AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ 4 ಸಾವು, 10 ಮಂದಿಗೆ ಗಾಯ

ಜಾರ್ಖಂಡ್​​ನ ಬೊಕಾರೊ ಜಿಲ್ಲೆಯ ಪೀಟರ್‌ವಾರ್ ಬ್ಲಾಕ್‌ನ ಖೆಟ್ಕೊ ಗ್ರಾಮದಲ್ಲಿ ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದಾರೆ.

Jharkhand: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ 4 ಸಾವು, 10 ಮಂದಿಗೆ ಗಾಯ
ಮೊಹರಂ ಮೆರವಣಿಗೆ
TV9 Web
| Edited By: |

Updated on:Jul 29, 2023 | 11:24 AM

Share

ಜಾರ್ಖಂಡ್, ಜು.29: ಇಂದು ದೇಶದ್ಯಾಂತ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಸಂಭ್ರಮದ ನಡುವೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಇಂದು (ಜು.29) ಬೆಳಿಗ್ಗೆ ಜಾರ್ಖಂಡ್​​ನ (Jharkhand) ಬೊಕಾರೊ ಜಿಲ್ಲೆಯ ಪೀಟರ್‌ವಾರ್ ಬ್ಲಾಕ್‌ನ ಖೆಟ್ಕೊ ಗ್ರಾಮದಲ್ಲಿ ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದು, 10 ಮಂದಿಗೆ ಸುಟ್ಟಗಾಯಗಳಾಗಿವೆ. ಮೆರವಣಿಗೆಯಲ್ಲಿ ಹೊತ್ತೊಯ್ಯುತ್ತಿದ್ದ ತಾಜಿಯಾ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಈ ದುರಂತ ನಡೆದಿದೆ ಎಂದು ಹೇಳಲಾಗಿದೆ, ಇದೀಗ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಸ್ಥಳಕ್ಕೆ ಧಾವಿಸಿದ ಬೊಕಾರೊನ ಪೊಲೀಸ್​​ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್​​ ಅವರು ಈ ಬಗ್ಗೆ ತನಿಖೆ ನಡೆಸಲಾಗಿದ್ದು, ಘಟನೆಯ ಬಗ್ಗೆ ವರದಿ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಇಂದು ಬೆಳಿಗ್ಗೆ ಸುಮಾರು 6 ಗಂಟೆಗೆ ಮೊರಹಂ ಮೆರವಣಿಗೆ ಪ್ರಾರಂಭವಾಗಿತ್ತು. ಮುಸ್ಲಿಂ ಸಮುದಾಯದ ಧ್ವಜ 11,000 ವೋಲ್ಟ್​​ ಹೈ-ಟೆನ್ಶನ್​​ ವಿದ್ಯುತ್​​ ತಂತಿಗೆ ತಗುಲಿದ ಕಾರಣ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಈ ಘಟನೆಯಿಂದ 4 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರ ಸಾವು

ಇದಕ್ಕೂ ಮುನ್ನ ಜು.28ರಂದು ಮೊರಹಂ ಪ್ರಯುಕ್ತ ಬಿಹಾರದ ಗೋಪಾಲ್​​ಗಂಜ್​​​ ಜಿಲ್ಲೆಯಲ್ಲಿ ನಡೆದ ಮೆರವಣಿಗೆಯಲ್ಲಿ ವಿದ್ಯುತ್​​ ಸ್ಪರ್ಶಿಸಿ 11 ಜನರಿಗೆ ಗಾಯಗಳಾಗಿವೆ. ಜಿಲ್ಲೆಯ ಹರ್ಪುರ್​ ತೋಲಾ ಮತ್ತು ಧರ್ಮಚಕ್​ ಗ್ರಾಮ ನಡುವೆ ಮೆರವಣಿಗೆ ಹೋಗುತ್ತಿರುವ ಈ ಘಟನೆ ನಡೆದಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:03 am, Sat, 29 July 23

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ