ಮಧ್ಯಪ್ರದೇಶ: ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ್ರು
ಮಧ್ಯಪ್ರದೇಶದ ಇಂದೋರ್‌ನಲ್ಲಿ ವಿಜಯೋತ್ಸವದ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಿಸಿನೀರು ಎರಚಿದ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ವಿಜಯಯಾತ್ರೆ ನಡೆಸಲಾಯಿತು.

ಭಾನುವಾರ ರಾತ್ರಿ ಬಿಜೆಪಿ ಕಾರ್ಯಕರ್ತರ ಮೆರವಣಿಗೆ ವಕೀಲ ಪಠಾಣ್ ಎಂಬುವವರ ಮನೆಯ ಮೂಲಕ ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಖಜ್ರಾನಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಠಾಣ್ ಮೆರವಣಿಗೆಯನ್ನು ವಿರೋಧಿಸಿದರು ಮತ್ತು ವಾಗ್ವಾದವನ್ನು ಪ್ರಾರಂಭಿಸಿದರು. ನಂತರ ಅವರ ಮೇಲೆ ಹಲ್ಲೆ ನಡೆಸಿ ನಿಂದಿಸಿದರು ಎಂದು ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಮತ್ತಷ್ಟು ಓದಿ:ವಿಧಾನಸಭೆ ಚುನಾವಣೆ ಫಲಿತಾಂಶ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ ಬಿಜೆಪಿ ತೆಕ್ಕೆಗೆ, ತೆಲಂಗಾಣಕ್ಕೆ ಕಾಂಗ್ರೆಸ್ ‘ಗ್ಯಾರಂಟಿ’
ಅವರ ಪತ್ನಿ ಶಬನಂ ಅವರ ಮನವಿ ಮೇರೆಗೆ ಮನೆಯ ಮೇಲ್ಛಾವಣಿಯಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಕುದಿಯುವ ನೀರನ್ನು ಹಾಕಿದ್ದಾರೆ. ಪಠಾಣ್, ಅವರ ಪತ್ನಿ ಮತ್ತು ಅವರ ಇಬ್ಬರು ಪುತ್ರರ ವಿರುದ್ಧ ಭಾರತೀಯ ದಂಡ ಸಂಹಿತೆ 294, 323, 324 ಹಾಗೂ 506ರ ಅಡಿ ಆರೋಪ ಹೊರಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಖಜ್ರಾನಾ ಪೊಲೀಸ್ ಠಾಣೆಯ ಉಸ್ತುವಾರಿ ಉಮ್ರಾವ್ ಸಿಂಗ್ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ