ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ(Pulwama) ಜೈಷ್ ಇ ಮೊಹಮ್ಮದ್ (Jaish-e-Mohammad )ಸಂಘಟನೆಯ ಮೂವರು ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿ ಇಂದು ಹತ್ಯೆ ಮಾಡಿದ್ದಾರೆ. ಇದರಲ್ಲಿ ಪಾಕಿಸ್ತಾನ ಉಗ್ರನೊಬ್ಬನೂ ಇದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪುಲ್ವಾಮಾ ಜಿಲ್ಲೆಯ ಚಾಂದ್ಗಾಮ್ ಎಂಬ ಹಳ್ಳಿಯಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದರು. ಸ್ಥಳವನ್ನು ಸುತ್ತುವರಿದು ಉಗ್ರರಿಗಾಗಿ ಹುಡುಕಾಟ ನಡೆದಿತ್ತು. ಆದರೆ ಉಗ್ರರು ದಾಳಿ ನಡೆಸಲು ಪ್ರಾರಂಭಿಸಿದಾಗ ಭದ್ರತಾ ಪಡೆ ಸಿಬ್ಬಂದಿಯೂ ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಹೇಳಲಾಗಿದೆ.
J&K: An encounter is underway between security forces and terrorists in Chandgam area of Pulwama district. One terrorist has been killed in the operation, as per police.
(Visuals deferred by unspecified time) pic.twitter.com/uAZJwwpqTo
— ANI (@ANI) January 5, 2022
ಮೃತ ಉಗ್ರರ ಹೆಸರು ಗೊತ್ತಾಗಿಲ್ಲ. ಇವರೆಲ್ಲರೂ ಜೈಷ್ ಇ ಮೊಹಮ್ಮದ್ ಸಂಘಟೆಗೆ ಸೇರಿದವರಾಗಿದ್ದಾರೆ. ಅದರಲ್ಲೊಬ್ಬ ಪಾಕಿಸ್ತಾನದವನು. ಮೃತ ಭಯೋತ್ಪಾದಕರಿಂದ ಶಸ್ತ್ರಾಸ್ತ್ರ, ಮಾರಕಾಸ್ತ್ರಗಳು, ಎರಡು ಎಂ-4 ಕಾರ್ಬೈನ್‌ಗಳು ಮತ್ತು ಒಂದು ಎಕೆ ಸರಣಿ ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು-ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.