ಕಾಶ್ಮೀರದ ರಾಜೌರಿಯ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ; ಮೂವರು ಸೈನಿಕರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ

| Updated By: ಸುಷ್ಮಾ ಚಕ್ರೆ

Updated on: Aug 11, 2022 | 9:10 AM

ರಾಜೌರಿಯ ಸೇನಾ ಶಿಬಿರದೊಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಇಂದು ಮುಂಜಾನೆ ಹೊಡೆದುರುಳಿಸಲಾಗಿದೆ. ಈ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದು, ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಕಾಶ್ಮೀರದ ರಾಜೌರಿಯ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ; ಮೂವರು ಸೈನಿಕರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ
ಭಯೋತ್ಪಾದಕ ದಾಳಿ
Follow us on

ಶ್ರೀನಗರ: ಜಮ್ಮು ಕಾಶ್ಮೀರದ (Jammu Kashmir) ರಾಜೌರಿಯಿಂದ 25 ಕಿ.ಮೀ ದೂರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಉಗ್ರರು ಆರ್ಮಿ ಕಂಪನಿ ಕಾರ್ಯಾಚರಣಾ ನೆಲೆಯ ಮೇಲೆ ಆತ್ಮಾಹುತಿ ದಾಳಿ (Suicide Attack) ನಡೆಸಿದ್ದಾರೆ. ಈ ವೇಳೆ ಆ ಇಬ್ಬರು ಉಗ್ರರನ್ನು ಸೈನಿಕರು ಹತ್ಯೆ ಮಾಡಿದ್ದಾರೆ. ಆದರೆ, ಈ ಕಾರ್ಯಾಚರಣೆ ವೇಳೆ ಮೂವರು ಸೈನಿಕರು ಕೂಡ ಹುತಾತ್ಮರಾಗಿದ್ದಾರೆ. ಉಗ್ರರ ಮೇಲಿನ ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆಯ (Indian Army) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್‌ನಲ್ಲಿರುವ ಸೇನಾ ಶಿಬಿರದೊಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಇಂದು ಮುಂಜಾನೆ ಹೊಡೆದುರುಳಿಸಲಾಗಿದೆ. ಈ ದಾಳಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದು, ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಹೇಳಿದ್ದಾರೆ. ಭದ್ರತಾ ಅಧಿಕಾರಿಗಳು ಆ ಪ್ರದೇಶವನ್ನು ಸುತ್ತುವರೆದಿದ್ದಾರೆ. ಹೆಚ್ಚುವರಿ ಪೊಲೀಸ್ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ
Gautam Adani: ಖ್ಯಾತ ಉದ್ಯಮಿ ಗೌತಮ್ ಅದಾನಿಗೆ ಭದ್ರತೆ ಹೆಚ್ಚಳ.. ಝಡ್ ಕೆಟಗರಿಗೇರಿದ ಭದ್ರತೆ
ವಿಮಾನಗಳ ಪ್ರಯಾಣ ದರದ ಮಿತಿಯನ್ನು ತೆಗೆದು ಹಾಕಿದ ಕೇಂದ್ರ ಸರ್ಕಾರ
ಮಾಟಮಂತ್ರವನ್ನು ಆಶ್ರಯಿಸುವುದು, ಕಪ್ಪು ಬಟ್ಟೆ ಧರಿಸುವುದರ ಮೂಲಕ ಹತಾಶೆ ಮುಗಿಯುವುದಿಲ್ಲ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಇದನ್ನೂ ಓದಿ: Encounter: ಕಾಶ್ಮೀರದ ಬರಾಮುಲ್ಲಾದಲ್ಲಿ ಬೆಳ್ಳಂಬೆಳಗ್ಗೆ ಉಗ್ರರು- ಸೇನಾ ಪಡೆ ನಡುವೆ ಎನ್​ಕೌಂಟರ್

ರಾಜೌರಿ ಜಿಲ್ಲೆಯ ದರ್ಹಾಲ್ ಪ್ರದೇಶದ ಬುದ್ ಕನಡಿ ಬಳಿಯ ಪರ್ಗಲ್‌ನಲ್ಲಿರುವ ಸೇನಾ ಶಿಬಿರದ ಬೇಲಿಯನ್ನು ಕೆಲವರು ಇಂದು ಮುಂಜಾನೆ ದಾಟಲು ಪ್ರಯತ್ನಿಸಿದ್ದರು. ಇದನ್ನು ನೋಡಿದ ಕಾವಲು ಸಿಬ್ಬಂದಿ ತಕ್ಷಣ ಸೇನಾ ಸಿಬ್ಬಂದಿಗೆ ವಿಷಯ ತಿಳಿಸಿದರು. ಆಗ ಗುಂಡಿನ ವಿನಿಮಯ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಇದು ಆತ್ಮಾಹುತಿ ದಾಳಿಯಾಗಿದ್ದು, ಕಾವಲು ಕಾಯುತ್ತಿದ್ದ ಕಾವಲು ಸಿಬ್ಬಂದಿ ಉಗ್ರರ ಈ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 am, Thu, 11 August 22