ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; ಬಸ್​ ಕಂದಕಕ್ಕೆ ಉರುಳಿ ಮೂವರು ಸಾವು, 45 ಮಂದಿಗೆ ಗಾಯ

ಉತ್ತರ ಪ್ರದೇಶದ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರಿದ್ದ ಬಸ್‌ ಆಳವಾದ ಕಂದಕಕ್ಕೆ ಬಿದ್ದಿದೆ. ಈ ದಾರುಣ ಘಟನೆಯಲ್ಲಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 45ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜಸ್ಥಾನದಿಂದ ಬಿಹಾರದ ಕಡೆಗೆ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್, ಲಕ್ನೋ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಈ ಘಟನೆ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ತುರ್ತು ರಕ್ಷಣಾ ಪಡೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಕ್ಷಣವೇ ಬೃಹತ್ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; ಬಸ್​ ಕಂದಕಕ್ಕೆ ಉರುಳಿ ಮೂವರು ಸಾವು, 45 ಮಂದಿಗೆ ಗಾಯ
Lucknow Agra Expressway Accident

Updated on: Nov 09, 2026 | 2:39 PM

ಲಕ್ನೋ, ನವೆಂಬರ್ 9: ಉತ್ತರ ಪ್ರದೇಶದ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಯಾಣಿಕರಿದ್ದ ಬಸ್‌ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದಿದೆ. ಈ ದುರಂತದಲ್ಲಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 45ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಎಕ್ಸ್‌ಪ್ರೆಸ್‌ವೇಯ ತಡೆಗೋಡೆಗೆ ಡಿಕ್ಕಿ ಹೊಡೆದು, ಪಕ್ಕದಲ್ಲಿದ್ದ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಬಿದ್ದ ರಭಸಕ್ಕೆ ಬಸ್ಸಿನ ಮೇಲ್ಭಾಗ ಹಾಗೂ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದೆ.

ಈ ಘಟನೆ ಸಂಭವಿಸಿದ ತಕ್ಷಣವೇ ಸ್ಥಳೀಯ ಗ್ರಾಮಸ್ಥರು, ಎಕ್ಸ್‌ಪ್ರೆಸ್‌ವೇ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಿದರು. ಗಾಯಗೊಂಡ 45ಕ್ಕೂ ಹೆಚ್ಚು ಪ್ರಯಾಣಿಕರನ್ನು ತಕ್ಷಣವೇ ಸಮೀಪದ ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಭೀತಿ ವ್ಯಕ್ತವಾಗಿದೆ.

Loading...

ಇದನ್ನೂ ಓದಿ: ಡೆಹ್ರಾಡೂನ್-ದೆಹಲಿ ಹೈವೇಯಲ್ಲಿ ಭೀಕರ ಅಪಘಾತ; ಕಾರಿನ ಮೇಲೆ ಟ್ರಕ್ ಬಿದ್ದು ನಾಲ್ವರ ಸಾವು, ಮಗು ಪಾರಾಗಿದ್ದೇ ಪವಾಡ!

ಅಪಘಾತಕ್ಕೀಡಾಗಿದ್ದ ಬಸ್ಸಿನೊಳಗಿನಿಂದ ಗಾಯಾಳುಗಳನ್ನು ಹೊರತೆಗೆದು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ರಸ್ತೆಯಲ್ಲಿ ಕವಿದಿದ್ದ ಮಂಜು, ಚಾಲಕನ ನಿರ್ಲಕ್ಷ್ಯ ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ಶರೀರಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಮುಂದುವರಿಸಲಾಗಿದೆ.


ಉಪಮುಖ್ಯಮಂತ್ರಿ ಭೇಟಿ:

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ಲಕ್ನೋದ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಸೂಕ್ತ ಹಾಗೂ ಉಚಿತ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳು ಮತ್ತು ವೈದ್ಯರಿಗೆ ನಿರ್ದೇಶನ ನೀಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us