ರಾಜಸ್ತಾನದಲ್ಲಿ ಮಕ್ಕಳಿಗೆ ಮಾರಕವಾಗುತ್ತಿದೆ ಕೊರೊನಾ ಸೋಂಕು; ಒಂದೇ ಜಿಲ್ಲೆಯಲ್ಲಿ 345 ಮಕ್ಕಳಲ್ಲಿ ವೈರಸ್ ದೃಢ

ರಾಜಸ್ಥಾನದ ಡುಂಗರ್​​ಪುರ ಜಿಲ್ಲೆಯಲ್ಲಿ ಕಳೆದ 10-12ದಿನಗಳಲ್ಲಿ 18ವರ್ಷಕ್ಕಿಂತ ಕೆಳಗಿನ, 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ದೃಢಪಟ್ಟಿದೆ.

ರಾಜಸ್ತಾನದಲ್ಲಿ ಮಕ್ಕಳಿಗೆ ಮಾರಕವಾಗುತ್ತಿದೆ ಕೊರೊನಾ ಸೋಂಕು; ಒಂದೇ ಜಿಲ್ಲೆಯಲ್ಲಿ 345 ಮಕ್ಕಳಲ್ಲಿ ವೈರಸ್ ದೃಢ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: May 23, 2021 | 5:16 PM

ಮಾರಕ ಕೊವಿಡ್ 19 ಎರಡನೇ ಅಲೆಯ ವಿರುದ್ಧ ಭಾರತ ಅವಿರತವಾಗಿ ಹೋರಾಡುತ್ತಿದೆ. ಹೀಗಿರುವಾಗ ಕೊವಿಡ್​ ಮೂರನೇ ಅಲೆ ಬಂದರೆ ಅದು ಮಕ್ಕಳಿಗೇ ಆಗಿರುತ್ತದೆ ಎಂದು ತಜ್ಞರು ಹೇಳಿದ್ದಾರೆ. ಈ ಮಧ್ಯೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 10-12ವರ್ಷದವರೆಗಿನ ಸುಮಾರು 345 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಆತಂಕ ಮೂಡಿಸಿದೆ. ಕಳೆದ 10ದಿನಗಳಲ್ಲಿ ಸುಮಾರು 500 ಮಕ್ಕಳಲ್ಲಿ ಕೊರೊನಾ ಕಾಣಿಸಿಕೊಂಡಿದ್ದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಕೊರೊನಾ ಎರಡನೇ ಅಲೆ, ಮೊದಲ ಅಲೆಗಿಂತಲೂ ವಿಭಿನ್ನವಾಗಿದ್ದು, ಪ್ರಸರಣದ ಪ್ರಭಾವ ಹೆಚ್ಚಾಗಿದೆ. ಹಳ್ಳಿಗಳಿಗೂ ವ್ಯಾಪಿಸಿದೆ. ಯುವಜನರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಷ್ಟೇ ಅಲ್ಲ, ಆರೋಗ್ಯವಂತ ಯುವಜನರೂ ಕೂಡ ಕೊರೊನಾದಿಂದ ಜೀವ ಬಿಡುತ್ತಿದ್ದಾರೆ.

ಡುಂಗರ್​ಪುರದಲ್ಲಿ 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊವಿಡ್​ ಸೋಂಕು ಇನ್ನು ರಾಜಸ್ಥಾನದ ಡುಂಗರ್​​ಪುರ ಜಿಲ್ಲೆಯಲ್ಲಿ ಕಳೆದ 10-12ದಿನಗಳಲ್ಲಿ 18ವರ್ಷಕ್ಕಿಂತ ಕೆಳಗಿನ, 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ದೃಢಪಟ್ಟಿದೆ. ಡುಂಗರ್​ಪುರ ಒಂದು ಗಡಿ ಜಿಲ್ಲೆಯಾಗಿದೆ. ವಲಸಿಗರು ಹೆಚ್ಚಾಗಿ ಇಲ್ಲಿಗೆ ಬರುವುದರಿಂದ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಸೋಂಕಿನ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಆಕ್ಸಿಜನ್​ ಸಾಂದ್ರಕಗಳನ್ನು ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಮಕ್ಕಳ ತಜ್ಞರು ಗಮನವಹಿಸುತ್ತಿದ್ದಾರೆ. ಅಗತ್ಯವಿರುವ ಔಷಧಿಗಳನ್ನೂ ಹಂಚಿಕೆ ಮಾಡಲಾಗಿದೆ ಎಂದು ಡುಂಗರ್​ಪುರ ಸಿಎಂಎಚ್​​ಒ ಡಾ. ರಾಜೇಶ್​ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಅನಗತ್ಯವಾಗಿ ಸುತ್ತಾಡುವ ಸವಾರರಿಗೆ ವಿಭಿನ್ನ ರೀತಿಯಲ್ಲಿ ಎಚ್ಚರಿಕೆ; ಹಾರ ಹಾಕಿ, ಕುಂಕುಮ ಇಟ್ಟು, ಆರತಿ ಬೆಳಗಿ ಸನ್ಮಾನ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್