ಪರೀಕ್ಷೆ ಮುಗಿಸಿ ಮನೆಗೆ ತೆರಳಲು ಶಾಲೆ ಎದುರು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಸ್ಥಳದಲ್ಲೇ ಮೂವರು ಸಾವು

ಪರೀಕ್ಷೆ ಮುಗಿಸಿ ಮನೆಗೆ ತೆರಳಲೆಂದು ಶಾಲೆಯ ಎದುರು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ.

ಪರೀಕ್ಷೆ ಮುಗಿಸಿ ಮನೆಗೆ ತೆರಳಲು ಶಾಲೆ ಎದುರು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಕಾರು: ಸ್ಥಳದಲ್ಲೇ ಮೂವರು ಸಾವು
ಪ್ರಾತಿನಿಧಿಕ ಚಿತ್ರ
Follow us
ನಯನಾ ರಾಜೀವ್
|

Updated on: Mar 23, 2023 | 7:36 AM

ಪರೀಕ್ಷೆ ಮುಗಿಸಿ ಮನೆಗೆ ತೆರಳಲೆಂದು ಶಾಲೆಯ ಎದುರು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಮತ್ತೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಾರದಾಪಲ್ಲಿಯ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗಳು, ಪರೀಕ್ಷೆ ಮುಗಿಸಿ ಶಾಲೆಯ ಗೇಟ್​ ಬಳಿ ಬಸ್​ಗಾಗಿ ಕಾಯುತ್ತಿರುವಾಗ ವೇಗವಾಗಿ ಬಂದ ಕಾರು ಗೋಡೆಗೆ ಡಿಕ್ಕಿ ಹೊಡೆದು ಬಳಿಕ ವಿದ್ಯಾರ್ಥಿಗಳ ಮೇಲೆ ಉರುಳಿ ಬಿದ್ದಿದೆ.

ಮತ್ತಷ್ಟು ಓದಿ: Chikkamagaluru: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗೆ 50 ಸಾವಿರ ರೂ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು