AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಭದ್ರತಾ ಸಿಬ್ಬಂದಿ ಸಾವು

ಛತ್ತೀಸ್‌ಗಢದಲ್ಲಿ ನೆಲಬಾಂಬ್ ನಿರ್ಮೂಲನ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಫೋಟಗೊಂಡು 4 ಡಿಆರ್‌ಜಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ, ಒಬ್ಬರು ಗಾಯಗೊಂಡಿದ್ದಾರೆ. ಡಿಆರ್‌ಜಿ ಸಿಬ್ಬಂದಿ ಅದನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾಗ ಐಇಡಿ ಸ್ಫೋಟಗೊಂಡು, ನಾಲ್ವರು ಸಿಬ್ಬಂದಿಗೆ ಗಂಭೀರ ಗಾಯಗಳಾಗಿದ್ದವು. ಇನ್ಸ್‌ಪೆಕ್ಟರ್ ಸುಖ್‌ರಾಮ್ ವಟ್ಟಿ, ಕಾನ್‌ಸ್ಟೆಬಲ್‌ಗಳಾದ ಕೃಷ್ಣ ಕೊಮ್ರಾ ಮತ್ತು ಸಂಜಯ್ ಗಢ್‌ಪಾಲೆ ಅವರು ಗಾಯಗಳಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದರು. ಗಾಯಗೊಂಡ ಮತ್ತೊಬ್ಬ ಕಾನ್‌ಸ್ಟೆಬಲ್ ಪರಮಾನಂದ ಕೊಮ್ರಾ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಭದ್ರತಾ ಸಿಬ್ಬಂದಿ ಸಾವು
4 Drg Personnel
ಸುಷ್ಮಾ ಚಕ್ರೆ
|

Updated on: May 02, 2026 | 7:52 PM

Share

ನವದೆಹಲಿ, ಮೇ 2: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಇಂದು ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಂಡವು ಸ್ಫೋಟಕವನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿದೆ.

ಇದು ಮಾರ್ಚ್ 31ರಂದು ಭಾರತ ದೇಶವನ್ನು ಸಶಸ್ತ್ರ ಮಾವೋವಾದಿಗಳಿಂದ ಮುಕ್ತವೆಂದು ಘೋಷಿಸಿದ ನಂತರ ಛತ್ತೀಸ್​ಗಢ ರಾಜ್ಯದಲ್ಲಿ ನಕ್ಸಲೀಯರಿಗೆ ಸಂಬಂಧಿಸಿದ ಹಿಂಸಾಚಾರದ ಮೊದಲ ಘಟನೆಯಾಗಿದೆ. ಚೊಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಜಿಲ್ಲೆಯ ಗಡಿಗೆ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ನಕ್ಸಲೀಯರು ಈ ಹಿಂದೆ ಇಟ್ಟಿದ್ದ ಐಇಡಿಗಳನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಡಿಆರ್‌ಜಿ ಘಟಕವು ಬಾಂಬ್ ನಿರ್ಮೂಲನ ಕಾರ್ಯಾಚರಣೆಯನ್ನು ನಡೆಸುತ್ತಿದ್ದರು. ಅದನ್ನು ತಟಸ್ಥಗೊಳಿಸಲು ಪ್ರಯತ್ನಿಸುವಾಗ ಐಇಡಿ ಸ್ಫೋಟಗೊಂಡಿದೆ.

ಇದನ್ನೂ ಓದಿ: ಛತ್ತೀಸ್‌ಗಢದ ಸುಕ್ಮಾದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಸಾವು, ಹಲವರಿಗೆ ಗಾಯ

ಬಸ್ಟರ್ ರೇಂಜ್‌ನ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಟ್ಟಿಲಿಂಗಂ ಈ ಬಗ್ಗೆ ಮಾತನಾಡಿದ್ದು, ಶರಣಾದ ಮಾವೋವಾದಿ ಕಾರ್ಯಕರ್ತರ ಮಾಹಿತಿ ಸೇರಿದಂತೆ ಇತ್ತೀಚಿನ ತಿಂಗಳುಗಳಲ್ಲಿ ಸಂಗ್ರಹಿಸಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಕಂಕೇರ್‌ನಂತಹ 7 ಜಿಲ್ಲೆಗಳಲ್ಲಿ ನೂರಾರು ಐಇಡಿಗಳನ್ನು ವಶಪಡಿಸಿಕೊಂಡು ನಿಷ್ಕ್ರಿಯಗೊಳಿಸಿವೆ. ಆದರೆ, ಇಂದಿನ ದುರದೃಷ್ಟಕರ ಘಟನೆಯಲ್ಲಿ, ಕಂಕೇರ್ ಜಿಲ್ಲಾ ಪೊಲೀಸ್ ತಂಡವು ಅದನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿರುವಾಗ ಐಇಡಿ ಆಕಸ್ಮಿಕವಾಗಿ ಸ್ಫೋಟಗೊಂಡಿದೆ ಎಂದು ಹೇಳಿದರು.

ಮಾರ್ಚ್ 2026ರಲ್ಲಿ ಭಾರತ ನಕ್ಸಲ್ ಮುಕ್ತ ಎಂದು ಘೋಷಿಸಿತ್ತು. ಮಾರ್ಚ್ 30ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತವನ್ನು ನಕ್ಸಲ್ ಮುಕ್ತ ಎಂದು ಘೋಷಿಸಿದ್ದರು.

ಇದನ್ನೂ ಓದಿ: Video: ಐಇಡಿ ನಿಷ್ಕ್ರಿಯ, ದೀಪಾವಳಿ ಸಮಯದಲ್ಲಿ ತಪ್ಪಿದ ದೊಡ್ಡ ಅನಾಹುತ, ಶೋಪಿಯಾನ್​ನಲ್ಲಿ ಭಯೋತ್ಪಾದಕ ದಾಳಿ ವಿಫಲ

ಇನ್ಸ್‌ಪೆಕ್ಟರ್ ಸುಖ್‌ರಾಮ್ ವಟ್ಟಿ, ಕಾನ್‌ಸ್ಟೆಬಲ್ ಕೃಷ್ಣ ಕೊಮ್ರಾ ಮತ್ತು ಕಾನ್‌ಸ್ಟೆಬಲ್ ಸಂಜಯ್ ಗಢ್‌ಪಾಲೆ ಎಂಬ ಮೂವರು ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾನ್‌ಸ್ಟೆಬಲ್ ಪರಮಾನಂದ ಕೊಮ್ರಾ ಅವರನ್ನು ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು