ತೆ ಮಾಡಲಾಗುತ್ತಿದೆ. ರಸ್ತೆಯ ಸಿಸಿಟಿವಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: 2022ರಲ್ಲಿ ರಸ್ತೆ ಅಪಘಾತದಿಂದ ಮೃತಪಟ್ಟವರ ಸಂಖ್ಯೆ ದೆಹಲಿಯಲ್ಲೇ ಹೆಚ್ಚು
ಇನ್ನು ಸಾವನ್ನಪ್ಪಿರುವವರನ್ನು ವಿಷ್ಣು (50), ಜಿತಿನ್ (48) ಮತ್ತು ಜಿಗ್ನೇಶ್ ಕುಮಾರ್ (50) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಲಾಗುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದ್ದು. ಮನೆಯವರಿಗೆ ಘಟನೆಯ ಬಗ್ಗೆ ತಿಳಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ