Bihar News: ನಳಂದಾದಲ್ಲಿ 40 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 3 ವರ್ಷದ ಬಾಲಕನ ರಕ್ಷಣೆ

ಬಿಹಾರದ ನಳಂದಾ ಜಿಲ್ಲೆಯಲ್ಲಿ ಕೊಳವೆಬಾವಿಗೆ 3 ವರ್ಷದ ಬಾಲಕ ಆಕಸ್ಮಿಕವಾಗಿ ಬಿದ್ದಿದ್ದನು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದ ಅಗ್ನಿಶಾಮಕದಳದ ಸಿಬ್ಬಂದಿ ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾಲಕನನ್ನು ರಕ್ಷಣೆ ಮಾಡಿದ್ದಾರೆ.

Bihar News: ನಳಂದಾದಲ್ಲಿ 40 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 3 ವರ್ಷದ ಬಾಲಕನ ರಕ್ಷಣೆ
ಬಿಹಾರದ ನಳಂದಾ ಜಿಲ್ಲೆಯಲ್ಲಿ 40 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 3 ವರ್ಷದ ಬಾಲಕನ ರಕ್ಷಣೆImage Credit source: NBT
Follow us
Rakesh Nayak Manchi
|

Updated on:Jul 23, 2023 | 7:20 PM

ನಳಂದಾ, ಜುಲೈ 23: ಬಿಹಾರ (Bihar) ರಾಜ್ಯದ ನಳಂದಾ ಜಿಲ್ಲೆಯಲ್ಲಿ 40 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕ ಶಿವಂ ಕುಮಾರ್​ನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಬೋರ್​ವೆಲ್​ನಿಂದ ಹೊರತೆಗೆಯುತ್ತಿದ್ದಂತೆ ವೈದ್ಯರ ತಂಡ ಶಿವಂನನ್ನು ತಪಾಸಣೆ ನಡೆಸಿ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

ಬಾಲಕನನ್ನು ರಕ್ಷಿಸಿದ ನಂತರ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಸದ್ಯ ಶಿವಂನನ್ನು ಸದಾರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕೆಲವು ಗಂಟೆಗಳ ಕಾಲ ವೈದ್ಯರ ಮೇಲ್ವಿಚಾರಣೆಯಲ್ಲಿ ಇರಲಿದ್ದಾನೆ. ಹಲವು ಗಂಟೆಗಳ ಕಾಲ ಬೋರ್​ವೆಲ್​ನಲ್ಲಿನ ಕೆಸರಿನಲ್ಲಿ ಸಿಲುಕಿದ್ದ ಹಿನ್ನೆಲೆ ಪ್ರಥಮ ಚಿಕಿತ್ಸೆ ಬಹಳ ಮುಖ್ಯ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ನೀರಿನ ಕೊರತೆ; ಸಮಸ್ಯೆ ಪರಿಹಾರಕ್ಕೆ 100 ಕೊಳವೆಬಾವಿ ಕೊರೆಯಲು ಪ್ಲ್ಯಾನ್

ದೋಮನ್ ಮಾಂಝಿ ಅವರ ಮೂರು ವರ್ಷದ ಮಗ ಶಿವಂ ಭಾನುವಾರ ಬೆಳಗ್ಗೆ 9 ಗಂಟೆಗೆ ತನ್ನ ತಾಯಿಯೊಂದಿಗೆ ಜಮೀನಿಗೆ ಹೋಗುತ್ತಿದ್ದ. ಈ ವೇಳೆ ಆಟವಾಡುತ್ತಾ ಬೋರ್‌ವೆಲ್‌ನಲ್ಲಿ ಬಿದ್ದಿದ್ದಾನೆ. ಇದನ್ನು ನೋಡಿದ ತಾಯಿ ಕೂಗಾಡಿದ್ದಾರೆ. ಕ್ಷಣಾರ್ಧದಲ್ಲೇ ವಿಷಯ ಹಬ್ಬಿತು. ಜಿಲ್ಲಾಡಳಿತದಿಂದ ಜೆಸಿಬಿ ಯಂತ್ರ ಅಳವಡಿಸಿ ಮಣ್ಣು ಅಗೆಯುವ ಕಾರ್ಯ ಆರಂಭಿಸಲಾಯಿತು. ಕಾರ್ಯಾಚರಣೆಯ ಉದ್ದಕ್ಕೂ ಬಾಲಕನಿಗೆ ಆಮ್ಲಜನಕವನ್ನು ಸರಬರಾಜು ಮಾಡಲಾಗಿತ್ತು. ಇದನ್ನು ಸಿಸಿ ಕ್ಯಾಮೆರಾದ ಮೂಲಕ ಮೇಲ್ವಿಚಾರಣೆ ಮಾಡಲಾಗಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ NDRF ತಂಡ ಬಾಲಕನನ್ನು ಸುರಕ್ಷಿತವಾಗಿ ಹೊರತೆಗೆದಿದೆ.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ಆರೇಳು ಜೆಸಿಬಿಗಳ ಸಹಾಯದಿಂದ ಭೂಮಿ ಕೊರೆದು ಬಾಲಕನನ್ನು ರಕ್ಷಿಸಿವೆ. ಸದ್ಯ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಶಾಂಕ್ ಶುಭಂಕರ್ ಹೇಳಿದ್ದಾರೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 pm, Sun, 23 July 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್