ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರ ಹತ್ಯೆ ಮಾಡಿದ ಭದ್ರತಾ ಪಡೆ; ಇವರೆಲ್ಲರೂ ಜೈಷ್​ ಇ ಮೊಹಮ್ಮದ್​ ಸಂಘಟನೆಗೆ ಸೇರಿದವರು

ಮೃತ ಉಗ್ರರ ಹೆಸರು ಗೊತ್ತಾಗಿಲ್ಲ. ಇವರೆಲ್ಲರೂ ಜೈಷ್ ಇ ಮೊಹಮ್ಮದ್​ ಸಂಘಟೆಗೆ ಸೇರಿದವರಾಗಿದ್ದಾರೆ. ಅದರಲ್ಲೊಬ್ಬ ಪಾಕಿಸ್ತಾನದವನು.

ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರ ಹತ್ಯೆ ಮಾಡಿದ ಭದ್ರತಾ ಪಡೆ; ಇವರೆಲ್ಲರೂ ಜೈಷ್​ ಇ ಮೊಹಮ್ಮದ್​ ಸಂಘಟನೆಗೆ ಸೇರಿದವರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jan 05, 2022 | 11:24 AM

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ(Pulwama) ಜೈಷ್ ಇ ಮೊಹಮ್ಮದ್​ (Jaish-e-Mohammad )ಸಂಘಟನೆಯ ಮೂವರು ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿ ಇಂದು ಹತ್ಯೆ ಮಾಡಿದ್ದಾರೆ. ಇದರಲ್ಲಿ ಪಾಕಿಸ್ತಾನ ಉಗ್ರನೊಬ್ಬನೂ ಇದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪುಲ್ವಾಮಾ ಜಿಲ್ಲೆಯ ಚಾಂದ್​ಗಾಮ್​ ಎಂಬ ಹಳ್ಳಿಯಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದರು. ಸ್ಥಳವನ್ನು ಸುತ್ತುವರಿದು ಉಗ್ರರಿಗಾಗಿ ಹುಡುಕಾಟ ನಡೆದಿತ್ತು. ಆದರೆ ಉಗ್ರರು ದಾಳಿ ನಡೆಸಲು ಪ್ರಾರಂಭಿಸಿದಾಗ ಭದ್ರತಾ ಪಡೆ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಹೇಳಲಾಗಿದೆ.

ಮೃತ ಉಗ್ರರ ಹೆಸರು ಗೊತ್ತಾಗಿಲ್ಲ. ಇವರೆಲ್ಲರೂ ಜೈಷ್ ಇ ಮೊಹಮ್ಮದ್​ ಸಂಘಟೆಗೆ ಸೇರಿದವರಾಗಿದ್ದಾರೆ. ಅದರಲ್ಲೊಬ್ಬ ಪಾಕಿಸ್ತಾನದವನು. ಮೃತ ಭಯೋತ್ಪಾದಕರಿಂದ ಶಸ್ತ್ರಾಸ್ತ್ರ, ಮಾರಕಾಸ್ತ್ರಗಳು, ಎರಡು ಎಂ-4 ಕಾರ್ಬೈನ್‌ಗಳು ಮತ್ತು ಒಂದು ಎಕೆ ಸರಣಿ ರೈಫಲ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು-ಕಾಶ್ಮೀರ ಐಜಿಪಿ ವಿಜಯ್​ ಕುಮಾರ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸಿರಿಧಾನ್ಯಗಳನ್ನ ಪುನರುಜ್ಜೀವನಗೊಳಿಸುತ್ತಿರುವ ಹೆಸರಾಂತ ಆಹಾರ ವಿಜ್ಞಾನಿ ಡಾ. ಖಾದರ್ ವಲಿಗೆ ಟಿವಿ9 ನವನಕ್ಷತ್ರ ಗೌರವ

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್