ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ಡಿಕ್ಕಿ: 3 ಸಾವು, ಇಬ್ಬರಿಗೆ ಗಂಭೀರ ಗಾಯ
ನೋಯ್ಡಾದ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಬಸ್‌ಗಳು ಡಿಕ್ಕಿ ಹೊಡೆದವು. ಮೂವರು ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ದೆಹಲಿ: ಉತ್ತರ ಪ್ರದೇಶದ (Uttar Pradesh) ನೋಯ್ಡಾದ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇ (Greater Noida Expressway) ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಎರಡು ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ(Road Accident) ಮೂವರು ಸಾವಿಗೀಡಾಗಿದ್ದು , ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನೋಯ್ಡಾದ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಬಸ್‌ಗಳು ಡಿಕ್ಕಿ ಹೊಡೆದವು. ಮೂವರು ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಗ್ರೇಟರ್ ನೋಯ್ಡಾ ಪೊಲೀಸರು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನೊಂದು ರಸ್ತೆ ಅಪಘಾತ ಪ್ರಕರಣ ವರದಿ ಆಗಿದ್ದು ಉತ್ತರ ಪ್ರದೇಶದ ವಾರಣಾಸಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 13 ಜನರಿಗೆ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬಿಎಚ್‌ಯು ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಬಸ್ ಬಿಹಾರದ ಗಯಾದಿಂದ ವಾರಣಾಸಿಗೆ ಬರುತ್ತಿದ್ದು, ಚಾಲಕ ನಿದ್ದೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಎಎನ್ಐ ಟ್ವೀಟ್ ಮಾಡಿದೆ.
Uttar Pradesh | 13 people injured in a collision b/w a bus and a truck on National Highway in Varanasi. The injured people have been admitted to BHU Trauma Centre. The bus was coming to Varanasi from Gaya in Bihar and the incident happened after the driver reportedly fell asleep.
— ANI UP/Uttarakhand (@ANINewsUP) December 18, 2022
ಇದನ್ನೂ ಓದಿ: ಜ. 6ರಿಂದ ದೇಶಾದ್ಯಂತ ಒಂದು ವಾರ, ಒಂದು ಲ್ಯಾಬ್ ಅಭಿಯಾನ ಆರಂಭ: ಸಚಿವ ಡಾ. ಜಿತೇಂದ್ರ ಸಿಂಗ್
ಬಸ್ತಿಯಲ್ಲಿ ಎಸ್‌ಯುವಿ ಅಪಘಾತ 3 ಮಂದಿ ಸಾವು, 4 ಮಂದಿಗೆ ಗಾಯ
Uttar Pradesh | Four people injured after their car lost balance and overturned under Noida Police Station area earlier this morning. The injured have been taken to a hospital. Police personnel present at the spot. Details awaited. pic.twitter.com/8yJ1PqKyqd
— ANI UP/Uttarakhand (@ANINewsUP) December 18, 2022
ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಬ್ಲೂಬಕ್‌ಗೆ (ನೀಲಗಾಯ್) ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಪರಿಣಾಮ ಮೂವರು ಸಾವಿಗೀಡಾಗಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಕಪ್ತಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ದುಧೌರಾ ಪೆಟ್ರೋಲ್ ಪಂಪ್ ಬಳಿ ಅಪಘಾತ ಸಂಭವಿಸಿದೆ. ಏಳು ಮಂದಿ ಪ್ರಯಾಣಿಕರಿದ್ದ ಎಸ್‌ಯುವಿ ಗೋರಖ್‌ಪುರದಿಂದ ಲಕ್ನೋಗೆ ಹೋಗುತ್ತಿತ್ತು. ಬಸ್ತಿ ಜಿಲ್ಲೆಯಲ್ಲಿ ಕಾರು ನೀಲಗಾಯ್ಗೆ ಡಿಕ್ಕಿ ಹೊಡೆದಿದೆ, ಅದರ ನಂತರ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ, ಮೂರು ಜನರು ಸಾವಿಗೀಡಾಗಿದ್ದು ನಾಲ್ವರು ಗಾಯಗೊಂಡರು. ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಮೃತರು ಮತ್ತು ಗಾಯಗೊಂಡವರು ಫೈನಾನ್ಸ್ ಕಂಪನಿಯೊಂದರ ಉದ್ಯೋಗಿಗಳಾಗಿದ್ದು, ಪೂರ್ವಾಂಚಲ್‌ನ ವಿವಿಧ ಜಿಲ್ಲೆಗಳ ನಿವಾಸಿಗಳು ಎಂದು ಹೇಳಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:34 am, Sun, 18 December 22