ಮಹಾರಾಷ್ಟ್ರದಲ್ಲಿ ಎನ್​ಕೌಂಟರ್​, ಪೊಲೀಸರಿಂದ ನಾಲ್ವರು ನಕ್ಸಲರ ಹತ್ಯೆ

ಮಹಾರಾಷ್ಟ್ರದಲ್ಲಿ ಪೊಲೀಸರು ನಡೆಸಿದ ಎನ್​ಕೌಂಟರ್​ನಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಹೀಗಾಗಿ ಗಡ್ಚಿರೋಲಿ ಅರಣ್ಯದಲ್ಲಿ ಅಡಗಿ ಕೂತಿದ್ದರು.

ಮಹಾರಾಷ್ಟ್ರದಲ್ಲಿ ಎನ್​ಕೌಂಟರ್​, ಪೊಲೀಸರಿಂದ ನಾಲ್ವರು ನಕ್ಸಲರ ಹತ್ಯೆ
ನಕ್ಸಲರು-ಸಾಂದರ್ಭಿಕ ಚಿತ್ರ
Image Credit source: India TV

Updated on: Mar 19, 2024 | 9:18 AM

ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮಂಗಳವಾರ ಬೆಳಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರ ಪೊಲೀಸರು ಉತ್ತಮ ಯಶಸ್ಸನ್ನು ಸಾಧಿಸಿದ್ದಾರೆ, ನಾಲ್ವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಹೀಗಾಗಿ ಗಡ್ಚಿರೋಲಿ ಅರಣ್ಯದಲ್ಲಿ ಅಡಗಿ ಕೂತಿದ್ದರು. ಮಹಾರಾಷ್ಟ್ರ ಪೊಲೀಸರ ವಿಶೇಷ ಸಿ-60 ಕಮಾಂಡೋಗಳು ಮತ್ತು ಸಿಆರ್‌ಪಿಎಫ್ ಕಮಾಂಡೋಗಳು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿದರು.

ಬಳಿಕ ನಕ್ಸಲರಿಂದ ಕೆ 47 ರೈಫಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಕ್ಸಲರ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ, ಇವರನ್ನು ಹಿಡಿದುಕೊಟ್ಟವರಿಗೆ 36 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಗಡ್ಚಿರೋಲಿ ಮಹಾರಾಷ್ಟ್ರದ ನಕ್ಸಲ್ ಪೀಡಿತ ಪ್ರದೇಶವಾಗಿದೆ.

ಮತ್ತಷ್ಟು ಓದಿ: Chhattisgarh: ಕಂಕೇರ್​ನಲ್ಲಿ ಎನ್​ಕೌಂಟರ್​, ಮೂವರು ನಕ್ಸಲರ ಕೊಂದ ಯೋಧರು

ಛತ್ತೀಸ್‌ಗಢದ ನಕ್ಸಲ್ ಪೀಡಿತ ಕಂಕೇರ್ ಜಿಲ್ಲೆಯಲ್ಲಿ ಶನಿವಾರದಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್​ನನ್ನು ಹತ್ಯೆ ಮಾಡಲಾಗಿತ್ತು. ಕೊಯ್ಲಿಬೆರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಜಿಲ್ಲಾ ಮೀಸಲು ಪಡೆ ಮತ್ತು ಗಡಿ ಭದ್ರತಾ ಪಡೆಗಳ ಜಂಟಿ ತಂಡವನ್ನು ಕಳುಹಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us