ಶ್ರೀನಗರದಲ್ಲಿ ಇಂದು 3 ಉಗ್ರರ ಹತ್ಯೆ; 24 ಗಂಟೆಗಳಲ್ಲಿ ಒಟ್ಟು 9 ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
Srinagar Encounter: ಶ್ರೀನಗರದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 9 ಉಗ್ರರನ್ನು ಹತ್ಯೆ ಮಾಡಲಾಗಿದೆ.
ಶ್ರೀನಗರದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ (ಜೆ & ಕೆ) ಪೊಲೀಸರ ಜಂಟಿ ಭದ್ರತಾ ಪಡೆಗಳು ಇಂದು(ಶುಕ್ರವಾರ) ಮುಂಜಾನೆ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ರಾತ್ರಿಯಿಡೀ ಕಾರ್ಯಾಚರಣೆ ನಡೆದಿದ್ದು, ಇಂದು ಮುಂಜಾನೆ ಉಗ್ರರನನ್ನು ಹತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನನ್ನು ಸುಹೇಲ್ ಅಹ್ಮದ್ ರಾಥರ್ ಎಂದು ಗುರುತಿಸಲಾಗಿದೆ. ಆತ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ. ಇತರ ಭಯೋತ್ಪಾದಕರನ್ನು ಗುರುತಿಸುವ ಪ್ರಕ್ರಿಯೆಗಳು ನಡೆಯುತ್ತಿವೆ. ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ವಸ್ತುಗಳನ್ನು ಘಟನಾ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ‘‘ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ’’ ಎಂದಿದ್ದಾರೆ. ಭಯೋತ್ಪಾದಕ ಸುಹೇಲ್ ‘ಝೀವಾನ್’ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದನು. ಝೀವಾನ್ ದಾಳಿಯಲ್ಲಿ ಭಾಗಿಯಾಗಿರುವ ಎಲ್ಲಾ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟರ್‌ನಲ್ಲಿ ಕುಮಾರ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.
One of the killed #terrorists has been identified as Suhail Ahmad Rather of #terror outfit JeM. As revealed during yesterday’s PC, terrorist Suhail was also involved in #ZewanTerrorAttack. All terrorists involved in Zewan attack have been #neutralised: IGP Kashmir@JmuKmrPolice https://t.co/8qu081u8mV
— Kashmir Zone Police (@KashmirPolice) December 31, 2021
ಮೂಲಗಳ ಪ್ರಕಾರ, ಶ್ರೀನಗರದ ಪಂಥಾ ಚೌಕ್‌ನಲ್ಲಿ ಮಧ್ಯರಾತ್ರಿ ಆರಂಭವಾದ ಎನ್‌ಕೌಂಟರ್‌ನಲ್ಲಿ ಮೂವರು ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸೇರಿದಂತೆ ಸುಮಾರು ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ. ಈ ಎನ್‌ಕೌಂಟರ್‌ನೊಂದಿಗೆ ಕಳೆದ 24 ಗಂಟೆಗಳಲ್ಲಿ ಮೂರು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು ಒಂಬತ್ತು ಭಯೋತ್ಪಾದಕರು ಹತರಾದಂತಾಗಿದೆ. ಗುರುವಾರ ಬೆಳಗ್ಗೆ ಅನಂತ್ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಆರು ಉಗ್ರರನ್ನು ಹತ್ಯೆ ಮಾಡಲಾಗಿತ್ತು.
15 ಕಾರ್ಪ್ಸ್‌ನ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಲೆಫ್ಟಿನೆಂಟ್ ಜನರಲ್ ಡಿಪಿ ಪಾಂಡೆ ಅವರು ಶುಕ್ರವಾರದಂದು ಗಡಿ ನುಸುಳುವ ಪ್ರಕರಣಗಳು ಕಡಿಮೆಯಾಗಿವೆ ಎಂದು ಹೇಳಿದ್ದರು. ಕಣಿವೆಯಲ್ಲಿ ಸಕ್ರಿಯ ಭಯೋತ್ಪಾದಕರ ಸಂಖ್ಯೆ 200 ಕ್ಕಿಂತ ಕಡಿಮೆಯಾಗಿದೆ ಮತ್ತು ಸಕ್ರಿಯ ಸ್ಥಳೀಯ ಭಯೋತ್ಪಾದಕರ ಸಂಖ್ಯೆ 100 ಕ್ಕಿಂತ ಕಡಿಮೆಯಾಗಿದೆ ಎಂದು ವಿಜಯ್ ಕುಮಾರ್ ಗುರುವಾರ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಇದನ್ನೂ ಓದಿ:
Year Ender 2021: 2021ರ ರಾಜ್ಯ ರಾಜಕೀಯದ ಪ್ರಮುಖ ಘಟನೆಗಳ ಕ್ವಿಕ್ ರೌಂಡಪ್
Published On - 9:53 am, Fri, 31 December 21