NZC: ಜೈಪುರದಲ್ಲಿ ಉತ್ತರ ವಲಯ ಮಂಡಳಿಯ 30 ನೇ ಸಭೆ ಯಶಸ್ವಿ: ಬಗೆಹರಿದ ರಾಜ್ಯಗಳ 35 ಸಮಸ್ಯೆಗಳು

ರಾಜಸ್ಥಾನದ ಜೈಪುರದಲ್ಲಿ ಇಂದು (ಜುಲೈ 9) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಉತ್ತರ ವಲಯ ಮಂಡಳಿಯ (NZC) 30 ನೇ ಸಭೆ ನಡೆಯಿತು.

NZC: ಜೈಪುರದಲ್ಲಿ ಉತ್ತರ ವಲಯ ಮಂಡಳಿಯ 30 ನೇ ಸಭೆ ಯಶಸ್ವಿ: ಬಗೆಹರಿದ ರಾಜ್ಯಗಳ 35 ಸಮಸ್ಯೆಗಳು
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 09, 2022 | 10:37 PM

ಜೈಪುರ: ರಾಜಸ್ಥಾನದ (Rajsthan) ಜೈಪುರದಲ್ಲಿ (Jaipur) ಇಂದು (ಜುಲೈ 9) ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah) ಅವರ ಅಧ್ಯಕ್ಷತೆಯಲ್ಲಿ ಉತ್ತರ ವಲಯ ಮಂಡಳಿಯ (NZC) 30 ನೇ ಸಭೆ ನಡೆಯಿತು. ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ ಉತ್ತಮಗೊಳಿಸುವುದು, ಅಂತರ ರಾಜ್ಯ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದು. ರಾಜ್ಯಗಳ ನಡುವೆ ಪ್ರಾದೇಶಿಕ ಸಹಕಾರವನ್ನು ಹೆಚ್ಚಿಸುವುದು ಮತ್ತು ದೇಶದಾದ್ಯಂತ ಜಾರಿಗೆ ತರಬೇಕಾದ ಸಾಮಾನ್ಯ ರಾಷ್ಟ್ರೀಯ ಯೋಜನೆಗಳ ಕುರಿತು ಚರ್ಚಿಸಲಾಗಿದೆ.

ಸಭೆಯಲ್ಲಿ ರಾಜ್ಯಗಳ 47 ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ. ಅದರಲ್ಲಿ 4 ರಾಷ್ಟ್ರೀಯ ಸಮಸ್ಯೆಗಳಾಗಿವೆ. 47 ಸಮಸ್ಯೆಗಳಲ್ಲಿ 35 ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಸಭೆಯಲ್ಲಿ ಚರ್ಚಿಸಲಾದ ಕೆಲವು ಅಂಶಗಳು ಇಲ್ಲಿವೆ

1. ಭಾಕ್ರಾ ಮತ್ತು ಪಾಂಗ್ ಅಣೆಕಟ್ಟಿನ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸುವುದು.

2. ಬಾಲಕಿಯರ ಮೇಲೆ  ಅತ್ಯಾಚಾರ ಪ್ರಕರಣಗಳನ್ನು POCSO ಕಾಯ್ದೆಯಡಿ ದಾಖಲಿಸಿಕೊಂಡು ತನಿಖೆಯನ್ನು ಚುರುಕುಗೊಳಿಸಿ ಪ್ರಕರಣವನ್ನು ಬೇಗ ಇತ್ಯರ್ಥಗೊಳಿಸುವುದು.

3. ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಡೈರೆಕ್ಟ್​ ಬೆನಿಫಿಟ್​ ಟ್ರಾನ್ಸಫರ್​ (DBT) ಯನ್ನು ಅತ್ಯುತ್ತಮವಾಗಿ ಬಳಸಿಕೊಳ್ಳುವುದು.

4. PMGSY ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣ ಮಾಡುವುದು.

5. ಬೇಳೆಗಳನ್ನು ಬೆಳೆದ ನಂತರ ಅದರ ಹುಲ್ಲು-ದಂಟುಗಳ ಸುಡುವುದನ್ನು ತಡೆಯುವುದು.

6. ಭದ್ರತೆ, ಸೈಬರ್ ಕ್ರೈಮ್, ಡ್ರಗ್ಸ್ ವ್ಯಾಪಾರ, ರಾಜ್ಯಗಳ ನಡುವಿನ ಪರಸ್ಪರ ಗಡಿ ವಿವಾದ, ರಸ್ತೆ, ಸಾರಿಗೆ, ಕೈಗಾರಿಕೆಗಳು, ನೀರು, ವಿದ್ಯುತ್ ಮತ್ತು ಇತರ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.

ಉತ್ತರ ವಲಯ ಮಂಡಳಿಯಲ್ಲಿ ಉತ್ತರ ಭಾರತದ ದೆಹಲಿ, ರಾಜಸ್ಥಾನ, ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್ ರಾಜ್ಯಗಳು  ಮತ್ತು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಚಂಡೀಗಢ ಕೇಂದ್ರಾಡಳಿತ ಪ್ರದೇಶಗಳು ಒಳಗೊಂಡಿವೆ. NZC ಯ ಕೊನೆಯ ಸಭೆಯು 2019 ರಲ್ಲಿ ಚಂಡೀಗಢದಲ್ಲಿ ನಡೆದಿತ್ತು.

25 ವರ್ಷಗಳ ನಂತರ ಜೈಪುರದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ರಾಜ್ಯಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯ ಪ್ರಮುಖ ವಿಷಯಗಳ ಕುರಿತು ಚರ್ಚೆಗಳು ನಡೆದಿವೆ. ರಾಜ್ಯಗಳಿಂದ ಅಭಿಪ್ರಾಯಗಳನ್ನು ಪಡೆಯಲಾಗಿದೆ. ಈ ಸಭೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಉತ್ತಮ ಕಾರ್ಯವೈಖರಿ ಕುರಿತು ಮಾಹಿತಿ ಹಂಚಿಕೊಳ್ಳಲು ಉತ್ತಮ ವೇದಿಕೆಯಾಗಿದೆ.

ಸಭೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮತ್ತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ (LG) ವಿನಯ್ ಕುಮಾರ್ ಸಕ್ಸೇನಾ, ಲಡಾಖ್‌ನ ಎಲ್‌ಜಿ ಆರ್‌ಕೆ ಮಾಥುರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವರಿ ಲಾಲ್ ಪುರೋಹಿತ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು