ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24ಗಂಟೆಯಲ್ಲಿ 3205 ಹೊಸ ಕೇಸ್ಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19,509ಕ್ಕೆ ಏರಿಕೆಯಾಗಿದೆ. ಈ ಮೂಲಕ ದೇಶದ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 4,30,88,118 ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ದೇಶದಲ್ಲಿ 24ಗಂಟೆಯಲ್ಲಿ 31 ಮಂದಿ ಕೊರೊನಾ ಸೊಂಕಿನಿಂದ ಸತ್ತಿದ್ದು, ಅದರಲ್ಲಿ 29 ಜನ ಕೇರಳದವರೇ ಆಗಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾದಿಂದ ಮೃತಪಟ್ಟವರು 5,23,920 ಎಂದು ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವಿಕೆಯ ಪ್ರಮಾಣ ಶೇ.98.74ರಷ್ಟಿದೆ. ದೈನಂದಿನ ಪಾಸಿಟಿವಿಟಿ ರೇಟ್ ಶೇ.0.98ರಷ್ಟಿದ್ದು, ವಾರದ ಪಾಸಿಟಿವಿಟಿ ರೇಟ್ 0.76 ಇದೆ. ಹಾಗೇ, ಸಾವಿನ ಪ್ರಮಾಣ ಶೇ.1.22ರಷ್ಟಿದ್ದು ಇದುವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,25,44,689. ಇದರೊಂದಿಗೆ ದೇಶದಲ್ಲಿ ಕೊರೊನಾ ಲಸಿಕೆ ನೀಡಿಕೆ ಅಭಿಯಾನವೂ ಕೂಡ ವೇಗವಾಗಿ ನಡೆಯುತ್ತಿದ್ದು, 189.48 ಕೋಟಿ ಜನರಿಗೆ ಎರಡೂ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಇದುವರೆಗೆ 5,23,920 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಅತಿ ಹೆಚ್ಚು ಸಾವು ವರದಿಯಾಗಿದ್ದು ಮಹಾರಾಷ್ಟ್ರದಲ್ಲಿ. ಅಲ್ಲಿ ಇವತ್ತಿನವರೆ 1,47,845 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಅದಾದ ಬಳಿಕ ಕೇರಳದಲ್ಲಿ 69,112, ಕರ್ನಾಟಕದಲ್ಲಿ 40,102, ತಮಿಳುನಾಡಲ್ಲಿ 38,025, ದೆಹಲಿಯಲ್ಲಿ 26,176 ಮತ್ತು ಉತ್ತರಪ್ರದೇಶದಿಂದ 23,508, ಪಶ್ಚಿಮ ಬಂಗಾಳದಲ್ಲಿ 21,202 ಜನರು ಸಾವನ್ನಪ್ಪಿದ್ದಾರೆ. ಇಲ್ಲಿ ಕೊರೊನಾದಿಂದ ಸಾವನ್ನಪ್ಪಿರುವ ಶೇ70ರಷ್ಟು ಜನರಿಗೆ ಬೇರೆ ಕೆಲವು ಕಾಯಿಲೆಗಳು ಇದ್ದವು ಎಂಬುದನ್ನು ಆರೋಗ್ಯ ಸಚಿವಾಲಯ ತಿಳಿಸಿದೆ.
Published On - 12:08 pm, Wed, 4 May 22