Shivaji Statue: ಮಹಾರಾಷ್ಟ್ರದಲ್ಲಿ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ
ಕಳೆದ ವರ್ಷ ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದರು. ಆ 35 ಅಡಿ ಎತ್ತರದ ಪ್ರತಿಮೆ ಇಂದು ಕುಸಿದು ಬಿದ್ದಿದೆ. ಕಳಪೆ ಕಾಮಗಾರಿ ನಡೆಸಿರುವ ಏಕನಾಥ್ ಶಿಂಧೆ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮುಂಬೈ: ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಇಂದು (ಆಗಸ್ಟ್ 26) ಕುಸಿದು ಬಿದ್ದಿದೆ. ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ನಿರ್ಮಿಸಲಾಗಿದ್ದ 35 ಅಡಿ ಎತ್ತರದ ಪ್ರತಿಮೆ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಕುಸಿದಿದೆ. ಪ್ರತಿಮೆಯ ಕುಸಿತದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಈ ಜಿಲ್ಲೆಯಲ್ಲಿ ಕಳೆದ 2-3 ದಿನಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಬೀಸಿದೆ. ಇದೇ ಕುಸಿತಕ್ಕೆ ಕಾರಣವಿರಬಹುದು ಎಂದು ಅಧಿಕಾರಿ ಹೇಳಿದ್ದಾರೆ.
ಪೊಲೀಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕನ ನಡೆಸಿದ್ದು, ಹಾನಿಯನ್ನು ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ. ಕಳೆದ ವರ್ಷ ಡಿಸೆಂಬರ್ 4ರಂದು ನೌಕಾಪಡೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಾಜಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಬಳಿಕ, ಕೋಟೆಯಲ್ಲಿ ನಡೆದ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
Earlier this evening, unveiled a grand statue of Chhatrapati Shivaji at Rajkot fort. pic.twitter.com/ucFracNM5r
— Narendra Modi (@narendramodi) December 4, 2023
ಮರಾಠ ಸಾಮ್ರಾಜ್ಯದ ಸಂಸ್ಥಾಪಕರ ಮುದ್ರೆಯು ಹೊಸ ನೌಕಾ ಧ್ವಜವನ್ನು ಪ್ರೇರೇಪಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಸ್ವದೇಶಿ ವಿಮಾನವಾಹಕ ನೌಕೆ INS ವಿಕ್ರಾಂತ್ ಅನ್ನು ನಿಯೋಜಿಸಿದಾಗ ಅದನ್ನು ಅಳವಡಿಸಲಾಯಿತು.
ಇದನ್ನೂ ಓದಿ: Unified Pension Scheme: ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಪ್ರಧಾನಿ ಮೋದಿ ಸಂಪುಟ ಅನುಮೋದನೆ
ಅಧಿಕಾರಿಗಳು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಈ ಘಟನೆಯ ಹಿಂದಿನ ಕಾರಣವನ್ನು ಕಂಡುಹಿಡಿಯಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಅದೇ ಸ್ಥಳದಲ್ಲಿ ಶಿವಾಜಿಯ ಪ್ರತಿಮೆಯನ್ನು ಮರುಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ.
KADI NINDA ALERT | The 35-foot statue of Chhatrapati Shivaji Maharaj, proudly unveiled by coalition dealer, Narendra Modi, at a fort in Sindhudurg district eight months ago collapsed today.
We humbly request everyone to do ‘Kadi Ninda’ to strongly condemn the reckless act of… pic.twitter.com/KKuWyYcLuH
— Congress Kerala (@INCKerala) August 26, 2024
“ಇಂದು ನಡೆದ ಘಟನೆ ದುರದೃಷ್ಟಕರವಾಗಿದೆ. ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಷ್ಟ್ರದ ಪೂಜ್ಯ ದೇವರು. ಈ ಪ್ರತಿಮೆಯನ್ನು ನೌಕಾಪಡೆ ಸ್ಥಾಪಿಸಿದೆ. ಅವರೇ ಇದನ್ನು ವಿನ್ಯಾಸಗೊಳಿಸಿದ್ದರು. ಆದರೆ, ಇಂದು ಮಧ್ಯಾಹ್ನ 1 ಗಂಟೆಗೆ ವೇಗವಾಗಿ ಬೀಸಿದ ಗಾಳಿಯಿಂದಾಗಿ ಆ ಪ್ರತಿಮೆ ಬಿದ್ದು ಹಾನಿಯಾಗಿದೆ. ನಾಳೆ, ಪಿಡಬ್ಲ್ಯುಡಿ ಮತ್ತು ನೌಕಾಪಡೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಅದೇ ಸ್ಥಳದಲ್ಲಿ ಮಹಾರಾಷ್ಟ್ರದ ಪೂಜ್ಯ ಆರಾಧ್ಯ ದೈವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮರುಸ್ಥಾಪಿಸುತ್ತಾರೆ’’ ಎಂದು ಸಿಎಂ ಶಿಂಧೆ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:22 pm, Mon, 26 August 24