ಮಧ್ಯಪ್ರದೇಶದಲ್ಲಿ ಆಮ್​ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ 300 ಯುನಿಟ್​ವರೆಗೆ ವಿದ್ಯುತ್ ಉಚಿತ, 3 ಸಾವಿರ ರೂ ನಿರುದ್ಯೋಗ ಭತ್ಯೆ: ಕೇಜ್ರಿವಾಲ್

|

Updated on: Aug 21, 2023 | 12:46 PM

ಒಂದೊಮ್ಮೆ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ 300 ಯುನಿಟ್​ ವಿದ್ಯುತ್ ಉಚಿತವಾಗಿ ನೀಡುವ ಭರವಸೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಮಧ್ಯಪ್ರದೇಶದ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ.ಗಳ ಜೊತೆಗೆ ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಮತ್ತು ಗುಣಮಟ್ಟದ ಶಾಲೆಗಳ ನಿರ್ಮಾಣ ಸೇರಿದಂತೆ ವಿವಿಧ ಖಾತರಿಗಳನ್ನು ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ಆಮ್​ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ 300 ಯುನಿಟ್​ವರೆಗೆ ವಿದ್ಯುತ್ ಉಚಿತ, 3 ಸಾವಿರ ರೂ ನಿರುದ್ಯೋಗ ಭತ್ಯೆ: ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Image Credit source: NDTV
Follow us on

ಒಂದೊಮ್ಮೆ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ(Aam Aadmi Party)ಗೆಲುವು ಸಾಧಿಸಿದರೆ 300 ಯುನಿಟ್​ ವಿದ್ಯುತ್ ಉಚಿತವಾಗಿ ನೀಡುವ ಭರವಸೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಮಧ್ಯಪ್ರದೇಶದ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ.ಗಳ ಜೊತೆಗೆ ಉಚಿತ ವಿದ್ಯುತ್, ವೈದ್ಯಕೀಯ ಚಿಕಿತ್ಸೆ ಮತ್ತು ಗುಣಮಟ್ಟದ ಶಾಲೆಗಳ ನಿರ್ಮಾಣ ಸೇರಿದಂತೆ ವಿವಿಧ ಖಾತರಿಗಳನ್ನು ನೀಡಿದ್ದಾರೆ.

ಸತ್ನಾದಲ್ಲಿ ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಎಎಪಿ ನಾಯಕ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಪರೋಕ್ಷವಾಗಿ ಗೇಲಿ ಮಾಡಿದರು. ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಸಾಕಷ್ಟು ಅವಕಾಶ ನೀಡಿದ್ದೀರಿ. ದೆಹಲಿ ಮತ್ತು ಪಂಜಾಬ್‌ನಲ್ಲಿರುವ ನಮ್ಮ ಸರ್ಕಾರವನ್ನು ನೋಡಿ, ನಾವು ಎಲ್ಲಾ ಭರವಸೆಗಳನ್ನು ಪೂರೈಸುತ್ತೇವೆ. ಇದು ಕೇಜ್ರಿವಾಲ್ ಗ್ಯಾರಂಟಿ ಎಂದರು.

ತಾವು ಅಧಿಕಾರಕ್ಕೆ ಬಂದರೆ ಎಎಪಿ ಸರ್ಕಾರ ಉಚಿತ ಶಿಕ್ಷಣ ನೀಡಲು ಗುಣಮಟ್ಟದ ಶಾಲೆಗಳನ್ನು ನಿರ್ಮಿಸಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಆಸ್ಪತ್ರೆಗಳಲ್ಲಿ ರೂ 20 ಲಕ್ಷ ವೆಚ್ಚದ ಪರೀಕ್ಷೆಗಳು ಮತ್ತು ಶಸ್ತ್ರಚಿಕಿತ್ಸೆಗಳು ಮತ್ತು ನಿರುದ್ಯೋಗಿ ಯುವಕರಿಗೆ ತಿಂಗಳಿಗೆ 3,000 ರೂ. ನಿರುದ್ಯೋಗ ಭತ್ಯೆ ಸೇರಿದಂತೆ ಉಚಿತ ಚಿಕಿತ್ಸೆಯನ್ನು ಒದಗಿಸುತ್ತೇವೆ ಎಂದು ಹೇಳಿದರು.

ಮತ್ತಷ್ಟು ಓದಿ: ನಿಮ್ಮ ಚಾಚಾ ಬಂದಿದ್ದಾರೆ, ಮಾಮನನ್ನು ನಂಬಬೇಡಿ’: ಮಧ್ಯಪ್ರದೇಶ ಸಿಎಂ ಶಿವರಾಜ್ ಚೌಹಾಣ್ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ಎಎಪಿ ಅಧಿಕಾರಕ್ಕೆ ಬಂದರೆ ನವೆಂಬರ್ 30ರವರೆಗೆ ಬಾಕಿ ಇರುವ ವಿದ್ಯುತ್ ಬಿಲ್ ಮನ್ನಾ ಮಾಡಲಾಗುವುದು ಎಂದರು. ಎಎಪಿ ಆಡಳಿತವಿರುವ ದೆಹಲಿ ಮತ್ತು ಪಂಜಾಬ್‌ನ ಉದಾಹರಣೆಯನ್ನು ಉಲ್ಲೇಖಿಸಿದ ಅವರು, ತಾತ್ಕಾಲಿಕ ಅಥವಾ ಗುತ್ತಿಗೆ ನೌಕರರ ಸೇವೆಗಳನ್ನು ಕಾಯಂಗೊಳಿಸಲಾಗುವುದು ಎಂದು ಹೇಳಿದರು.