Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Blast in Bengal: ಪಶ್ಚಿಮ ಬಂಗಾಳದ ಟಿಎಂಸಿ ನಾಯಕನ ಮನೆಯಲ್ಲಿ ಬಾಂಬ್ ಸ್ಫೋಟ; ಮೂವರು ಸಾವು

ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಇಬ್ಬರಲ್ಲಿ ಒಬ್ಬರನ್ನು ಸ್ಥಳೀಯ ತೃಣಮೂಲ ಮತಗಟ್ಟೆ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಎಂದು ಗುರುತಿಸಲಾಗಿದೆ.

Bomb Blast in Bengal: ಪಶ್ಚಿಮ ಬಂಗಾಳದ ಟಿಎಂಸಿ ನಾಯಕನ ಮನೆಯಲ್ಲಿ ಬಾಂಬ್ ಸ್ಫೋಟ; ಮೂವರು ಸಾವು
ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟವಾದ ಮನೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 03, 2022 | 11:51 AM

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಬೂತ್ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಅವರ ಮನೆಯಲ್ಲಿ ಶುಕ್ರವಾರ ತಡರಾತ್ರಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಇಬ್ಬರಲ್ಲಿ ಒಬ್ಬರನ್ನು ಸ್ಥಳೀಯ ತೃಣಮೂಲ ಮತಗಟ್ಟೆ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಎಂದು ಗುರುತಿಸಲಾಗಿದೆ.

ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ ಸಂಭವಿಸಿದೆ ಎಂದು ಬಿಜೆಪಿ ಆರೋಪಿಸಿದೆ. ಆದರೂ ಪೊಲೀಸರು ಮತ್ತು ಸ್ಥಳೀಯ ಟಿಎಂಸಿ ಮುಖಂಡರು ಈ ಘಟನೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇಂದು ಸ್ವತಃ ಅಭಿಷೇಕ್ ಬ್ಯಾನರ್ಜಿ ಅವರ ಸಾರ್ವಜನಿಕ ಸಭೆಯು ಪೂರ್ವ ಮೇದಿನಿಪುರದ ಕಂಠಿಯಲ್ಲಿರುವ ಸುವೇಂದು ಅಧಿಕಾರಿಯ ಮನೆಗೆ ಬಹಳ ಹತ್ತಿರದಲ್ಲಿ ನಡೆಯಲಿದೆ.

ಇದನ್ನೂ ಓದಿ: Pakistan Bomb Blast: ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; ಮೂವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಇದಕ್ಕೂ ಮೊದಲು ನವೆಂಬರ್ 6ರಂದು ಪಶ್ಚಿಮ ಬಂಗಾಳದ ದೇಗಂಗಾದಲ್ಲಿ ಟಿಎಂಸಿ ನಾಯಕನ ಮನೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಬಾಂಬ್ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಕೆಲವು ಕಾರ್ಮಿಕರು ಸ್ಥಳೀಯ ಟಿಎಂಸಿ ನಾಯಕರ ನಿರ್ಮಾಣ ಹಂತದ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ಬಾಂಬ್‌ಗಳನ್ನು ಮನೆಯ ಮೆಟ್ಟಿಲುಗಳ ಕೆಳಗೆ ಇಡಲಾಗಿತ್ತು. ಕಾರ್ಮಿಕರು ಬಾಂಬ್‌ಗಳನ್ನು ಸ್ಪರ್ಶಿಸಿದ ತಕ್ಷಣ ಭಾರೀ ಶಬ್ದದೊಂದಿಗೆ ದೊಡ್ಡ ಸ್ಫೋಟ ಸಂಭವಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ