AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೈತ್​ನಲ್ಲಿ ಅಗ್ನಿ ಅವಘಡ: ರಜೆ ಮುಗಿಸಿ ವಾಪಾಸ್ ಆಗಿದ್ದ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು

ಉದ್ಯೋಗಕ್ಕಾಗಿ ಕುವೈತ್‌ನ ಅಬ್ಬಾಸಿಯಾದಲ್ಲಿ ನೆಲೆಸಿದ್ದ ಕುಟುಂಬ ಕೇರಳದ ತಾಯಿಯ ಮನೆಗೆ ಹೋಗಿ ರಜೆ ಮುಗಿಸಿಕೊಂಡು ಬಂದು ರಾತ್ರಿ ಮಲಗಿದ್ದರು. ಆದರೆ ತಡರಾತ್ರಿ ಅಗ್ನಿ ದುರಂತ ಸಂಭವಿಸಿದ್ದು ಇಡೀ ಕುಟುಂಬ ಮೃತಪಟ್ಟಿದೆ. ಗಂಡ, ಹೆಂಡತಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಕುವೈತ್​ನಲ್ಲಿ ಅಗ್ನಿ ಅವಘಡ: ರಜೆ ಮುಗಿಸಿ ವಾಪಾಸ್ ಆಗಿದ್ದ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು
ಕುವೈತ್​ನಲ್ಲಿ ಅಗ್ನಿ ಅವಘಡ: ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು
ಆಯೇಷಾ ಬಾನು
|

Updated on: Jul 21, 2024 | 9:28 AM

Share

ಕೇರಳ, ಜುಲೈ.21: ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕೇರಳದ ಅಲಪ್ಪುಳ ಮೂಲದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ (Death) ಘಟನೆ ಕುವೈತ್‌ನ ಅಬ್ಬಾಸಿಯಾದಲ್ಲಿ ನಡೆದಿದೆ. ಮ್ಯಾಥ್ಯೂಸ್ ವರ್ಗೀಸ್ ಮುಳಕಲ್ (40), ಅವರ ಪತ್ನಿ ಲಿನಿ ಅಬ್ರಹಾಂ (35) ಮತ್ತು ಅವರ ಮಕ್ಕಳಾದ ಐರಿನ್ (14) ಮತ್ತು ಇಸಾಕ್ (9) ಮೃತ ದುರ್ದೈವಿಗಳು.

ಮ್ಯಾಥ್ಯೂ ಅವರು ಉದ್ಯೋಗಕ್ಕಾಗಿ ಕುವೈತ್‌ನ ಅಬ್ಬಾಸಿಯಾದಲ್ಲಿ ಕಳೆದ 15 ವರ್ಷಗಳಿಂದ ಕುಟುಂಬದೊಂದಿಗೆ ನೆಲೆಸಿದ್ದರು. ಲಿನಿ ಆರೋಗ್ಯ ಸಚಿವಾಲಯದ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಐರಿನ್ ಮತ್ತು ಇಸಾಕ್ 9 ಮತ್ತು 4 ನೇ ತರಗತಿಯಲ್ಲಿ ಓದುತ್ತಿದ್ದರು. ಶುಕ್ರವಾರ ರಾತ್ರಿ ಅವರು ಮಲಗುವ ಕೋಣೆಯಲ್ಲಿದ್ದ ಎ.ಸಿ ಯಂತ್ರದ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಇದರಿಂದ ಇಡೀ ಕುಟುಂಬ ಸಜೀವ ದಹನವಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪದವಿ ಪಡೆದ ಪವನ್ ಕಲ್ಯಾಣ್ ಪತ್ನಿ, ಎಷ್ಟು ಓದಿದ್ದಾರೆ ಗೊತ್ತೆ?

ಕೇರಳದ ಕೊಚ್ಚಿ ಬಳಿಯ ನೆಡುಂಬಸ್ಸರಿ ಮೂಲದವರಾದ ಮ್ಯಾಥ್ಯೂ ಮುಜಾಕಲ್ ತಾಯಿ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಕಳೆದ ಗುರುವಾರವಷ್ಟೇ ಅವರು ತಮ್ಮ ಮಕ್ಕಳು ಹಾಗೂ ಪತ್ನಿ ಜೊತೆ ರಜೆ ಮುಗಿಸಿಕೊಂಡು ಕುವೈತ್‌ಗೆ ತೆರಳಿದ್ದರು. ಶುಕ್ರವಾರ ಅಗ್ನಿ ದುರಂತ ಸಂಭವಿಸಿದೆ. ಮ್ಯಾಥ್ಯೂ ಕೇರಳದಿಂದ ಕುವೈತ್​ನ ಮನೆ ಬಂದ ಬಳಿಕ ತಾಯಿಗೆ ಕರೆ ಮಾಡಿ ನಾವು ಸುರಕ್ಷಿತವಾಗಿ ಮನೆ ತಲುಪಿದ್ದೇವೆ. ದಣಿದಿರುವುದರಿಂದ ವಿಶ್ರಾಂತಿ ಪಡೆಯಬೇಕೆಂದು ಹೇಳಿ ಮಲಗಿದ್ದರು. ಈ ವೇಳೆ ಘಟನೆ ಸಂಭವಿಸಿದೆ.

ಇನ್ನು ಬೆಂಕಿ ಅವಘಡದ ವೇಳೆ ನೆರೆಹೊರೆಯವರು ಅಗ್ನಿಶಾಮಕ ಮತ್ತು ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು ಅಗ್ನಿ ನಂದಿಸಿ ಕುಟುಂಬವನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಕೇರಳದಲ್ಲಿರುವ ಕುಟುಂಬದ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದೆ ಮತ್ತು ಪಾರ್ಥಿವ ಶರೀರವನ್ನು ಆದಷ್ಟು ಬೇಗ ಮನೆಗೆ ಕಳುಹಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಹೇಳಿದೆ. ಶನಿವಾರ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ