Singhu Border Murder ಸಿಂಘು ಗಡಿಯಲ್ಲಿ ರೈತನ ಬರ್ಬರ ಹತ್ಯೆ, ಕೈ ಕಾಲು ಕತ್ತರಿಸಿ ಬ್ಯಾರಿಕೇಡ್‌ಗೆ ಕಟ್ಟಿಹಾಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಕೈಕಾಲುಗಳನ್ನು ಕತ್ತರಿಸಿದ್ದ ರೈತನ ಮೃತದೇಹ ಶುಕ್ರವಾರ ಬೆಳಿಗ್ಗೆ ಪ್ರತಿಭಟನಾ ನಿರತ ರೈತರ ಮುಖ್ಯ ವೇದಿಕೆಯ ಬಳಿ ಬ್ಯಾರಿಕೇಡ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ದೆಹಲಿ: ದೆಹಲಿಯ ಹೊರಭಾಗದ ಸಿಂಘು ಗಡಿಯಲ್ಲಿ (Singhu border) 35 ವರ್ಷದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೈಕಾಲುಗಳನ್ನು ಕತ್ತರಿಸಿದ್ದ ರೈತನ ಮೃತದೇಹ ಶುಕ್ರವಾರ ಬೆಳಿಗ್ಗೆ ಪ್ರತಿಭಟನಾ ನಿರತ ರೈತರ ಮುಖ್ಯ ವೇದಿಕೆಯ ಬಳಿ ಬ್ಯಾರಿಕೇಡ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆರಂಭದಲ್ಲಿ ಪೊಲೀಸರ ಭೇಟಿಗೆ ರೈತರು ಅವಕಾಶ ನೀಡದೆ ಭಾರೀ ಆಕ್ರೋಶ ವ್ಯಕ್ತಪಡಿಸಿದರು. ಆನಂತರ ಕುಂಡ್ಲಿ ಪೊಲೀಸ್ ಠಾಣೆಯ ಅಧಿಕಾರಿಗಳು ಮೃತದೇಹವನ್ನು ಹತ್ತಿರದ ಸಿವಿಲ್ ಆಸ್ಪತ್ರೆಗೆ ಕೊಂಡೊಯ್ಯಲು ಅನುಮತಿ ನೀಡಿದರು.
ಇಂದು (ಶುಕ್ರವಾರ) ಬೆಳಿಗ್ಗೆ 5 ಗಂಟೆ ಸುಮಾರಿಗೆ, ರೈತರ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ (ಕುಂಡ್ಲಿ, ಸೋನಿಪತ್) ಕೈಗಳು, ಕಾಲುಗಳನ್ನು ಕತ್ತರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಡಿಎಸ್ ಪಿ ಹನ್ಸ್ ರಾಜ್ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕೊಲೆಗೆ ಸಂಬಂಧಿಸಿದಂತೆ ಎಫ್‌ಐಆರ್ ಅನ್ನು ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದೆ ಎಂದು ಹೇಳಿದ ಅವರು, “ಯಾರು ಹೊಣೆಗಾರರು ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ. ವೈರಲ್ ವಿಡಿಯೊ ತನಿಖೆಯ ವಿಷಯವಾಗಿದೆ, ವದಂತಿಗಳು ದೂರವಾಗುತ್ತದೆ ಎಂದು ಹೇಳಿದರು.
ಏತನ್ಮಧ್ಯೆ, ಸಂಯುಕ್ತ ಕಿಸಾನ್ ಮೋರ್ಚಾ (SKM), ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಆಂದೋಲನವನ್ನು ಮುನ್ನಡೆಸುತ್ತಿರುವ 40 ಕ್ಕೂ ಹೆಚ್ಚು ರೈತ ಸಂಘಗಳ ಒಂದು ಸಂಘಟನೆಯಾಗಿದ್ದು ನಿಹಾಂಗ್ಗಳು (ಶಸ್ತ್ರಗಳನ್ನು ಹೊಂದಿರುವ ಸಿಖ್ ಗುಂಪು) 35 ವರ್ಷದ ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು. ರೈತನರ ಒಂದು ಕೈಯನ್ನು ಮಣಿಕಟ್ಟಿನಿಂದ ಕತ್ತರಿಸಲಾಗಿದೆ.
“ಘಟನೆಯ ಹಿಂದೆ ನಿಹಾಂಗ್ ಕೈವಾಡವಿದೆ. ಅವರು ಅದನ್ನು ಒಪ್ಪಿಕೊಂಡಿದ್ದಾರೆ. ನಿಹಾಂಗ್ ಗಳು ನಮಗೆ ಮೊದಲಿನಿಂದಲೂ ತೊಂದರೆ ನೀಡುತ್ತಿದ್ದಾರೆ” ಎಂದು ಎಸ್‌ಕೆಎಂ ನಾಯಕ ಬಲಬೀರ್ ಸಿಂಗ್ ರಾಜೇವಾಲ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
Had Rakesh Tikait not justified mob lynching in Lakhimpur, with Yogendra Yadav, sitting next to him, maintaining sanctimonious silence, the gory murder of a youth at Kundali border would not have happened. Anarchists behind these protests in the name of famers need to be exposed. https://t.co/YkchLIQxgY
— Amit Malviya (@amitmalviya) October 15, 2021
ಎಸ್‌ಕೆಎಂ ಇಡೀ ಘಟನೆಯಿಂದ ತನ್ನನ್ನು ದೂರವಿರಿಸಿತು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕಾಗಿ ಹರಿಯಾಣ ಸರ್ಕಾರದೊಂದಿಗೆ ಸಹಕರಿಸಲು ತಾನು ಸಿದ್ಧ ಎಂದು ಹೇಳಿದೆ. ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು ಈ ರಕ್ತಸಿಕ್ತ ಕೊಲೆಗೆ ರಾಕೇಶ್ ಟಿಕಾಯತ್ ಮತ್ತು ಯೋಗೇಂದ್ರ ಯಾದವ್ ಅವರನ್ನು ದೂಷಿಸಿದ್ದಾರೆ.
ಇದನ್ನೂ ಓದಿ: ತಾಲಿಬಾನ್ ಬದಲಾದರೂ ಪಾಕಿಸ್ತಾನ ಬದಲಾಗಲ್ಲ; ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
Published On - 11:56 am, Fri, 15 October 21