Accident: ಛತ್ತೀಸ್​ಗಢದ ಜಶ್ಪುರದಲ್ಲಿ ಬಸ್ ಪಲ್ಟಿ ಹೊಡೆದು ಮೂವರು ಸಾವು, 6 ಜನರಿಗೆ ಗಾಯ

ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಹಾಗೂ ಓರ್ವ ಬಸ್‌ ಪ್ರಯಾಣಿ ಸಾವನ್ನಪ್ಪಿದ್ದಾರೆ.

Accident: ಛತ್ತೀಸ್​ಗಢದ ಜಶ್ಪುರದಲ್ಲಿ ಬಸ್ ಪಲ್ಟಿ ಹೊಡೆದು ಮೂವರು ಸಾವು, 6 ಜನರಿಗೆ ಗಾಯ
ಛತ್ತೀಸ್​ಗಢದಲ್ಲಿ ಬಸ್ ಅಪಘಾತ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 22, 2022 | 9:41 AM

ಜಶ್‌ಪುರ: ಛತ್ತೀಸ್‌ಗಢದ ಜಶ್‌ಪುರ (Jashpur) ಜಿಲ್ಲೆಯ ಹಳ್ಳಿಯೊಂದರಲ್ಲಿ ನಿನ್ನೆ ಸಂಜೆ ಬಸ್ (Bus Accident) ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 6 ಜನರು ಗಾಯಗೊಂಡಿದ್ದಾರೆ. ಜಶ್​ಪುರದ ಪಾತಾಳಗಾಂವ್​ನಿಂದ ಸುರ್ಗುಜಾ ಜಿಲ್ಲೆಯ ಅಂಬಿಕಾಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ರಾಂಗ್ ಸೈಡ್​ನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಾಗ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಅಪಘಾತ (Accident) ಸಂಭವಿಸಿದೆ.

ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಹಾಗೂ ಓರ್ವ ಬಸ್‌ ಪ್ರಯಾಣಿ ಸಾವನ್ನಪ್ಪಿದ್ದಾರೆ. ಪ್ರಯಾಣಿಕರನ್ನು ಬಲರಾಮ್ ಲಾಕ್ರಾ (65), ಅನಂತ ನಾಗವಂಶಿ (55) ಮತ್ತು ದೇವಾನಂದ್ (25) ಎಂದು ಗುರುತಿಸಲಾಗಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ 6 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಸಾರಿಗೆ ಬಸ್ ನಿರ್ವಾಹಕನ ಬೇಜವಾಬ್ದಾರಿಗೆ ಬಲಿ ಆಯ್ತು ಜೀವ: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ಈ ಘಟನೆಯ ಮಾಹಿತಿ ತಿಳಿದ ತಕ್ಷಣ ಎಚ್ಚೆತ್ತ ಪೊಲೀಸ್ ತಂಡ ಮತ್ತು ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಪಾತಾಳಗಾಂವ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ