ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು; 4 ಜನ ನಾಪತ್ತೆ
ಮಹಾರಾಷ್ಟ್ರದ ಸಿಂಧುದುರ್ಗ ಕರಾವಳಿಯಲ್ಲಿ ಒಂದೇ ಕುಟುಂಬದ ಮೂವರು ಮುಳುಗಿ ಮೃತಪಟ್ಟಿದ್ದಾರೆ. ಕಾಣೆಯಾದ ನಾಲ್ವರಿಗಾಗಿ ಹುಡುಕಾಟ ನಡೆಯುತ್ತಿದೆ. ಸಿಂಧುದುರ್ಗದ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಪಿಕ್ನಿಕ್ ಬಂದ ಸಮಯದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಮುಳುಗಿ ಮೃತಪಟ್ಟಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇಂದು ಸಂಜೆ 4 ಗಂಟೆ ಸುಮಾರಿಗೆ 8 ಜನರ ಕುಟುಂಬವೊಂದು ಪಿಕ್ನಿಕ್‌ಗೆ ಹೋಗಿದ್ದಾಗ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಈ ಘಟನೆ ನಡೆದಿದೆ.

ಮುಂಬೈ, ಅಕ್ಟೋಬರ್ 3: ಮಹಾರಾಷ್ಟ್ರದಲ್ಲಿ (Maharashtra) ನಡೆದ ದುರಂತ ಘಟನೆಯಲ್ಲಿ ಇಲ್ಲಿನ ಸಿಂಧುದುರ್ಗ ಜಿಲ್ಲೆಯ ಅರೇಬಿಯನ್ ಸಮುದ್ರದಲ್ಲಿ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅವರೊಂದಿಗೆ ಸಮುದ್ರಕ್ಕೆ ಇಳಿದಿದ್ದ ಇತರ ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಸಂಜೆ 4 ಗಂಟೆ ಸುಮಾರಿಗೆ 8 ಜನರ ಕುಟುಂಬವೊಂದು ಪಿಕ್ನಿಕ್‌ಗೆ ಹೋಗಿದ್ದಾಗ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಈ ಘಟನೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅವರಲ್ಲಿ ಇಬ್ಬರು ಕುಡಾಲ್ (ಸಿಂಧುದುರ್ಗ) ಮೂಲದವರಾಗಿದ್ದರೆ, ಇತರ 6 ಮಂದಿ ಕರ್ನಾಟಕದ ಬೆಳಗಾವಿಯಿಂದ ಬಂದಿದ್ದರು.
ಇದನ್ನೂ ಓದಿ: 2 ವರ್ಷದೊಳಗಿನ ಮಕ್ಕಳಿಗೆ ಶೀತ, ಕೆಮ್ಮಿನ ಸಿರಪ್ ನೀಡಬೇಡಿ; 11 ಮಕ್ಕಳ ಸಾವಿನ ಬಳಿಕ ಕೇಂದ್ರ ಸರ್ಕಾರ ಎಚ್ಚರಿಕೆ
ಈ 8 ಮಂದಿಯೂ ಈಜಲು ಸಮುದ್ರಕ್ಕೆ ಇಳಿದರು. ಆದರೆ, ಸ್ವಲ್ಪ ಸಮಯದ ನಂತರ ನೀರಿನ ಆಳ ಗೊತ್ತಾಗದೆ ಅವರು ಮುಳುಗಲು ಪ್ರಾರಂಭಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ವಿಷಯ ತಿಳಿದ ನಂತರ ಪೊಲೀಸರು ಮತ್ತು ಸ್ಥಳೀಯ ವಿಪತ್ತು ನಿರ್ವಹಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಶೋಧದ ಸಮಯದಲ್ಲಿ 3 ಶವಗಳು ಪತ್ತೆಯಾಗಿದ್ದು, ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ: ಕರೂರ್ ಕಾಲ್ತುಳಿತ ಪ್ರಕರಣ; ವಿಜಯ್ ವಿರುದ್ಧ ಹೈಕೋರ್ಟ್ ಆಕ್ರೋಶ, ಎಸ್ಐಟಿ ತನಿಖೆಗೆ ಆದೇಶ
ಹಾಗೇ, ನೀರಿನಲ್ಲಿ ಮುಳುಗಿದ್ದ 16 ವರ್ಷದ ಬಾಲಕಿಯನ್ನು ರಕ್ಷಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ರಕ್ಷಣಾ ತಂಡಗಳು ಸಂಜೆಯಿಂದ ಉಳಿದವರಿಗಾಗಿ ಹುಡುಕಾಟ ಮುಂದುವರೆಸಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:01 pm, Fri, 3 October 25




