ತಮಿಳುನಾಡಿನ ಕಾಲ್ತುಳಿತ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ; ಕರೂರಿಗೆ ನಾಳೆ ಸಿಎಂ ಸ್ಟಾಲಿನ್ ಭೇಟಿ
Tamil Nadu Stampede: ತಮಿಳುನಾಡಿನಲ್ಲಿ ನಟ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ಪ್ರಚಾರ ರ್ಯಾಲಿಯ ವೇಳೆ ಹತ್ತಾರು ಸಾವಿರ ಜನರು ಸೇರಿದ್ದರು. ಕರೂರಿನಲ್ಲಿ ನಡೆದ ಈ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ ಇದುವರೆಗೂ 31 ಜನರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನಾಳೆ ಕರೂರಿಗೆ ಭೇಟಿ ನೀಡಿ ಮೃತರ ಕುಟುಂಬಸ್ಥರನ್ನು ಮತ್ತು ಗಾಯಾಳುಗಳನ್ನು ಭೇಟಿಯಾಗಲಿದ್ದಾರೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿದ್ದಾರೆ.

ಕರೂರು, ಸೆಪ್ಟೆಂಬರ್ 27: ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ದಳಪತಿ ಆಯೋಜಿಸಿದ್ದ ಪ್ರಚಾರದ ರ್ಯಾಲಿಯ ವೇಳೆ ಕಾಲ್ತುಳಿತ ಉಂಟಾಗಿ 31 ಅಮಾಯಕ ಜನರು ಮೃತಪಟ್ಟಿದ್ದಾರೆ. ಇನ್ನೂ 60ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟದ ತೊಂದರೆ ಅನುಭವಿಸಿದ ಜನರು ಮೂರ್ಛೆ ತಪ್ಪ ಬಿದ್ದರು. ಅಲ್ಲದೆ, ಇಂದು ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಅದೇವೇಳೆ ನೂಕುನುಗ್ಗಲಾಗಿದ್ದರಿಂದ ಮೂರ್ಛೆ ತಪ್ಪಿ ಬಿದ್ದರು. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ತಮಿಳುನಾಡು ಕಾಲ್ತುಳಿತ ಘಟನೆಯ ಬಗ್ಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಾಹಿತಿ ಪಡೆದಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ನಾಳೆ (ಭಾನುವಾರ) ಕರೂರ್‌ಗೆ ಭೇಟಿ ನೀಡುವ ಸಾಧ್ಯತೆ ಇದೆ. ಗಾಯಾಳುಗಳಿಗೆ ತಕ್ಷಣದ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Stampede-like situation at actor-politician Vijay’s rally in Karur, Tamil Nadu
10 killed, including 3 children & 7 supporters of his party TVK
Crowd had been waiting for over 6 hours, Vijay reportedly arrived late
State Health Minister rushed to Karur. CM Stalin… pic.twitter.com/VtQ46aeSCa
— Nabila Jamal (@nabilajamal_) September 27, 2025
ಇದನ್ನೂ ಓದಿ: ಆರ್ಸಿಬಿ ವಿಜಯೋತ್ಸವ ಕಾಲ್ತುಳಿತ: ಬಿಜೆಪಿ ಅವಧಿಯ ದುರಂತಗಳ ಲೆಕ್ಕ ಕೊಟ್ಟು ಸರ್ಕಾರವನ್ನು ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
கரூரிலிருந்து வரும் செய்திகள் கவலையளிக்கின்றன.
கூட்ட நெரிசலில் சிக்கி மயக்கமுற்று மருத்துவமனையில் அனுமதிக்கப்பட்டுள்ள பொதுமக்களுக்குத் தேவையான உடனடி சிகிச்சைகளை அளித்திடும்படி, முன்னாள் அமைச்சர் @V_Senthilbalaji, மாண்புமிகு அமைச்சர் @Subramanian_Ma அவர்களையும் – மாவட்ட…
— M.K.Stalin – தமிழ்நாட்டை தலைகுனிய விடமாட்டேன் (@mkstalin) September 27, 2025
“ಕರೂರ್ ನಿಂದ ಬರುತ್ತಿರುವ ಸುದ್ದಿ ಆತಂಕಕಾರಿಯಾಗಿದೆ. ಕಾಲ್ತುಳಿತದಿಂದಾಗಿ ಮೂರ್ಛೆ ಹೋಗಿ ಆಸ್ಪತ್ರೆಗೆ ದಾಖಲಾಗಿರುವ ಸಾರ್ವಜನಿಕರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಾನು ಸೂಚಿಸಿದ್ದೇನೆ” ಎಂದು ಸಿಎಂ ಸ್ಟಾಲಿನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
The unfortunate incident during a political rally in Karur, Tamil Nadu, is deeply saddening. My thoughts are with the families who have lost their loved ones. Wishing strength to them in this difficult time. Praying for a swift recovery to all those injured.
— Narendra Modi (@narendramodi) September 27, 2025
ಪ್ರಧಾನಿ ಮೋದಿ ಸಂತಾಪ:
ತಮಿಳುನಾಡಿನ ಕರೂರ್ ನಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. “ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯ ಸಂದರ್ಭದಲ್ಲಿ ನಡೆದ ದುರದೃಷ್ಟಕರ ಘಟನೆ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನಾವಿದ್ದೇವೆ. ಈ ಕಷ್ಟದ ಸಮಯದಲ್ಲಿ ಅವರಿಗೆ ದೇವರು ಶಕ್ತಿ ತುಂಬಲಿ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ತಮಿಳುನಾಡಿನಲ್ಲಿ ವಿಜಯ್ ರ್ಯಾಲಿ ವೇಳೆ ಕಾಲ್ತುಳಿತ; 31 ಜನ ಸಾವು
Deeply anguished by the tragic accident at a rally in Karur, Tamil Nadu. The loss of innocent lives is truly heartbreaking. My heartfelt condolences to the bereaved families. Praying for the speedy recovery of those who are injured.
— Rajnath Singh (@rajnathsingh) September 27, 2025
ರಾಜನಾಥ್ ಸಿಂಗ್ ಸಂತಾಪ:
ಕರೂರಿನಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ದುಃಖ ವ್ಯಕ್ತಪಡಿಸಿದ್ದಾರೆ. “ತಮಿಳುನಾಡಿನ ಕರೂರಿನಲ್ಲಿ ನಡೆದ ರ್ಯಾಲಿಯಲ್ಲಿ ಸಂಭವಿಸಿದ ದುರಂತ ಅಪಘಾತದಿಂದ ತೀವ್ರ ದುಃಖವಾಗಿದೆ. ಅಮಾಯಕರ ಜೀವಹಾನಿ ನಿಜಕ್ಕೂ ಹೃದಯವಿದ್ರಾವಕವಾಗಿದೆ. ಮೃತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:00 pm, Sat, 27 September 25




