ಪಂಜಾಬ್​ನಲ್ಲಿ ನೀರಿನ ವಿವಾದ: 60 ಸುತ್ತಿನ ಗುಂಡಿನ ದಾಳಿ, ನಾಲ್ವರು ಸಾವು, 7 ಮಂದಿಗೆ ಗಾಯ

ಪಂಜಾಬ್‌ನಲ್ಲಿ ನೀರಿಗಾಗಿ ನಡೆದ ಸಂಘರ್ಷದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ನಾಲ್ವರೂ ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಪಂಜಾಬ್‌ನ ಗುರುದಾಸ್‌ಪುರದಲ್ಲಿ ಎರಡು ಬಣಗಳ ನಡುವೆ ವಾಗ್ವಾದ ನಡೆದಿದೆ. ಇಂದು ಬೆಳಗ್ಗೆ ಗುರುದಾಸ್‌ಪುರದ ವಿತ್ವಾ ಗ್ರಾಮದಲ್ಲಿ ಈ ದಾರುಣ ಘಟನೆ ನಡೆದಿದೆ. ಕೃಷಿ ಭೂಮಿಗೆ ಕಾಲುವೆ ನೀರು ಕೊಂಡೊಯ್ಯುವ ವಿವಾದದ ವೇಳೆ ಘರ್ಷಣೆ ನಡೆದಿದೆ.

ಪಂಜಾಬ್​ನಲ್ಲಿ ನೀರಿನ ವಿವಾದ: 60 ಸುತ್ತಿನ ಗುಂಡಿನ ದಾಳಿ, ನಾಲ್ವರು ಸಾವು, 7 ಮಂದಿಗೆ ಗಾಯ
ಗುಂಡಿನ ದಾಳಿ
Follow us
|

Updated on: Jul 08, 2024 | 11:12 AM

ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾನುವಾರ ರಾತ್ರಿ ಬಟಾಲದ ವಿತ್ವಾನ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎರಡು ಗುಂಪುಗಳಲ್ಲಿ ಒಟ್ಟು 13 ಜನರಿದ್ದರು. ಕಾರಿನ ಮೇಲೆ 60 ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ.

ಗುಂಡಿನ ದಾಳಿಯಲ್ಲಿ ಪ್ರತಿ ಗುಂಪಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್‌ನಲ್ಲಿ ನೀರಿಗಾಗಿ ನಡೆದ ಸಂಘರ್ಷದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕೃಷಿ ಭೂಮಿಗೆ ಕಾಲುವೆ ನೀರು ಕೊಂಡೊಯ್ಯುವ ವಿವಾದದ ವೇಳೆ ಘರ್ಷಣೆ ನಡೆದಿದೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಎದುರಾಳಿ ಬಣ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಇನ್ನೊಂದು ಬಣ 60 ಸುತ್ತು ಗುಂಡು ಹಾರಿಸಿದ್ದಾರೆ. ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಎರಡೂ ಕಡೆಯವರನ್ನು ಬಂಧಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪೊಲೀಸರು ಗಾಯಾಳುಗಳ ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ