AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚಳ; 24ಗಂಟೆಯಲ್ಲಿ 3205 ಪ್ರಕರಣಗಳು ದಾಖಲು, 31ಮಂದಿ ಸಾವು

ದೇಶದಲ್ಲಿ ಇದುವರೆಗೆ 5,23,920 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಅತಿ ಹೆಚ್ಚು ಸಾವು ವರದಿಯಾಗಿದ್ದು ಮಹಾರಾಷ್ಟ್ರದಲ್ಲಿ. ಅಲ್ಲಿ ಇವತ್ತಿನವರೆ 1,47,845 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚಳ; 24ಗಂಟೆಯಲ್ಲಿ 3205 ಪ್ರಕರಣಗಳು ದಾಖಲು, 31ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 04, 2022 | 12:08 PM

Share

ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24ಗಂಟೆಯಲ್ಲಿ 3205 ಹೊಸ ಕೇಸ್​ಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19,509ಕ್ಕೆ ಏರಿಕೆಯಾಗಿದೆ. ಈ ಮೂಲಕ ದೇಶದ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ  4,30,88,118 ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ದೇಶದಲ್ಲಿ 24ಗಂಟೆಯಲ್ಲಿ 31 ಮಂದಿ ಕೊರೊನಾ ಸೊಂಕಿನಿಂದ ಸತ್ತಿದ್ದು, ಅದರಲ್ಲಿ 29 ಜನ ಕೇರಳದವರೇ ಆಗಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾದಿಂದ ಮೃತಪಟ್ಟವರು  5,23,920 ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವಿಕೆಯ ಪ್ರಮಾಣ ಶೇ.98.74ರಷ್ಟಿದೆ. ದೈನಂದಿನ ಪಾಸಿಟಿವಿಟಿ ರೇಟ್​ ಶೇ.0.98ರಷ್ಟಿದ್ದು, ವಾರದ ಪಾಸಿಟಿವಿಟಿ ರೇಟ್​ 0.76 ಇದೆ. ಹಾಗೇ, ಸಾವಿನ ಪ್ರಮಾಣ ಶೇ.1.22ರಷ್ಟಿದ್ದು ಇದುವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,25,44,689. ಇದರೊಂದಿಗೆ ದೇಶದಲ್ಲಿ ಕೊರೊನಾ ಲಸಿಕೆ ನೀಡಿಕೆ ಅಭಿಯಾನವೂ ಕೂಡ ವೇಗವಾಗಿ ನಡೆಯುತ್ತಿದ್ದು, 189.48 ಕೋಟಿ ಜನರಿಗೆ ಎರಡೂ ಡೋಸ್​ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಇದುವರೆಗೆ 5,23,920 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಅತಿ ಹೆಚ್ಚು ಸಾವು ವರದಿಯಾಗಿದ್ದು ಮಹಾರಾಷ್ಟ್ರದಲ್ಲಿ. ಅಲ್ಲಿ ಇವತ್ತಿನವರೆ 1,47,845 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಅದಾದ ಬಳಿಕ ಕೇರಳದಲ್ಲಿ 69,112, ಕರ್ನಾಟಕದಲ್ಲಿ 40,102,  ತಮಿಳುನಾಡಲ್ಲಿ 38,025, ದೆಹಲಿಯಲ್ಲಿ 26,176 ಮತ್ತು ಉತ್ತರಪ್ರದೇಶದಿಂದ 23,508, ಪಶ್ಚಿಮ ಬಂಗಾಳದಲ್ಲಿ  21,202 ಜನರು ಸಾವನ್ನಪ್ಪಿದ್ದಾರೆ. ಇಲ್ಲಿ ಕೊರೊನಾದಿಂದ ಸಾವನ್ನಪ್ಪಿರುವ ಶೇ70ರಷ್ಟು ಜನರಿಗೆ ಬೇರೆ ಕೆಲವು ಕಾಯಿಲೆಗಳು ಇದ್ದವು ಎಂಬುದನ್ನು ಆರೋಗ್ಯ ಸಚಿವಾಲಯ ತಿಳಿಸಿದೆ.

ಇನ್ನಷ್ಟು ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Wed, 4 May 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ