3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ. 3 ವರ್ಷದ ಹೆಣ್ಣುಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ ಆರೋಪಿಯು ಆಕೆಯ ತಂದೆಯನ್ನು ಭೇಟಿಯಾಗುವ ನೆಪದಲ್ಲಿ ಅವರ ಮನೆಗೆ ಬಂದಿದ್ದ. ಆತ ಹೊರಗೆ ಹೋಗಿದ್ದರಿಂದ ಆತ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಮಗಳಂತಿದ್ದ ಮಗುವಿನ ಮೇಲೆ ಈ ರೀತಿ ಅಸಹ್ಯಕರ ರೀತಿಯಲ್ಲಿ ಅತ್ಯಾಚಾರ ನಡೆಸಿರುವುದು ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ.

3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ
Child Abuse

Updated on: Feb 19, 2026 | 3:52 PM

ವಿಶಾಖಪಟ್ಟಣಂ, ಫೆಬ್ರವರಿ 19: ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೆಡಗಂಟ್ಯಾಡ ಮಂಡಲದಲ್ಲಿ 3 ವರ್ಷದ ಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ (Sexually Harassment) ಎಸಗಿದ್ದಾನೆ. ಆಕೆಯ ತಂದೆಯನ್ನು ಭೇಟಿಯಾಗುವ ನೆಪದಲ್ಲಿ ಆತ ಮನೆಗೆ ಬಂದಿದ್ದ. ಆದರೆ, ಆಕೆಯ ಅಪ್ಪ ಮನೆಯಲ್ಲಿರಲಿಲ್ಲ. ಅಮ್ಮ ಒಳಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಆ ಆರೋಪಿಯು ಮಗುವಿಗೆ ಬಿಸ್ಕತ್ ಕೊಡಿಸುತ್ತೇನೆ ಎಂದು ಹತ್ತಿರದ ದಿನಸಿ ಅಂಗಡಿಗೆ ಕರೆದೊಯ್ದನು.

ಆಕೆಯನ್ನು ಅಂಗಡಿಗೆ ಕರೆದುಕೊಂಡು ಹೋಗುವಾಗ ಮಧ್ಯದಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದಾದ ನಂತರ ಏನೂ ಆಗಿಯೇ ಇಲ್ಲವೆಂಬಂತೆ ಅವನು ಅವಳನ್ನು ವಾಪಾಸ್ ಕರೆದುಕೊಂಡು ಬಂದು ಅವಳ ಮನೆಯಲ್ಲಿ ಬಿಟ್ಟು ಓಡಿಹೋಗಿದ್ದಾನೆ. ಮನೆಯಲ್ಲಿ ಆ ಮಗು ನೋವಿನಿಂದ ನಿರಂತರವಾಗಿ ಅಳುತ್ತಲೇ ಇದ್ದುದರಿಂದ ಆ ಮಗುವಿನ ತಾಯಿ ಅವಳನ್ನು ಪರೀಕ್ಷಿಸಿದಾಗ ರಕ್ತದ ಕಲೆಗಳು ಕಂಡುಬಂದವು. ಏನಾಯಿತೆಂದು ಕೇಳಿದಾಗ ಆಕೆ ನಡೆದ ವಿಚಾರ ಹೇಳಿದಳು. ಆರೋಪಿಯ ವಿರುದ್ಧ ಬಿಎನ್‌ಎಸ್ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಉದ್ಯಮಿ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಬಿಗ್​​​​ ಟ್ವಿಸ್ಟ್​: ಪೆರೋಲ್ ಮೇಲೆ ಹೊರಬಂದಿದ್ದ ಕುಖ್ಯಾತ ಖೈದಿಯಿಂದಲ್ಲೇ ಕನ್ನ!

ಈ ಘಟನೆಯ ಬಗ್ಗೆ ರಾಜ್ಯ ಮಹಿಳಾ ಆಯೋಗವು ತನ್ನ ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಆಯೋಗದ ಅಧ್ಯಕ್ಷೆ ರಾಯಪತಿ ಶೈಲಜಾ ಅವರು ವಿಶಾಖಪಟ್ಟಣ ಸಿಪಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಅವರು ಮಗುವಿನ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದ್ದು, ಆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಆಯೋಗ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದಿದ್ದಾರೆ. ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಚಿಕ್ಕ ಮಕ್ಕಳಿಗೆ ಮನೆಯಲ್ಲೂ ಸುರಕ್ಷತೆ ಇಲ್ಲದಂತಾಗಿರುವುದು ಆತಂಕ ಸೃಷ್ಟಿಸಿದೆ. ಆಗಾಗ ಮನೆಗೆ ಬಂದು ಹೋಗುತ್ತಿದ್ದ, ತಮ್ಮ ಮನೆಯವನಂತೆಯೇ ಇದ್ದ ವ್ಯಕ್ತಿ ಚಿಕ್ಕ ಮಗುವಿನ ಮೇಲೆ ತನ್ನ ಕಾಮತೃಷೆ ತೀರಿಸಿಕೊಂಡಿರುವುದು ಆ ಕುಟುಂಬಕ್ಕೆ ಆಘಾತ ಮೂಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us