ಉತ್ತರಾಖಂಡ: ಚಿರತೆ ದಾಳಿಗೆ 3 ವರ್ಷದ ಮಗು ಬಲಿ
ಉತ್ತರಾಖಂಡದ ಡೆಹ್ರಾಡೂನ್‌ನ ಸಿಂಗ್ಲಿ ಗ್ರಾಮದಲ್ಲಿ ಚಿರತೆ ದಾಳಿಗೆ ಮೂರು ವರ್ಷದ ಬಾಲಕ ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಭೀತಿ ಮತ್ತು ಆಕ್ರೋಶಕ್ಕೆ ಕಾರಣವಾಯಿತು. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಚಿರತೆ ತನ್ನ ಮನೆಯ ಅಂಗಳದಿಂದ ಮಗು ಅಯಾನ್ಶ್ ದಿಮಾನ್ ಮೇಲೆ ದಾಳಿ ಮಾಡಿ ಎಳೆದೊಯ್ದಿತ್ತು.

ಕುಟುಂಬಸ್ಥರು ಹಾಗೂ ಸ್ಥಳೀಯರು ರಾತ್ರಿಯಿಡೀ ಕೂಂಬಿಂಗ್ ಕಾರ್ಯಾಚರಣೆ ನಡೆಸಿದರೂ ಬುಧವಾರ ಬೆಳಗ್ಗೆ ಮಗುವಿನ ಶವ ಪತ್ತೆಯಾಗಿದೆ. ಚಿರತೆ ದಾಳಿ ಮಾಡಿದಾಗ ಮಗು ತನ್ನ ತಾಯಿಯೊಂದಿಗೆ ಇತ್ತು. ಪೊಲೀಸರಿಗೆ ಎಚ್ಚರಿಕೆ ನೀಡಿದ್ದೇವೆ. ವ್ಯಾಪಕ ಹುಡುಕಾಟವನ್ನು ಪ್ರಾರಂಭಿಸಿದ್ದೇವೆ.
ಇದುವರೆಗೂ ಎಲ್ಲೂ ಚಿರತೆಯ ಕುರುಹು ಪತ್ತೆಯಾಗಿಲ್ಲ, ಬುಧವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಮಗುವಿನ ದೇಹವು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಮಗುವಿನ ತಂದೆ ಅರುಣ್ ಸಿಂಗ್ ತಿಳಿಸಿದ್ದಾರೆ.
ಅನೇಕ ಸ್ಥಳಗಳಲ್ಲಿ ಬಲೆಗಳನ್ನು ಇರಿಸಲಾಗಿದೆ. ದೊಡ್ಡ ಚಿರತೆಯನ್ನು ಸಾಯಿಸುವಂತೆ ಮಗುವಿನ ಮನೆಯವರು ಒತ್ತಾಯಿಸಿದ್ದಾರೆ. ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದು, ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.
ಮತ್ತಷ್ಟು ಓದಿ: ಚಿಕ್ಕಮಗಳೂರು: ಚಿರತೆ ದಾಳಿ; 17 ಕುರಿ, 14 ಮೇಕೆ ಸಾವು
ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕಾಡು ಪ್ರಾಣಿಗಳ ದಾಳಿಗೆ ಬಲಿಯಾದ ಕುಟುಂಬಗಳಿಗೆ 4 ರಿಂದ 5 ಲಕ್ಷ ಪರಿಹಾರ ನೀಡುವುದಾಗಿ ಹೇಳಿಕೆ ನೀಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:58 am, Fri, 29 December 23