ತಮಿಳುನಾಡಿನಲ್ಲಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು, 3 ಮಂದಿ ಸಾವು
ಕಾರೊಂದು 20 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕಾರು ರಾಮನಾಥಪುರದಿಂದ ಚೆನ್ನೈ ಕಡೆಗೆ ಹೋಗುತ್ತಿತ್ತು. ತಿರುಚ್ಚಿ-ಚೆನ್ನೈ ಹೆದ್ದಾರಿಯ ಮಧುರಾಂತಗಂ ಬಳಿ ಕಾರು ಕಂದಕಕ್ಕೆ ಉರುಳಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನವು ಸುರಕ್ಷತಾ ಗೋಡೆಯ ಮೇಲೆ ಹೋಗಿ ಕಂದಕಕ್ಕೆ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ತಂಡ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮತ್ತಷ್ಟು ಓದಿ: ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ: ಲಾರಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ನಾಲ್ಕು ಮಂದಿ ಸಾವು
ಶುಕ್ರವಾರ (ಆಗಸ್ಟ್ 11) ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ ವೇಗವಾಗಿ ಬಂದ ಟ್ರಕ್ ಚಾಲಕ ದ್ವಿಚಕ್ರ ವಾಹನಗಳು ಮತ್ತು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚೆಂಗಲ್ಪಟ್ಟುವಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.