ದೆಹಲಿ ದಳ್ಳುರಿ: ಮೃತರ ಸಂಖ್ಯೆ 34ಕ್ಕೆ ಏರಿಕೆ, ಪರೀಕ್ಷೆಗಳು ಮುಂದೂಡಿಕೆ

ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ಸ್ಥಳೀಯರನ್ನ ಕಂಗಾಲಾಗುವಂತೆ ಮಾಡಿದೆ. ಸದ್ಯದ ಮಟ್ಟಿಗೆ ದೆಹಲಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನ ಮುಂದೂಡಲಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಮೇಲೂ ತೂಗುಗತ್ತಿ ನೆತಾಡುತ್ತಿದೆ. ಈ ಮಧ್ಯೆ ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕೂಡ ಹರಸಾಹಸಪಡ್ತಿದೆ. ದೆಹಲಿ ಗಲಭೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. ಬಾಡಿಗೆ ತಾಯ್ತನ ಮಸೂದೆಗೆ ಒಪ್ಪಿಗೆ: ಬಾಡಿಗೆ ತಾಯ್ತನ ನಿಯಂತ್ರಣ ಮಸೂದೆಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ. ರಾಜ್ಯಸಭೆ ಆಯ್ಕೆ ಸಮಿತಿ ಮಾಡಿದ್ದ ಪ್ರಮುಖ ಶಿಫಾರಸುಗಳನ್ನ ಅಳವಡಿಸಿಕೊಂಡ ನಂತರ ಅನುಮೋದನೆ […]

ದೆಹಲಿ ದಳ್ಳುರಿ: ಮೃತರ ಸಂಖ್ಯೆ 34ಕ್ಕೆ ಏರಿಕೆ, ಪರೀಕ್ಷೆಗಳು ಮುಂದೂಡಿಕೆ
ಸಾಧು ಶ್ರೀನಾಥ್​

Updated on: Feb 27, 2020 | 11:10 AM

ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ಸ್ಥಳೀಯರನ್ನ ಕಂಗಾಲಾಗುವಂತೆ ಮಾಡಿದೆ. ಸದ್ಯದ ಮಟ್ಟಿಗೆ ದೆಹಲಿಯಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನ ಮುಂದೂಡಲಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಮೇಲೂ ತೂಗುಗತ್ತಿ ನೆತಾಡುತ್ತಿದೆ. ಈ ಮಧ್ಯೆ ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕೂಡ ಹರಸಾಹಸಪಡ್ತಿದೆ. ದೆಹಲಿ ಗಲಭೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.

ಬಾಡಿಗೆ ತಾಯ್ತನ ಮಸೂದೆಗೆ ಒಪ್ಪಿಗೆ:
ಬಾಡಿಗೆ ತಾಯ್ತನ ನಿಯಂತ್ರಣ ಮಸೂದೆಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ. ರಾಜ್ಯಸಭೆ ಆಯ್ಕೆ ಸಮಿತಿ ಮಾಡಿದ್ದ ಪ್ರಮುಖ ಶಿಫಾರಸುಗಳನ್ನ ಅಳವಡಿಸಿಕೊಂಡ ನಂತರ ಅನುಮೋದನೆ ನೀಡಲಾಗಿದೆ. ಮಸೂದೆಗೆ ಅನುಮೋದನೆ ನೀಡಿರುವ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ.

ಎಟಿಎಂಗಳಲ್ಲಿ ಸಿಗಲ್ಲ ₹2000..!
ಎಟಿಎಂಗಳಲ್ಲಿ 2000 ಮುಖ ಬೆಲೆಯ ನೋಟುಗಳು ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಪಿಂಕ್ ನೋಟ್ ಸಹ ಬ್ಯಾನ್ ಆಗಲಿದೆಯಾ ಎಂಬ ಅನುಮಾನ ಎದುರಾಗಿದೆ. ಚಿಲ್ಲರೆ ಪಡೆಯಲು ಗ್ರಾಹಕರು ಸಂಕಷ್ಟ ಎದುರುಸ್ತಿರುವ ಹಿನ್ನೆಲೆಯಲ್ಲಿ 2 ಸಾವಿರ ನೋಟುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಬ್ಯಾಂಕ್​ಗಳು ತಿಳಿಸಿವೆ.

Published On - 10:24 am, Thu, 27 February 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us