AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ನಡೆದ​ ಎನ್​ಕೌಂಟರ್​ನಲ್ಲಿ ನಾಲ್ವರು ನಕ್ಸಲರ ಹತ್ಯೆ

ಜಾರ್ಖಂಡ್​ನಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದೆ. ಹತರಾದ ನಕ್ಸಲರಿಂದ ಭದ್ರತಾ ಪಡೆಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್, ಮಾತನಾಡಿ, ಶೋಧ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದರು.

ಜಾರ್ಖಂಡ್​ನಲ್ಲಿ ನಡೆದ​ ಎನ್​ಕೌಂಟರ್​ನಲ್ಲಿ ನಾಲ್ವರು ನಕ್ಸಲರ ಹತ್ಯೆ
ನಯನಾ ರಾಜೀವ್
|

Updated on:Jun 17, 2024 | 9:47 AM

Share

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ನಡೆಸಿದ ಜಂಟಿ  ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು(Naxals) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತರಾದ ನಕ್ಸಲರಿಂದ ಭದ್ರತಾ ಪಡೆಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.

ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್, ಮಾತನಾಡಿ, ಶೋಧ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದರು. ಕಳೆದ ವಾರ ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಸಿಪಿಐ (ಮಾವೋವಾದಿ) ಯ ವಿಭಜಿತ ಗುಂಪು ನಿಷೇಧಿತ ತೃತೀಯಾ ಸಮ್ಮೇಳನದ ಪ್ರಸ್ತುತಿ ಸಮಿತಿಯ (ಟಿಎಸ್‌ಪಿಸಿ) ಮೂವರು ಸದಸ್ಯರನ್ನು ಕಳೆದ ವಾರ ಬಂಧಿಸಿದ ನಂತರ ಈ ಘಟನೆ ನಡೆದಿದೆ.

ಛತ್ತೀಸ್‌ಗಢದ ಅಬುಜ್ಮಾರ್‌ನಲ್ಲಿ ಎನ್‌ಕೌಂಟರ್‌; 8 ನಕ್ಸಲರ ಹತ್ಯೆ

ಅಬುಜ್ಮಾರ್​ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 8 ನಕ್ಸಲರು ಹತರಾಗಿದ್ದಾರೆ. ಒಬ್ಬ ಯೋಧ ಪಟ್ಟಿದ್ದಾರೆ. ಇಬ್ಬರಿಗೆ ಗಾಯಗಳಾಗಿವೆ.

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಸುದೀರ್ಘ ಗುಂಡಿನ ಚಕಮಕಿ ನಡೆಯುತ್ತಿದೆ. ಅಬುಜ್ಮಾರ್ ನಾರಾಯಣಪುರ, ಬಿಜಾಪುರ ಜಿಲ್ಲೆ ಮತ್ತು ದಾಂತೇವಾಡ ಜಿಲ್ಲೆಗಳಲ್ಲಿ ಬರುವ ಗುಡ್ಡಗಾಡು, ಅರಣ್ಯ ಪ್ರದೇಶವಾಗಿದೆ. ಭೌಗೋಳಿಕವಾಗಿ ಪ್ರತ್ಯೇಕವಾದ ಮತ್ತು ಹೆಚ್ಚಾಗಿ ಪ್ರವೇಶಿಸಲಾಗದ ಈ ಪ್ರದೇಶವನ್ನು ಮಾವೋವಾದಿಗಳ ಚಟುವಟಿಕೆಗಳ ಕೇಂದ್ರವೆಂದು ಪರಿಗಣಿಸಲಾಗಿದೆ.

ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ 4 ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮಾರ್ ಅರಣ್ಯದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.

4 ಜಿಲ್ಲೆಗಳ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಸಿಬ್ಬಂದಿ, ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ (ಐಟಿಬಿಪಿ) 53 ನೇ ಬೆಟಾಲಿಯನ್ ಅನ್ನು ಒಳಗೊಂಡ ಕಾರ್ಯಾಚರಣೆಯನ್ನು ಜೂನ್ 12ರಂದು ಪ್ರಾರಂಭಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:46 am, Mon, 17 June 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ