ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಬೂತ್ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಅವರ ಮನೆಯಲ್ಲಿ ಶುಕ್ರವಾರ ತಡರಾತ್ರಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಇಬ್ಬರಲ್ಲಿ ಒಬ್ಬರನ್ನು ಸ್ಥಳೀಯ ತೃಣಮೂಲ ಮತಗಟ್ಟೆ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಎಂದು ಗುರುತಿಸಲಾಗಿದೆ.
ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ ಸಂಭವಿಸಿದೆ ಎಂದು ಬಿಜೆಪಿ ಆರೋಪಿಸಿದೆ. ಆದರೂ ಪೊಲೀಸರು ಮತ್ತು ಸ್ಥಳೀಯ ಟಿಎಂಸಿ ಮುಖಂಡರು ಈ ಘಟನೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇಂದು ಸ್ವತಃ ಅಭಿಷೇಕ್ ಬ್ಯಾನರ್ಜಿ ಅವರ ಸಾರ್ವಜನಿಕ ಸಭೆಯು ಪೂರ್ವ ಮೇದಿನಿಪುರದ ಕಂಠಿಯಲ್ಲಿರುವ ಸುವೇಂದು ಅಧಿಕಾರಿಯ ಮನೆಗೆ ಬಹಳ ಹತ್ತಿರದಲ್ಲಿ ನಡೆಯಲಿದೆ.
ಇದನ್ನೂ ಓದಿ: Pakistan Bomb Blast: ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; ಮೂವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ
ಇದಕ್ಕೂ ಮೊದಲು ನವೆಂಬರ್ 6ರಂದು ಪಶ್ಚಿಮ ಬಂಗಾಳದ ದೇಗಂಗಾದಲ್ಲಿ ಟಿಎಂಸಿ ನಾಯಕನ ಮನೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಬಾಂಬ್ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಕೆಲವು ಕಾರ್ಮಿಕರು ಸ್ಥಳೀಯ ಟಿಎಂಸಿ ನಾಯಕರ ನಿರ್ಮಾಣ ಹಂತದ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ಬಾಂಬ್‌ಗಳನ್ನು ಮನೆಯ ಮೆಟ್ಟಿಲುಗಳ ಕೆಳಗೆ ಇಡಲಾಗಿತ್ತು. ಕಾರ್ಮಿಕರು ಬಾಂಬ್‌ಗಳನ್ನು ಸ್ಪರ್ಶಿಸಿದ ತಕ್ಷಣ ಭಾರೀ ಶಬ್ದದೊಂದಿಗೆ ದೊಡ್ಡ ಸ್ಫೋಟ ಸಂಭವಿಸಿತ್ತು.