ಹರಿಯಾಣದ ಭಿವಾನಿಯಲ್ಲಿ ಭೂಕುಸಿತ; 4 ಜನ ಸಾವು, ನಾಪತ್ತೆಯಾದವರಿಗೆ ಶೋಧ ಕಾರ್ಯ
ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ಮತ್ತು ಗಾಯಾಳುಗಳಿಗೆ ತಕ್ಷಣದ ನೆರವು ಖಚಿತಪಡಿಸಿಕೊಳ್ಳಲು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಟ್ವೀಟ್ ಮಾಡಿದ್ದಾರೆ.
ಚಂಡೀಗಢ: ಹರಿಯಾಣದ ಭಿವಾನಿ ಜಿಲ್ಲೆಯ ಗಣಿಗಾರಿಕೆ ವಲಯದಲ್ಲಿ ಇಂದು ಸಂಭವಿಸಿದ ಭೂಕುಸಿತದಿಂದ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಅವಶೇಷಗಳಡಿ ಸಿಲುಕಿದ್ದಾರೆ. ಜಿಲ್ಲಾಡಳಿತವು ತೋಷಮ್ ಬ್ಲಾಕ್‌ನ ದಡಮ್ ಗಣಿಗಾರಿಕೆ ವಲಯದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ಮತ್ತು ಗಾಯಾಳುಗಳಿಗೆ ತಕ್ಷಣದ ನೆರವು ಖಚಿತಪಡಿಸಿಕೊಳ್ಳಲು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಟ್ವೀಟ್ ಮಾಡಿದ್ದಾರೆ.
ಭೂಕುಸಿತ ಸಂಭವಿಸಿದಾಗ ಕಾರ್ಮಿಕರು ಬೇರೆ ಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಆಗ ಭೂಕುಸಿತವಾದ್ದರಿಂದ ಅವರು ಅವಶೇಷಗಳಡಿ ಸಿಲುಕಿದ್ದಾರೆ. “ಹರಿಯಾಣದ ಭಿವಾನಿ ಜಿಲ್ಲೆಯ ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಅಪಘಾತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಮಧುಬನ್‌ನಿಂದ ಎಸ್‌ಡಿಆರ್‌ಎಫ್ ತಂಡ ಮತ್ತು ಗಾಜಿಯಾಬಾದ್‌ನಿಂದ ಎನ್‌ಡಿಆರ್‌ಎಫ್ ತಂಡವನ್ನು ಕರೆಸಲಾಗಿದೆ. ಹಿಸಾರ್‌ನಿಂದ ಸೇನಾ ತುಕಡಿಯನ್ನು ಕರೆಸಲಾಗಿದೆ. ಇಲ್ಲಿಯವರೆಗೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹರಿಯಾಣ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
ಕೃಷಿ ಸಚಿವ ಜೆಪಿ ದಲಾಲ್ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ತಲುಪಿದ್ದಾರೆ. “ಕೆಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇಲ್ಲಿನ ಗಣಿಗಾರಿಕೆ ಗುತ್ತಿಗೆದಾರರ ಪ್ರಕಾರ, ಇನ್ನೂ ಮೂರು-ನಾಲ್ಕು ಜನರು ಒಳಗೆ ಸಿಲುಕಿರುವ ಸಾಧ್ಯತೆಯಿದೆ” ಎಂದು ಅವರು ಹೇಳಿದ್ದಾರೆ.
Haryana Agriculture Minister JP Dalal reaches the spot of landslide
Some people have died. I cannot provide the exact figures as of now. A team of doctors has arrived. We will try to save as many people as possible: JP Dalal pic.twitter.com/PGbxZiucH4
— ANI (@ANI) January 1, 2022
ಹರಿಯಾಣದ ಭಿವಾನಿ ಜಿಲ್ಲೆಯ ಗಣಿಗಾರಿಕೆ ವಲಯದಲ್ಲಿ ಶನಿವಾರ ಸಂಭವಿಸಿದ ಭೂಕುಸಿತದ ನಂತರ ಸುಮಾರು 15ರಿಂದ 20 ಜನರು ಸಿಲುಕಿರುವ ಶಂಕೆ ಇದೆ. ಜಿಲ್ಲಾಡಳಿತವು ತೋಷಮ್ ಬ್ಲಾಕ್‌ನ ದಡಮ್ ಗಣಿಗಾರಿಕೆ ವಲಯದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಹಾಗೇ, ಮಣ್ಣಿನಡಿ ಸಿಲುಕಿರುವವರನ್ನು ಹೊರಗೆ ತೆಗೆಯುವ ಕಾರ್ಯಾಚರಣೆ ನಡೆಯುತ್ತಿದೆ.
Andhra Pradesh Rain: ಆಂಧ್ರದಲ್ಲಿ ವರುಣನ ಆರ್ಭಟ; ಭೂಕುಸಿತವಾಗಿ ತಿರುಮಲ ಘಾಟ್ ರಸ್ತೆ ಬಂದ್
Published On - 5:36 pm, Sat, 1 January 22