ಗ್ರೇಟರ್ ನೋಯ್ಡಾದ ಎಕ್ಸ್ಪ್ರೆಸ್ ವೇನಲ್ಲಿ ಎರಡು ಬಸ್ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಮೂವರು ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ. ನೋಯ್ಡಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಹಾಸ್ ಎಲ್ಮೈ, 13 ಮಂದಿ ಗಾಯಗೊಂಡವರಲ್ಲಿ 9 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಗಾಯಗೊಂಡ 13 ಮಂದಿಯಲ್ಲಿ 9 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, 4 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು ಅವರನ್ನು ಭೇಟಿ ಮಾಡಿದ್ದೇವೆ, ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.
ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಲಾಗಿದೆ. ಅಪಘಾತದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಚರ್ಚೆಯ ನಂತರ ಪರಿಹಾರ ಮೊತ್ತವನ್ನು ಘೋಷಿಸಲಾಗುವುದು ಎಂದು ನೋಯ್ಡಾ ಡಿಎಂ ಎಎನ್ಐಗೆ ತಿಳಿಸಿದ್ದಾರೆ.
ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು
ಇನ್ನೊಂದು ರಸ್ತೆ ಅಪಘಾತ ಸಂಭವಿಸಿದ್ದು, ಉತ್ತರ ಪ್ರದೇಶದ ವಾರಣಾಸಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 13 ಜನರಿಗೆ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬಿಎಚ್‌ಯು ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಬಸ್ ಬಿಹಾರದ ಗಯಾದಿಂದ ವಾರಣಾಸಿಗೆ ಬರುತ್ತಿದ್ದು, ಚಾಲಕ ನಿದ್ದೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಎಎನ್ಐ ಟ್ವೀಟ್ ಮಾಡಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ