Omicron: ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದೇಶದಲ್ಲಿ ಮತ್ತೆ 3 ಒಮಿಕ್ರಾನ್ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆ

ಆಂಧ್ರಪ್ರದೇಶ ಹಾಗೂ ಚಂಡೀಗಡದಲ್ಲಿ ಒಮಿಕ್ರಾನ್ ಪ್ರಕರಣಗಳು ಕಂಡುಬಂದಿದೆ. ಕರ್ನಾಟಕದಲ್ಲೂ ಇಂದು ಒಂದು ಪ್ರಕರಣ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟಾರೆ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 36ಕ್ಕೇರಿದೆ.

Omicron: ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದೇಶದಲ್ಲಿ ಮತ್ತೆ 3 ಒಮಿಕ್ರಾನ್ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shivaprasad.hs

Updated on: Dec 12, 2021 | 1:41 PM

ಕರ್ನಾಟಕ, ಪಂಜಾಬ್​ ಹಾಗೂ ಆಂಧ್ರಪ್ರದೇಶ ಸೇರಿ ಒಟ್ಟು 3 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಆಂಧ್ರಪ್ರದೇಶದಲ್ಲಿ ಕೊವಿಡ್ 19 ರೂಪಾಂತರವಾದ ಒಮಿಕ್ರಾನ್​ನ ಮೊದಲ ಪ್ರಕರಣ ಪತ್ತೆಯಾಗಿದ್ದರ ಕುರಿತು, ರಾಜ್ಯದ ಸಾರ್ವಜನಿಕ ಆರೋಗ್ಯ ನಿರ್ದೇಶನಾಲಯದ ಹೇಳಿಕೆ ನೀಡಿದೆ. ಅದರ ಪ್ರಕಾರ, ಐರ್ಲೆಂಡ್‌ನಿಂದ ಮುಂಬೈಗೆ ಬಂದಿಳಿದ 34 ವರ್ಷದ ಪ್ರಯಾಣಿಕನಿಗೆ ಆರ್‌ಟಿಪಿಸಿಆರ್ ಪರೀಕ್ಷೆಯನ್ನು ನಡೆಸಿದಾಗ ಆರಂಭದಲ್ಲಿ ನೆಗೆಟಿವ್ ಎಂದು ವರದಿ ಬಂದಿತು. ವರದಿಯ ಆಧಾರದ ಮೇಲೆ, ನವೆಂಬರ್ 27 ರಂದು ವಿಶಾಖಪಟ್ಟಣಕ್ಕೆ ಪ್ರಯಾಣಿಸಲು ಅವರಿಗೆ ಅನುಮತಿ ನೀಡಲಾಯಿತು. ಆದರೆ ಮರು ಪರೀಕ್ಷೆ ನಡೆಸಿದಾಗ ಅವರಿಗೆ ಪಾಸಿಟಿವ್ ಬಂದಿದೆ. ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಅಧಿಕಾರಿಗಳು ಹೈದರಾಬಾದ್ ಮೂಲದ ಸೆಂಟರ್ ಫಾರ್ ಸೆಲ್ಯುಲಾರ್ ಅಂಡ್ ಮಾಲಿಕ್ಯುಲರ್ ಬಯಾಲಜಿ (CCMB) ಗೆ ಮಾದರಿಗಳನ್ನು ಕಳುಹಿಸಿದಾಗ, ಫಲಿತಾಂಶದಲ್ಲಿ ಒಮಿಕ್ರಾನ್ ರೂಪಾಂತರಿ ಪತ್ತೆಯಾಗಿದೆ. ಅವರಿಗೆ ಯಾವುದೇ ರೋಗಲಕ್ಷಣಗಳಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಅಲ್ಲದೇ ರಾಜ್ಯದಲ್ಲಿ ಬೇರೆ ಯಾವುದೇ ಓಮಿಕ್ರಾನ್ ಪ್ರಕರಣಗಳಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಇದುವರೆಗೆ ಒಟ್ಟು 15 ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಎಲ್ಲಾ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ಸಿಸಿಎಂಬಿಗೆ ಕಳುಹಿಸಲಾಗಿದೆ ಎಂದು ಆಂಧ್ರಪ್ರದೇಶ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 10 ಮಾದರಿಗಳ ವರದಿಗಳನ್ನು ಬಂದಿದ್ದು, ಅವುಗಳಲ್ಲಿ ಒಂದರಲ್ಲಿ ಮಾತ್ರ ಒಮಿಕ್ರಾನ್ ರೂಪಾಂತರದ ಕುರುಹುಗಳು ಕಂಡುಬಂದಿವೆ.

‘ಸಾರ್ವಜನಿಕರು ಚಿಂತಿಸಬೇಡಿ ಮತ್ತು ಯಾವುದೇ ವದಂತಿಗಳನ್ನು ನಂಬಬೇಡಿ. ಆದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸಿ ಮತ್ತು ಸಾಮಾಜಿಕ ಅಂತರವನ್ನು ಅನುಸರಿಸುವುದನ್ನು ಮುಂದುವರಿಸಿ. ಮಾಸ್ಕ್ ಧರಿಸುವುದು, ನಿಯಮಿತವಾಗಿ ಕೈ ತೊಳೆಯುವುದು ಮೊದಲಾದ ಸುರಕ್ಷತಾ ನಿಯಮ ಪಾಲಿಸಿ’ ಎಂದು ಆಂಧ್ರಪ್ರದೇಶದ ಸಾರ್ವಜನಿಕ ಆರೋಗ್ಯ ಇಲಾಖೆ ಒತ್ತಿಹೇಳಿದೆ.

ನಿನ್ನೆ (ಶನಿವಾರ) ನವೆಂಬರ್​ನಲ್ಲಿ ಭಾರತಕ್ಕೆ ಆಗಮಿಸಿದ ಇಟಲಿಯ 20 ವರ್ಷದ ವ್ಯಕ್ತಿಗೆ ಚಂಡೀಗಢದಲ್ಲಿ ಒಮಿಕ್ರಾನ್ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ 17, ರಾಜಸ್ಥಾನದಲ್ಲಿ 9, ಗುಜರಾತ್‌ನಲ್ಲಿ 3, ದೆಹಲಿ ಎರಡು ಪ್ರಕರಣಗಳು ಪತ್ತೆಯಾದಂತಾಗಿದೆ.

ಕರ್ನಾಟಕದಲ್ಲಿ ಹೊಸ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ಮೂರಕ್ಕೇರಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ ವ್ಯಕ್ತಿಗೆ ಸೋಂಕು ಪತ್ತೆಯಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:

Army Helicopter Crash: ಕಮಾಂಡೋ ಆಸ್ಪತ್ರೆಗೆ ಭೇಟಿ ನೀಡಿ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ಗೃಹಸಚಿವ, ಡಿಜಿ&ಐಜಿಪಿ

ದೆಹಲಿ: 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳನ್ನು ಬೆನ್ನಟ್ಟಿ ಚಾಕು ಇರಿತ, ಓರ್ವ ವಿದ್ಯಾರ್ಥಿ ಗಂಭೀರ

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ