ಪರೀಕ್ಷೆ ಮುಗಿಸಿ ಮನೆಗೆ ತೆರಳಲೆಂದು ಶಾಲೆಯ ಎದುರು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಮತ್ತೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶಾರದಾಪಲ್ಲಿಯ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗಳು, ಪರೀಕ್ಷೆ ಮುಗಿಸಿ ಶಾಲೆಯ ಗೇಟ್ ಬಳಿ ಬಸ್ಗಾಗಿ ಕಾಯುತ್ತಿರುವಾಗ ವೇಗವಾಗಿ ಬಂದ ಕಾರು ಗೋಡೆಗೆ ಡಿಕ್ಕಿ ಹೊಡೆದು ಬಳಿಕ ವಿದ್ಯಾರ್ಥಿಗಳ ಮೇಲೆ ಉರುಳಿ ಬಿದ್ದಿದೆ.
ಮತ್ತಷ್ಟು ಓದಿ: Chikkamagaluru: ಕೆಎಸ್ಆರ್ಟಿಸಿ ಬಸ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ
ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗೆ 50 ಸಾವಿರ ರೂ ನೀಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ