Ayushman Bharat: ಭಾರತ್ ಡಿಜಿಟಲ್ ಮಿಷನ್ ಅಡಿಯಲ್ಲಿ 4 ಕೋಟಿ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ ಲಿಂಕ್

ಭಾರತ್ ಡಿಜಿಟಲ್ ಮಿಷನ್ ಅಡಿಯಲ್ಲಿ 4 ಕೋಟಿಗೂ ಹೆಚ್ಚು ಆರೋಗ್ಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಮತ್ತು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗಳೊಂದಿಗೆ ಲಿಂಕ್ ಮಾಡಲಾಗಿದೆ.

Ayushman Bharat: ಭಾರತ್ ಡಿಜಿಟಲ್ ಮಿಷನ್ ಅಡಿಯಲ್ಲಿ 4 ಕೋಟಿ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆ ಲಿಂಕ್
ಸಾಂದರ್ಭಿಕ ಚಿತ್ರ
Follow us
|

Updated on:Dec 17, 2022 | 7:27 PM

ದೆಹಲಿ: ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ (PM MODI) ಅವರು ಜನಪ್ರಿಯ ಆಯುಷ್ಮಾನ್ ಭಾರತ್ (Ayushman Bharat) ಯೋಜನೆಯನ್ನು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ (ABDM) ಅಡಿಯಲ್ಲಿ ಅಳವಡಿಸಲಾಗಿದೆ. ಇದರಲ್ಲಿ ಈಗಾಗಲೇ 4 ಕೋಟಿಗೂ ಹೆಚ್ಚು ಡಿಜಿಟಲ್ ಆರೋಗ್ಯ ದಾಖಲೆಗಳನ್ನು ಆಯುಷ್ಮಾನ್ ಭಾರತ್ ಆರೋಗ್ಯ (ABHA) ಖಾತೆಗಳಿಗೆ ಲಿಂಕ್ ಮಾಡಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (NHA) ಶನಿವಾರ ಹೇಳಿದೆ.ನಿಮ್ಮ ಆರೋಗ್ಯ ದಾಖಲೆಗಳನ್ನು ಆಯುಷ್ಮಾನ್ ಭಾರತ್ ಡಿಜಿಟಲ್ ಖಾತೆಗಳಿಗೆ ಲಿಂಕ್ ಮಾಡುವುದರಿಂದ ನಿಮ್ಮ ಅನುಕೂಲಕ್ಕೆ ಅನುಗುಣವಾಗಿ ಈ ದಾಖಲೆಗಳನ್ನು ನಿರ್ವಹಿಸಲು ಸಾಧ್ಯವಾಗುತ್ತದೆ. ಇದು ವಿವಿಧ ಆರೋಗ್ಯ ಸೌಲಭ್ಯಗಳನ್ನು ಪೂರೈಸುವ ಸಮಗ್ರ ವೈದ್ಯಕೀಯ ಮಾಹಿತಿಯನ್ನು ನೀಡಲು ನಾಗರಿಕರಿಗೆ ಅನುಕೂಲ ಮಾಡಿಕೊಡುತ್ತದೆ.

ಇದರಿಂದಾಗಿ ವೈದ್ಯಕೀಯ ಸಲಹೆಗಳು ಮತ್ತು ಸೌಲಭ್ಯಗಳು ಸುಲಭವಾಗಿ ದೊರೆಯುತ್ತದೆ. ಇದಲ್ಲದೆ, ನಾಗರಿಕರು ಸಂಬಂಧಿತ ಆರೋಗ್ಯ ದಾಖಲೆಗಳನ್ನು ABDM ನೋಂದಾಯಿತ ಆರೋಗ್ಯ ಪೂರೈಕೆದಾರರೊಂದಿಗೆ ಡಿಜಿಟಲ್ ಆಗಿ ಹಂಚಿಕೊಳ್ಳಬಹುದು. ಇದುವರೆಗೆ 29 ಕೋಟಿಗೂ ಹೆಚ್ಚು ನಾಗರಿಕರು ತಮ್ಮ ವಿಶಿಷ್ಟ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗಳನ್ನು (ABHA) ರಚಿಸಿದ್ದಾರೆ. ಈ ಡಿಜಿಟಲ್ ಆರೋಗ್ಯ ಸೇವೆಗಳ ಪ್ರಯೋಜನಗಳನ್ನು ಹೆಚ್ಚಿನ ನಾಗರಿಕರು ಪಡೆದುಕೊಳ್ಳಬಹುದು ಎಂದು ಖಚಿತಪಡಿಸಿಕೊಳ್ಳಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವು ವಿವಿಧ ಪಾಲುದಾರರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರ್‌ಎಸ್ ಶರ್ಮಾ ಹೇಳಿದರು.

ಇದನ್ನು ಓದಿ;ABHA: ಡಿಜಿಟಲ್​ ಹೆಲ್ತ್​ ಮಿಷನ್​ಗೆ ಹೊಸ ನಾಮಕಾರಣ, ಗಣರಾಜ್ಯೋತ್ಸವ ದಿನದಂದು ಪ್ರಧಾನಿ ಮೋದಿ ಘೋಷಣೆ

ಆರೋಗ್ಯ ದಾಖಲೆಗಳ ಡಿಜಿಟಲೀಕರಣವನ್ನು ಮತ್ತಷ್ಟು ಉತ್ತೇಜಿಸಲು ಆಸ್ಪತ್ರೆಗಳು, ಚಿಕಿತ್ಸಾಲಯಗಳು, ಡಯಾಗ್ನೋಸ್ಟಿಕ್ ಲ್ಯಾಬ್‌ಗಳಂತಹ ಆರೋಗ್ಯ ಸೌಲಭ್ಯಗಳಿಗಾಗಿ ಪ್ರೋತ್ಸಾಹಕ ಯೋಜನೆಯನ್ನು ಪ್ರಾರಂಭಿಸಲು ಯೋಜಿಸಲಾಗುತ್ತಿದೆ. ABDM ನೊಂದಿಗೆ ಸಂಯೋಜಿಸಲು ನಾವು ವಿವಿಧ ಆರೋಗ್ಯ ಲಾಕರ್ ಅಪ್ಲಿಕೇಶನ್‌ಗಳನ್ನು ಪ್ರೋತ್ಸಾಹಿಸುತ್ತಿದ್ದೇವೆ ಇದರಿಂದ ನಾಗರಿಕರು ತಮ್ಮ ಡಿಜಿಟಲ್ ದಾಖಲೆಗಳನ್ನು ಸಂಗ್ರಹಿಸಲು ಮತ್ತು ನಿರ್ವಹಿಸಲು ಹೆಚ್ಚಿನ ಆಯ್ಕೆಯನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ.

ಆರೋಗ್ಯ ದಾಖಲೆಗಳ ಡಿಜಿಟಲೀಕರಣದ ಮೇಲೆ ನಿರಂತರ ಗಮನಹರಿಸುವುದರೊಂದಿಗೆ, ನಾವು ಪೇಪರ್‌ಲೆಸ್ ವೈದ್ಯಕೀಯ ಸಮಾಲೋಚನೆಗಳನ್ನು ಸಾಧಿಸುವ ಗುರಿಯನ್ನು ಹೊಂದಿದ್ದೇವೆ ಮತ್ತು ಆ ಮೂಲಕ ರೋಗಿಯ ಮತ್ತು ಆರೋಗ್ಯ ಸೇವಾ ಪೂರೈಕೆದಾರರ ನಡುವಿನ ಪ್ರತಿ ವಹಿವಾಟಿನ ಬಗ್ಗೆ ಹೆಚ್ಚು ನಿಖರತೆ ಇರುತ್ತದೆ ಎಂದು ಶರ್ಮಾ ಹೇಳಿದರು.

ABHA ನೊಂದಿಗೆ ವ್ಯಕ್ತಿಯ ಆರೋಗ್ಯ ದಾಖಲೆಗಳ ಈ ಡಿಜಿಟಲ್ ಲಿಂಕ್ ಅನ್ನು ರಾಜ್ಯ ಸರ್ಕಾರಗಳ ಬೆಂಬಲದೊಂದಿಗೆ ದೇಶದ ವಿವಿಧ ಕಡೆ ಆರೋಗ್ಯ ಸೌಲಭ್ಯಗಳಲ್ಲಿ ಪಡೆದುಕೊಳ್ಳಬಹುದು.ABHA ಸಂಯೋಜಿತ ಆರೋಗ್ಯ ದಾಖಲೆಗಳಿಗೆ ಪ್ರಮುಖ ಕೊಡುಗೆದಾರರು ಆಂಧ್ರ ಪ್ರದೇಶ ಸರ್ಕಾರ, ಆಯುಷ್ಮಾನ್ ಭಾರತ್ PM-JAY, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (RCH) ಯೋಜನೆ, eHospital ಮತ್ತು CoWin ಇತರ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 pm, Sat, 17 December 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ