
ಮಂಡಿ: ಹಿಮಾಚಲ ಪ್ರದೇಶದ (Himachal Pradesh) ಮಂಡಿ ಎಂಬ ಪ್ರದೇಶದಲ್ಲಿ ಇಂದು (ಮಂಗಳವಾರ) ಮುಂಜಾನೆ ಟ್ರಕ್ (Truck Accident) ಒಂದು ಮನೆಗೆ ನುಗ್ಗಿದೆ. ಈ ಅಪಘಾತದ ಪರಿಣಾಮವಾಗಿ 3 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಂಡಿ ಜಿಲ್ಲಾ ಪೊಲೀಸರು ಮಾಹಿತಿ ನೀಡಿದ್ದಾರೆ.
ಇಂದು ಮುಂಜಾನೆ ಮಂಡಿಯಲ್ಲಿ ಮನೆಗೆ ಟ್ರಕ್ ಡಿಕ್ಕಿ ಹೊಡೆದಿದ್ದರಿಂದ 3 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಒಬ್ಬರು ಗಾಯಗೊಂಡಿದ್ದಾರೆ ಎಂದು ಮಂಡಿ ಜಿಲ್ಲಾ ಹೆಚ್ಚುವರಿ ಎಸ್ಪಿ ಆಶಿಶ್ ಶರ್ಮಾ ಮಾಹಿತಿ ನೀಡಿದ್ದಾರೆ.