ಜಮ್ಮು ಕಾಶ್ಮೀರದ ಶೋಪಿಯಾನ್‌ನಲ್ಲಿ ಸ್ಫೋಟ; ಮೂವರು ಯೋಧರಿಗೆ ಗಾಯ
ಶೋಪಿಯಾನ್‌ನ ಸೆಡೋವ್‌ನಲ್ಲಿ ಖಾಸಗಿ ಬಾಡಿಗೆ ವಾಹನದಲ್ಲಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ 3 ಯೋಧರು ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ (Shopian Blast) ನಡೆದ ಸ್ಫೋಟದಲ್ಲಿ ಮೂವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಡಿಗೆಗೆ ಪಡೆದ ಖಾಸಗಿ ವಾಹನದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೇಳಿದ್ದಾರೆ. ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಶೋಪಿಯಾನ್‌ನ ಸೆಡೋವ್‌ನಲ್ಲಿ ಖಾಸಗಿ ಬಾಡಿಗೆ ವಾಹನದಲ್ಲಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದ 3 ಯೋಧರು ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದ ಸ್ವರೂಪ ಮತ್ತು ಮೂಲದ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿರುವುದಾಗಿ ಉಲ್ಲೇಖಿಸಿ ಇಂದು ಮುಂಜಾನೆ ಟ್ವೀಟ್ ಮಾಡಲಾಗಿದೆ.
ಶೋಪಿಯಾನ್ ಜಿಲ್ಲೆಯಲ್ಲಿ ಓರ್ವ ನಾಗರಿಕನ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಗಾಯಗೊಂಡವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಾಗರಿಕರ ಮೇಲೆ ದಾಳಿ ಹೆಚ್ಚುತ್ತಿದೆ.
ಇದನ್ನೂ ಓದಿ: Kashmir Encounter: ಕಾಶ್ಮೀರದ ಆವಂತಿಪೊರಾದಲ್ಲಿ ಭದ್ರತಾ ಪಡೆಯಿಂದ ಇಬ್ಬರು ಉಗ್ರರ ಎನ್ಕೌಂಟರ್
ಈ ವಾರದ ಆರಂಭದಲ್ಲಿ ಶಾಲಾ ಶಿಕ್ಷಕಿ ಸಾಂಬಾ ಜಿಲ್ಲೆಯಲ್ಲಿ ರಜನಿ ಬಾಲಾ ಭಯೋತ್ಪಾದಕರ ದಾಳಿಯ ಹಿನ್ನೆಲೆಯಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದರು. ಈ ಹಿಂದೆ ಮೇ ತಿಂಗಳಿನಲ್ಲಿ ಟಿವಿ ಕಲಾವಿದೆ ಅಮರೀನ್ ಭಟ್ ಅವರನ್ನು ಜಮ್ಮು ಕಾಶ್ಮೀರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಕಾಶ್ಮೀರಿ ಪಂಡಿತ್ ರಾಹುಲ್ ಭಟ್‌ರವರ ಹತ್ಯೆಯು ಮೇ ತಿಂಗಳಿನಲ್ಲಿ ಕಾಶ್ಮೀರದಲ್ಲಿ ಭಾರೀ ಕೋಲಾಹಲ ಉಂಟುಮಾಡಿದ ಮತ್ತೊಂದು ನಾಗರಿಕ ಹತ್ಯೆಯಾಗಿದ್ದು, ಕಾಶ್ಮೀರಿ ಪಂಡಿತ್ ಸಮುದಾಯದ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಏಳುವಂತೆ ಮಾಡಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ