Accident: ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಡಿವೈಡರ್​ ಮೇಲೆ ಜಿಗಿದು ಎದುರಿನಿಂದ ಬರುತ್ತಿದ್ದ ಡಿಟಿಸಿ ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3 ಜನ ಸಾವು

ಕಾರೊಂದು ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3ಜನ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಉತ್ತರ ದೆಹಲಿಯಲ್ಲಿ ಮಧ್ಯಾಹ್ನ 12.30 ಗಂಟೆಗೆ ನಡೆದಿದೆ.

Accident: ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಡಿವೈಡರ್​ ಮೇಲೆ ಜಿಗಿದು ಎದುರಿನಿಂದ ಬರುತ್ತಿದ್ದ ಡಿಟಿಸಿ ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3 ಜನ ಸಾವು
ಕಾರು, ಬಸ್​​ ಡಿಕ್ಕಿ, 3 ಜನ ಸಾವು, 8 ಮಂದಿಗೆ ಗಾಯ

Updated on: Jul 06, 2023 | 6:24 PM

ದೆಹಲಿ: ಕಾರೊಂದು ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3ಜನ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಉತ್ತರ ದೆಹಲಿಯಲ್ಲಿ ಮಧ್ಯಾಹ್ನ 12.30 ಗಂಟೆಗೆ ನಡೆದಿದೆ. ವ್ಯಾನ್ ಡಿವೈಡರ್​ ಮೇಲೆ ಹತ್ತಿ ರಸ್ತೆಯ ಇನ್ನೊಂದು ಬದಿಯಿಂದ ಬರುತ್ತಿದ್ದ ಡಿಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪೊಲೀಸರ ಪ್ರಕಾರ, ಉತ್ತರ ದೆಹಲಿಯಲ್ಲಿ ಮಧ್ಯಾಹ್ನ 12.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ವ್ಯಾನ್‌ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ 55 ವರ್ಷದ ಸವಿತಾ ಮತ್ತು ಮತ್ತಿಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ವ್ಯಾನ್ ಭಜನಪುರ ನಂದ ನಗ್ರಿ ರಸ್ತೆಯಿಂದ ಬರುತ್ತಿತ್ತು. ವ್ಯಾನ್ ಸಮೀಪದ ಮೇಲ್ಸೇತುವೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ ಮೇಲೆ ಜಿಗಿದು ಎದುರಿನಿಂದ ಬರುತ್ತಿದ್ದ ಡಿಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾವನ್ನಪ್ಪಿದವರನ್ನು ಮತ್ತು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us