2019-21 ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು 35,950 ವಿದ್ಯಾರ್ಥಿಗಳು: ಸಂಸತ್ಗೆ ಕೇಂದ್ರ ಸರ್ಕಾರ ಮಾಹಿತಿ
ಲೋಕಸಭೆಯಲ್ಲಿ ಜನತಾ ದಳ (ಯುನೈಟೆಡ್) ಸದಸ್ಯರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜ್ಯ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಅಬ್ಬಯ್ಯ ನಾರಾಯಣಸ್ವಾಮಿ "ದೇಶದಲ್ಲಿ ಸಾಮಾಜಿಕ ತಾರತಮ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಸಂಖ್ಯೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ದೆಹಲಿ ಡಿಸೆಂಬರ್ 06: 2019 ಮತ್ತು 2021ರ ಅವಧಿಯಲ್ಲಿ ದೇಶದಲ್ಲಿ ಒಟ್ಟು 35,950 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ (Union ministry of social justice and empowerment) ಮಂಗಳವಾರ ಸಂಸತ್ಗೆ (Parliament)ತಿಳಿಸಿದೆ. ದೇಶದಲ್ಲಿ ಸಾಮಾಜಿಕ ತಾರತಮ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳ ಸಂಖ್ಯೆಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಜನತಾ ದಳ (ಯುನೈಟೆಡ್) ಸದಸ್ಯರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜ್ಯ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಅಬ್ಬಯ್ಯ ನಾರಾಯಣಸ್ವಾಮಿ “ದೇಶದಲ್ಲಿ ಸಾಮಾಜಿಕ ತಾರತಮ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಸಂಖ್ಯೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದರು.
ಆದಾಗ್ಯೂ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ನಿರ್ವಹಿಸಿದ ಅಂಕಿಅಂಶಗಳ ಪ್ರಕಾರ, 2019 ರಲ್ಲಿ 10,335, 2020 ರಲ್ಲಿ 12,526 ಮತ್ತು 2021 ರಲ್ಲಿ 13,089 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಮಾಜಿಕ ತಾರತಮ್ಯವನ್ನು ತಡೆಗಟ್ಟಲು ದೇಶದಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ನಾರಾಯಣಸ್ವಾಮಿ, ಉನ್ನತ ಶಿಕ್ಷಣ ಇಲಾಖೆಯು ಕೌನ್ಸೆಲಿಂಗ್ ಸೆಲ್‌ಗಳನ್ನು ಸ್ಥಾಪಿಸಿದೆ ಮತ್ತು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಸೆಲ್ ಗಳು, ಸಮಾನ ಅವಕಾಶ ಸೆಲ್ ಗಳು, ವಿದ್ಯಾರ್ಥಿಗಳ ಕುಂದುಕೊರತೆ ಸೆಲ್, ವಿದ್ಯಾರ್ಥಿಗಳ ಕುಂದುಕೊರತೆ ಸಮಿತಿ ಮತ್ತು ದೇಶಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಸಂಪರ್ಕ ಅಧಿಕಾರಿಗಳ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: Revanth Reddy Profile: ರೇವಂತ್ ರೆಡ್ಡಿಗೆ ಒಲಿದ ತೆಲಂಗಾಣ ಮುಖ್ಯಮಂತ್ರಿ ಸ್ಥಾನ; ಇಲ್ಲಿದೆ ರಾಜಕೀಯ ಪಯಣದ ಇಣುಕು ನೋಟ
ಇದಲ್ಲದೆ, ನಾಗರಿಕ ಹಕ್ಕುಗಳ ರಕ್ಷಣೆ (PCR) ಕಾಯಿದೆ 1955, ಇದು ‘ಅಸ್ಪೃಶ್ಯತೆ’ ಮತ್ತು ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳು ಸೇರಿದಂತೆ ಸದಸ್ಯರ ಮೇಲಿನ ದೌರ್ಜನ್ಯದ ಅಪರಾಧಗಳನ್ನು ತಡೆಯಲು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) (ದೌರ್ಜನ್ಯಗಳ ತಡೆ) (PoA) ಕಾಯಿದೆ, 1989 ಜಾರಿಯಲ್ಲಿದೆ ಎಂದು ಅವರು ಹೇಳಿದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ